ಸಾಲಭಾದೆ: ತಾಯಿ, ಮಗ ನೇಣಿಗೆ ಶರಣು

By Kannadaprabha News  |  First Published Oct 7, 2020, 10:12 AM IST

ತಾಯಿ-ಮಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ| ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದ ಘಟನೆ| ಸಾಲಭಾದೆಯಿಂದ ತಾಯಿ-ಮಗ ಆತ್ಮಹತ್ಯೆ ಶಂಕೆ| ತನಿಖೆ ಆರಂಭಿಸಿದ ಪೊಲೀಸರು| 
 


ಬೆಂಗಳೂರು(ಅ.07): ತಾಯಿ ಮತ್ತು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕೊಡಿಗೇಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಟರಾಯನಪುರ ನಿವಾಸಿ ಸುಮಿತ್ರಮ್ಮ (55) ಮತ್ತು ಶಿವರಾಜ್‌ (25) ಮೃತರು. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲ ವರ್ಷಗಳಿಂದ ತಾಯಿ ಮತ್ತು ಮಗ ಬ್ಯಾಟರಾಯನಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಂಗಳವಾರ ಸಂಜೆಯಿಂದ ಸುಮಿತ್ರ ಅವರಿಗೆ ಪುತ್ರಿ ಹಲವು ಬಾರಿ ಕರೆ ಮಾಡಿದ್ದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು ತಾಯಿ ಮನೆಗೆ ಬಂದು ನೋಡಿದಾಗ, ಒಳಗಿನಿಂದಲೇ ಬಾಗಿಲು ಲಾಕ್‌ ಮಾಡಲಾಗಿತ್ತು. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಯಿ ಮತ್ತು ಸಹೋದರ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

Tap to resize

Latest Videos

ಮೈಸೂರು; ಸಾಯುತ್ತೇನೆ ಎಂದು ಹೇಳ್ತಾ ಕೊನೆಗೂ ಎಣ್ಣೆ ಏಟಲ್ಲಿ ನೇಣು ಹಾಕ್ಕೊಂಡ!

ಈ ಕುರಿತು ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಕುಟುಂಬಸ್ಥರಿಂದ ಹೇಳಿಕೆ ಪಡೆದು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಮನೆಯಲ್ಲಿ ಯಾವುದೇ ರೀತಿಯ ಡೆತ್‌ನೋಟ್‌ ಪತ್ತೆಯಾಗಿಲ್ಲ. ಸಾಲಭಾದೆಯಿಂದ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಕ್ಕೆ ಕಂಡು ಬಂದಿದೆ.

ಈ ಬಗ್ಗೆ ಸುಮಿತ್ರಮ್ಮ ಅವರ ಪುತ್ರಿ ಕೂಡ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಊರಿನಲ್ಲಿ ಜಮೀನು ವ್ಯಾಜ್ಯ ಕೂಡ ಆಗಿತ್ತು ಎಂಬುದು ಗೊತ್ತಾಗಿದೆ. ಈ ಎಲ್ಲಾ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ಎಲ್ಲಾ ಆಯಮಾಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಹೇಳಿದ್ದಾರೆ.
 

click me!