Murugha Sri Case: ಮುರುಘಾ ಶ್ರೀಗಿಲ್ಲ ಬಿಡುಗಡೆ ಭಾಗ್ಯ: 14 ದಿನ ಮತ್ತೆ ನ್ಯಾಯಾಂಗ ಬಂಧನಕ್ಕೆ

By Sharath Sharma Kalagaru  |  First Published Sep 14, 2022, 1:22 PM IST

Judicial Custody Extended to Murugha Mutt pontiff: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಅವರ ನ್ಯಾಯಾಂಗ ಬಂಧನ ಮುಂದುವರೆಸಿ ನ್ಯಾಯಾಲಯ ಆದೇಶ ನೀಡಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದು ಜಾಮೀನು ಅರ್ಜಿ ವಜಾ ಮಾಡಲಾಗಿದೆ.


ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಗೆ ಇಂದೂ ಬಿಡುಗಡೆ ಭಾಗ್ಯವಿಲ್ಲ. ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಜಾಮೀನಿನ ನಿರೀಕ್ಷೆಯಲ್ಲಿ ಶ್ರೀಗಳಿಗೆ ಬಿಡುಗಡೆ ಮರೀಚಿಕೆಯಾಗಿದೆ. ಕಳೆದ ಹದಿನಾಲ್ಕು ದಿನಗಳಿಂದ ಮುರುಘಾ ಶ್ರೀ ಜಿಲ್ಲಾ ಕಾರಾಗೃಹದಲ್ಲಿದ್ದರು. ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದರೂ ವಿಚಾರಣೆ ಕೈಗೆತ್ತಿಕೊಳ್ಳದೇ ಮುಂದೂಡಲಾಗಿತ್ತು. 

ಏನಿದು ಪ್ರಕರಣ?:

Tap to resize

Latest Videos

ಕಳೆದ ವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ. 

ಇದನ್ನೂ ಓದಿ: Murugha Mutt Row: ಇದು ಕ್ರಿಶ್ಚಿಯನ್ ಮಿಷನರಿಗಳ ಷಡ್ಯಂತ್ರ: ಮುರುಘಾ ಮಠದ ಆಪ್ತ ಜಿತೇಂದ್ರ ಆರೋಪ

ಪುರುಷತ್ವ ಪರೀಕ್ಷೆ:

ಬಂಧನದ ನಂತರ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆ ಸೇರಲು ಮುಂದಾಗಿದ್ದ ಮುರುಘಾ ಶರಣರಿಗೆ (Murugha Mutt Shivacharya) ಕೋರ್ಟ್‌ ಶಾಕ್‌ ನೀಡಿತ್ತು. ಹದಿನಾಲ್ಕು ದಿನ ನ್ಯಾಯಾಂಗ ಬಂಧನದ ಬದಲು, ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಪ್ರಕರಣ ದಾಖಲಾಗಿ ಒಂದು ವಾರವಾದರೂ ಬಂಧನವಾಗದಿದ್ದಾಗ ಪ್ರಕರಣದಿಂದ ಶರಣರು ಬಚಾವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಪ್ರತಿಭಟನೆಗಳು ಹೆಚ್ಚಿದ ನಂತರ ಪೊಲೀಸರು ಶ್ರೀಗಳನ್ನು ಬಂಧಿಸಿದ್ದರು. ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಶಿವಾಚಾರ್ಯ ಶರಣರ ಪುರುಷತ್ವ ಪರೀಕ್ಷೆ ಮಾಡಿದ್ದಾರೆ. ವರದಿಯಲ್ಲಿ ಶರಣರು ಗಂಡಸತ್ವ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಶರಣರ ಡಿಎನ್‌ಎ, ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪಡೆದಿದೆ. 

ಇದನ್ನೂ ಓದಿ: ಜೈಲು ಸೇರಿದ ಮುರುಘಾ ಶರಣರ ವಿರುದ್ಧ ಮತ್ತೊಂದು ಬಾಂಬ್, ವಿಡಿಯೋ ಇದೆ ಎಂದ ಒಡನಾಡಿ!

ಮೂಲಗಳ ಪ್ರಕಾರ, ನಿನ್ನೆ ಸಂಜೆಯೇ ಶಿವಾಚಾರ್ಯರಿಗೆ ಪುರುಷತ್ವ ಪರೀಕ್ಷೆ (Shivacharya Seer undergoes fertility test) ನಡೆಸಲಾಗಿತ್ತು. ಇಂದು ಬೆಳಗ್ಗೆಯೇ ಈ ಸಂಬಂಧ ವರದಿಯನ್ನು ಕೂಡ ನೀಡಲಾಗಿದೆ. ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಈ ಹಿಂದೆ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಪುರುಷನಲ್ಲ ಎಂದು ಅಫಿಡವಿಟ್‌ ಸಲ್ಲಿಸಿದರೆ ಮಾತ್ರ ಪರೀಕ್ಷೆಗೊಳಪಡಿಸಲಾಗುತ್ತಿತ್ತು. ನಿತ್ಯಾನಂದ ಪ್ರಕರಣದಲ್ಲಿ ಇದೇ ರೀತಿ ಅಫಿಡವಿಟ್‌ ಸಲ್ಲಿಕೆಯ ನಂತರ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಅಸಾರಾಂ ಬಾಪುವನ್ನು ಕೂಡ ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. 

ಆದರೆ ಇತ್ತೀಚಿನ ಪ್ರಕರಣಗಳಲ್ಲಿ, ಕಡ್ಡಾಯವಾಗಿ ಪುರುಷತ್ವ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞ ಡಾ. ಗಿರೀಶ್‌ ಏಷ್ಯಾನೆಟ್‌ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕಾಗಿ ಮುರುಘಾ ಶರಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಇದನ್ನೂ ಓದಿ: ಮಹಿಳೆಯರ ಸಂಭಾಷಣೆಯಲ್ಲಿ ಕೇಳಿಬಂದ ಆರೋಪ: ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ

ವಿಡಿಯೋ ಸಾಕ್ಷಿಯಿದೆ ಎಂದ ಒಡನಾಡಿ ಸಂಸ್ಥೆ:

ಶ್ರೀಗಳ ವಿರುದ್ಧ ಒಡನಾಡಿ ಸಂಸ್ಥೆ ಮತ್ತೊಂದು ಗಂಭೀರ ಆರೋಪ ಮಾಡಿದೆ.  ಮರುಘಾ ಶ್ರೀಗಳ ಲೈಂಗಿಕ ದೌರ್ಜನ್ಯವನ್ನು ಮಾಜಿ ಕಿರಿಯ ಶ್ರೀಗಳು ನೋಡಿದ್ದಾರೆ. ಸ್ವಾಮೀಜಿ ಹಲವು ಮಕ್ಕಳ ಗರ್ಭಕೋಶ ತೆಗೆದಿದ್ದಾರೆ ಎಂದು ಒಡನಾಡಿ ನಿರ್ದೇಶಕ ಪರಶುರಾಮ್ ಆರೋಪಿಸಿದ್ದಾರೆ. ‘ಮಠದ ಮಾಜಿ ಕಿರಿಯ ಶ್ರೀ ಶರಣಾನಂದ ಸ್ವಾಮೀಜಿಗಳೇ ಈ ಕುರಿತು ಹೇಳಿಕೆ ನೀಡಿದ್ದಾರೆ ಎಂದು ಪರಶುರಾಮ್ ಆರೋಪಿಸಿದ್ದಾರೆ. ‘ಶ್ರೀಗಳ ಲೈಂಗಿಕ ದೌರ್ಜನ್ಯದ ವೀಡಿಯೋ ಇದೆ ಎಂದಿದ್ದಾರೆ. ’ನಾನು ಸರ್ಕಾರದ ಮುಂದೆ ಪರಿಸ್ಥಿತಿ ಬಿಚ್ಚಿಟ್ಟಿದ್ದೇನೆ. ಸಮಗ್ರ ತನಿಖೆಯಾಗಲಿ ಎಂದು ಒಡನಾಡಿ ನಿರ್ದೇಶಕ ಪರಶುರಾಮ್ ಆಗ್ರಹಿಸಿದ್ದಾರೆ.

 

click me!