
ಬೆಂಗಳೂರು(ಅ.02): ಪತಿ ಸಾವಿನಿಂದ ಮನನೊಂದು ಇಬ್ಬರ ಮಕ್ಕಳ ಜತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
"
ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್‌ನ ವಸಂತ(40), ಯಶವಂತ್ (15) ಹಾಗೂ ನಿಶ್ಚಿತಾ (8) ಮೃತ ದುರ್ದೈವಿಗಳು. ಮನೆಯಲ್ಲಿ ತನ್ನ ಇಬ್ಬರು ಮಕ್ಕಳ ಜತೆ ವಸಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮನೆಗೆ ಸಂಬಂಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಿಎಂಟಿಸಿ(BMTC) ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿಯು ಕಳೆದ ವರ್ಷ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ಖಿನ್ನತೆಗೊಳಗಾಗಿದ್ದ ಅವರು, ಈ ಯಾತನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮಾಸ್ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ
ಒಂದೇ ಫ್ಯಾನ್‌ಗೆ ಮಗಳು ನಿಶ್ಚಿತಾ ಜತೆ ವಸಂತ ನೇಣು ಹಾಕಿಕೊಂಡಿದ್ದರೆ, ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಒಂಭತ್ತು ತಿಂಗಳ ಗಂಡು ಮಗು ಕೊಂದು ಪತ್ರಕರ್ತ ಶಂಕರ್ ಕುಟುಂಬದ ಪತ್ನಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ದುರಂತ ಮರೆಯುವ ಮುನ್ನವೇ ನಗರದ ಹೊರ ವಲಯದಲ್ಲಿ ತಾಯಿ ಮತ್ತು ಮಕ್ಕಳ ಆತ್ಮಹತ್ಯೆ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ