Mangaluru Crime: ಮಂಗಳೂರಿನ ಕಾಟಿಪಳ್ಳದ ಜಲೀಲ್ ಹತ್ಯೆ: ಮೂವರು ಆರೋಪಿಗಳ ಬಂಧನ

By Sathish Kumar KH  |  First Published Dec 26, 2022, 4:03 PM IST

ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 14 ದಿನಗಳ ಕಾಲ ಪೊಲೀಸರಿಗೆ ಒಪ್ಪಿಸಿದೆ.



ವರದಿ- ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಮಂಗಳೂರು (ಡಿ.26): ಶನಿವಾರ ರಾತ್ರಿ ನಡೆದ ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 14 ದಿನಗಳ ಕಾಲ ಪೊಲೀಸರಿಗೆ ಒಪ್ಪಿಸಿದೆ.

Tap to resize

Latest Videos

ಶೈಲೇಶ್ ಪೂಜಾರಿ ಅಲಿಯಾಸ್ ಶೈಲು (21), ಸುವಿನ್ ಕಾಂಚನ್ (25) ಮತ್ತು ಪಚ್ಚು ಅಲಿಯಾಸ್ ಪವನ್ (26) ಬಂಧಿತರು.‌ ಈ ಪೈಕಿ ಶೈಲೇಶ್ ಮತ್ತು ಸುವಿನ್ ಕಾಂಚನ್ ಎಂಬವರು ಪಿಂಕಿ ನವಾಜ್ ಎಂಬಾತನ ಕೊಲೆ ಯತ್ನ ಪ್ರಕರಣದ ಆರೋಪಿಗಳು ಆಗಿದ್ದಾರೆ. ಅಂದರೆ 2018ರಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಪಿಂಕಿ ನವಾಜ್‌ನನ್ನು ಕೊಲೆ ಮಾಡಲು 2021ರ ಫೆ.10ರಂದು ಹತ್ಯೆ ಮಾಡಲು ಯತ್ನ ಮಾಡಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇಶವ ಪೂಜಾರಿ ಪುತ್ರನ ಬಂಧನ: ಇನ್ನು ಶೈಲೇಶ್ ಪೂಜಾರಿ ಹಲವು ವರ್ಷಗಳ ಹಿಂದೆ ನಡೆದ ರವೂಫ್ ಎಂಬಾತನ ಕೊಲೆ ಆರೋಪಿಯ ಪುತ್ರನಾಗಿದ್ದಾನೆ. ಸುಮಾರು ವರ್ಷಗಳ ಹಿಂದೆ ಕಾಟಿಪಳ್ಳದಲ್ಲಿ ನಡೆದಿದ್ದ ರವೂಫ್ ಹತ್ಯೆ ಪ್ರಕರಣದಲ್ಲಿ ಈಗಿನ ಆರೋಪಿ ಶೈಲೇಶ್‌ ಅವರ ತಂದೆ ಕೇಶವ ಪೂಜಾರಿ ಪ್ರಮುಖ ಆರೋಪಿಯಾಗಿದ್ದರು. ಈಗ ಮತ್ತೆ ಧರ್ಮದಂಗಲ್‌ ಶುರುವಾಗಿದ್ದು, ಪರಸ್ಪರ ಕೋಮು ದಳ್ಳುರಿಯಿಂದ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ಸುರತ್ಕಲ್‌ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Mangaluru crime: ಜಲೀಲ್‌ ಹತ್ಯೆ ಪ್ರಕರಣ : ಐವರ ವಿಚಾರಣೆ

ಸಂಪೂರ್ಣ ತನಿಖೆ ಬಳಿಕ ಕಾರಣ ಗೊತ್ತಾಗುತ್ತೆ: ಮಂಗಳೂರಿನ ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದೇವೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ.‌ 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತೇವೆ ಎಂದು ತಿಳಿಸಿದರು.

Mangaluru Crime: ಕಾಟಿಪಳ್ಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು: ಜಲೀಲ್‌ ಮೃತ ದೇಹವನ್ನಿಟ್ಟು ಧರಣಿ

ಕೊಲೆಗೆ ಕಾರಣ ತಿಳಿದಿಲ್ಲ:
ಕಾಟಿಪಳ್ಳದ ಜಲೀಲ್ ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ಬಳಿಕ ಹೇಳುತ್ತೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದರು.

click me!