
ಬೆಂಗಳೂರು (ನ.18): ಮುಂಬೈನ ಬಿಲ್ಡರ್ ರಾಜು ಪಾಟೀಲ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ವಶಕ್ಕೆ ನೀಡುವಂತೆ ನಗರದ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರವಿರುವುದರಿಂದ ಆತನನ್ನು ವಿಚಾರಣೆ ನಡೆಸಲು ವಶಕ್ಕೆ ನೀಡಬೇಕು ಎಂದು ಮುಂಬೈ ಪೊಲೀಸರು, ನಗರದ 62ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಧೀಶರು ಆರೋಪಿಯನ್ನು ಹತ್ತು ದಿನಗಳ ಕಾಲ ಮುಂಬೈ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಪ್ರಸ್ತುತ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆಯಲಿದ್ದು, ತನಿಖೆಯ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ವಹಿಸಲಿದ್ದಾರೆ.
ಹಲವು ಕೊಲೆ, ಕೊಲೆ ಯತ್ನ ಹಾಗೂ ಜೀವ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ಅಡಗಿದ್ದ ರವಿ ಪೂಜಾರಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈವರೆಗೆ ಎರಡು ಪ್ರಕರಣಗಳಲ್ಲಿ ಆತನ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ