* ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದ ಘಟನೆ
* ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ
* ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹರಪನಹಳ್ಳಿ(ಜು.16): ಸ್ಥಳೀಯ ಆರ್‌ಟಿಐ ಕಾರ್ಯಕರ್ತ ಟಿ. ಶ್ರೀಧರ (40) ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಇಲ್ಲಿಯ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿರುವ ಕ್ಯಾಂಟಿನ್ ಬಳಿ ಶ್ರೀಧರ್ ಕುಳಿತಿದ್ದಾಗ ದುಷ್ಕರ್ಮಿಗಳು ದಿಢೀರೆಂದು ಆಗಮಿಸಿ ರಾಡ್‌ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆಂದು ಹೇಳಲಾಗಿದೆ.
ಕೂಡಲೇ ಆ್ಯಂಬುಲೆನ್ಸ್‌ನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದಾಗ ದಾರಿ ಮಧ್ಯೆದಲ್ಲೇ ಸಾವಿಗೀಡಾಗಿರುವುದು ಗೊತ್ತಾಗಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಯಲ್ಲಾಪುರ: ಪರ ಪುರುಷನ ಸಂಗಕ್ಕೆ ಅಡ್ಡಿಯಾದ ಗಂಡನನ್ನೇ ಕೊಂದ ಹೆಂಡ್ತಿ..!
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಕೊಲೆ ಸುದ್ದಿ ಪಟ್ಟಣದಲ್ಲಿ ಹಬ್ಬುತ್ತಿದ್ದಂತೆ ಸಾರ್ವಜನಿಕ ಆಸ್ಪತ್ರೆಗೆ ಸಾಕಷ್ಟು ಜನರು ಧಾವಿಸಿ ಬಂದು ಗುಂಪು ಗುಂಪಾಗಿ ಸೇರತೊಡಗಿದರು. ಸಾಕಷ್ಟು ಜನರು ಸೇರತೊಡಗಿರುವುದನ್ನು ಗಮನಿಸಿದ ಡಿವೈಎಸ್ಪಿ ಹಾಲಮೂರ್ತಿರಾವ್, ಸಿಪಿಐ ನಾಗರಾಜ ಕಮ್ಮಾರ ಅವರು ವಿವಿಧ ಠಾಣೆಗಳಿಂದ ಪಿಎಸ್‌ಐಗಳು ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆಸಿ ಬಂದೋಬಸ್ತ್ ಕೈಗೊಂಡರು.