
ಬೆಂಗಳೂರು (ಮಾ.16): ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಹೋಗಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೆರುಘಟ್ಟ ರಸ್ತೆಯ ಗುಳುಕಮಲೆ ಬಳಿ ನಡೆದಿದೆ.
ಸೋಮೇಶ್ ಬಂಧಿತ ಆರೋಪಿ. ನಾಲ್ಕೈದು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪಾತಕಿ ಸೋಮೇಶ್. ನಿನ್ನೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಕೊಲೆ ನಡೆದ ಸ್ಥಳದ ಮಹಜರು ನಡೆಸಲು ಆರೋಪಿಯೊಂದಿಗೆ ಬಂದಿದ್ದ ಪೊಲೀಸರು.
ಹೋಟೆಲ್ ನಲ್ಲಿ ಉಜ್ಬೇಕಿಸ್ತಾನ ಯುವತಿಯ ಕೊಲೆ ಪ್ರಕರಣ - ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ
ಸ್ಥಳ ಪರಿಶೀಲನೆ ವೇಳೆ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿರುವ ಆರೋಪಿ. ಈ ವೇಳೆ ಆತ್ಮರಕ್ಷಣೆಗಾಗಿ ಕಗ್ಗಲೀಪುರ ಇನ್ಸ್‌ಪೆಕ್ಟರ್ ಸುಂದರ್ ರಿಂದ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು. ಸ್ಥಳಕ್ಕೆ ರಾಮನಗರ ಡಿವೈಎಸ್‌ಪಿ ದಿನಕರ್ ಶೆಟ್ಟಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿಟೆಕ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ವಿವಿ ಕುಲಪತಿ ಸೇರಿ 7 ಜನರ ವಿರುದ್ಧ ಎಫ್‌ಐಆರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ