
ಹಾಸನ (ಏ. 26) ಕೊರೋನಾ ದಿಂದ ತಾಯಿ ಸಾವು ಬದುಕಿನ ನಡುವೆ ಹೋರಾಟ ನೆಡೆಸುತ್ತಿದ್ದರೆ ನೊಂದ ಮಗ ಆಸ್ಪತ್ರೆಯ ಟೆರೆಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ, ವಾಟರ್ ಟ್ಯಾಂಕ್ ನ ಕಬ್ಬಿಣದ ಸರಳಿಗೆ ವೇಲ್ ನಿಂದ ನೇಣು ಹಾಕಿಕೊಂಡಿದ್ದಾನೆ.
ಹಾಸನದ ಹಿಮ್ಸ್ ಕೋವಿಡ್ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಶರತ್(30) ಆತ್ಮಹತ್ಯೆಗೆ ಶರಣಾದ ಯುವಕ. ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಮಾದ್ರೆ ಗ್ರಾಮದ ಯುವಕ ತಾಯಿಯನ್ನು ಚಿಕಿತ್ಸೆಗೆಂದು ದಾಖಲಿಸಿದ್ದ.
ಕರ್ನಾಟಕ ಲಾಕ್; ಏನಿರುತ್ತೆ? ಏನಿರಲ್ಲ?
60 ವರ್ಷದ ತಾಯಿ ಕೊರೋನಾ ಪಾಸಿಟಿವ್ ಹಿನ್ನೆಲೆ ಮೂರು ದಿನಗಳಿಂದ ಅಡ್ಮಿಟ್ ಮಾಡಲಾಗಿತ್ತು. ಕೊರೋನಾ ಎರಡನೇ ಅಲೆ ಆರ್ಭಟಿಸುತ್ತಿದ್ದು ಕೊರೋನಾ ವಾರಿಯರ್ಸ್ ಗಳು ಸಹ ಚೀನಾ ವೈರಸ್ ಗೆ ಬಲಿಯಾಗುತ್ತಿದ್ದಾರೆ.
ರಾಜ್ಯ ಸರ್ಕಾರ ಹದಿನಾಲ್ಕು ದಿನಗಳ ಕೊರೋನಾ ನಿಷೇಧಾಜ್ಞೆಗೆ ಸಿದ್ಧತೆ ಮಾಡಿಕೊಂಡಿದೆ. ಇನ್ನೊಂದು ಕಡೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆ ಹಾದಿಯಲ್ಲೇ ಸಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ