ಕಾರವಾರ: ಆಕಸ್ಮಿಕ ಬೆಂಕಿ, ಒಂಟಿ ಜೀವನ ಸಾಗಿಸುತ್ತಿದ್ದ 70 ವರ್ಷದ ವೃದ್ಧೆ ಸಜೀವ ದಹನ!

Published : Nov 15, 2025, 08:19 PM IST
Elderly woman dies in fire

ಸಾರಾಂಶ

ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ, ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಫಕ್ಕೀರವ್ವ ರಾಮಣ್ಣ ಆಲೂರು ಎಂಬ ವೃದ್ಧೆ ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಜೀವ ದಹನಗೊಂಡಿದ್ದಾರೆ.  ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವು

ಕಾರವಾರ, ನ(. 15):  ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯಲ್ಲಿದ್ದ ವೃದ್ಧ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.

ಫಕ್ಕೀರವ್ವ ರಾಮಣ್ಣ ಆಲೂರು (70), ಬೆಂಕಿಯಲ್ಲಿ ಸಜೀವ ದಹನಗೊಂಡು ಮೃತಪಟ್ಟಿರುವ ವೃದ್ಧೆ. ಮನೆಯಲ್ಲಿ ಸಂಬಂಧಿಕರು ಬಂಧು-ಬಳಗ ಯಾರೂ ಇಲ್ಲದೆ ಒಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.

ಆಕಸ್ಮಿಕ ಬೆಂಕಿಗೆ ಸಜೀವ ದಹನ:

ವೃದ್ಧೆ ಫಕ್ಕೀರವ್ವ ಅವರು ತಮ್ಮ ಮನೆಯಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಗಮನಕ್ಕೆ ಬಂದಿಲ್ಲ. ಮೈಮೇಲಿನ ಬಟ್ಟೆಗೆ ಹರಡಿ ವೃದ್ಧೆಯ ದೇಹ ಸಂಪೂರ್ಣವಾಗಿ ಸುಟ್ಟುಹೋಗಿದೆ. ಈ ಸಮಯದಲ್ಲಿ ಅವರು ಅರೆಜೀವದಲ್ಲಿದ್ದರು. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ನಿಯಂತ್ರಣಕ್ಕೆ ಬಂದರೂ, ಫಕ್ಕೀರವ್ವ ಅವರ ದೇಹದ ಭಾಗ ಸಂಪೂರ್ಣ ಸುಟ್ಟುಹೋಗಿತ್ತು. 

ಚಿಕಿತ್ಸೆ ಫಲಿಸದೇ ಫಕೀರವ್ವ ಸಾವು

ತಕ್ಷಣ 108 ಆಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಗಾಯಗಳ ತೀವ್ರತೆಯಿಂದಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ತುರ್ತು ವರ್ಗಾಯಿಸಲಾಯಿತು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೇ ಫಕ್ಕೀರವ್ವ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ