
ಲಕ್ನೌ(ಆ. 09) ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಪೊಲೀಸರು ಪಾತಕಿ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಸಹಚರನನ್ನು ಎನ್ ಕೌಂಟರ್ ಮಾಡಿದ್ದಾರೆ.
ರಾಕೇಶ್ ಪಾಂಡೆ ಅಲಿಯಾಸ್ ಹನುಮಾನ್ ಪಾಂಡೆ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಸರೋಜಿನಿನಗರದಲ್ಲಿ ಎನ್ ಕೌಂಟರ್ ನಡೆದಿದ್ದು ಅನ್ಸಾರಿ ಮತ್ತು ಮುನ್ನಾ ಭಜರಂಗಿ ಶಿಷ್ಯನಾಗಿ ಗುರುತಿಸಸಿಕೊಂಡಿದ್ದ ಪಾಂಡೆ ಶಾರ್ಪ್ ಶೂಟರ್ ಆಗಿದ್ದ.
6 ವರ್ಷದ ಬಾಲಕಿ ಮೇಲೆ ರೇಪ್; ಗುಪ್ತಾಂಗಕ್ಕೆ ಗಾಯ ಮಾಡಿದ ಪಿಶಾಚಿ
2005 ರ ನವೆಂಬರ್ 29 ರಂದು ನಡೆದಿದ್ದ ಮೊಹಮ್ಮದಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ರಾಗಿದ್ದ ಕೃಷ್ಣಾನಂದ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ಜೈಲಿನಲ್ಲಿದ್ದಾನೆ. ಪೊಲೀಸರ ಗುಂಡಿಗೆ ಬಲಿಯಾಗಿರುವ ಪಾಂಡೆ ತಲೆಗೆ ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಗಾಯಗೊಂಡಿದ್ದ ಪಾಂಡೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಾವಿನಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ಪಾಂಡೆ ಅನ್ಸಾರಿ ಗ್ಯಾಂಗ್ ನಲ್ಲಿ 23 ವರ್ಷಗಳಿಂದ ಗುರುತಿಸಿಕೊಂಡಿದ್ದ. ಇನ್ನೊಬ್ಬ ಗ್ಯಾಂಗ್ ಸ್ಟರ್ ಎಂಬಾತನನ್ನು ಮತ್ತೊಬ್ಬ ಗ್ಯಾಂಗ್ ಸ್ಟರ್ ಸಿನೀಲ್ ರಾಥಿ 2018 ರಲ್ಲಿ ಹೊಡೆದುಹಾಕಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ