ಬೆಳಗಾವಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ

Published : Sep 17, 2020, 03:43 PM ISTUpdated : Sep 17, 2020, 03:45 PM IST
ಬೆಳಗಾವಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ

ಸಾರಾಂಶ

ನೇಣಿಗೆ ಶರಣಾದ ತಾಯಿ, ಮಗ| ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದ ಘಟನೆ| ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| 

ಬೆಳಗಾವಿ(ಸೆ.17): ತಾಯಿ, ಮಗ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.

ತಾಯಿ ಭಾರತಿ ಗರಾಣಿ(36), ಮಗ ಪ್ರಜ್ವಲ್(15) ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಭಾರತಿ ಗರಾಣಿ ಅವರು ಹಲಗಾ ಗ್ರಾಮದಲ್ಲಿ ಬೇಕರಿಯೊಂದನ್ನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. 

ಬಿಬಿಎಂಪಿ ಕ್ಯಾಂಟೀನ್‌ನಲ್ಲಿ ತೀವ್ರ ನಷ್ಟ: ಮಾಲೀಕ ಆತ್ಮಹತ್ಯೆ

ತಾಯಿ, ಮಗನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆಯಿಂದಷ್ಟೇ ಇವರ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಬ್ಬರು ಮಕ್ಕಳ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಅಪ್ಪನಿಗೇ 25 ಲಕ್ಷ ರೂ. ದಂಡ ಹಾಕಿದ ಹೈಕೋರ್ಟ್​
ಅಯ್ಯಯ್ಯೋ.. ಕೊಡಗಿನಲ್ಲಿ ಆಘಾತಕಾರಿ ಘಟನೆ: ತಾಯಿಯ ಅಕ್ರಮ ಸಂಬಂಧಕ್ಕೆ ಮಗು ಬಲಿ