ನಾಲ್ವರು ಹಂತಕರಿಂದ ನಾಸಿಕ್‌ನಲ್ಲಿ ಮುಸ್ಲಿಂ ಧರ್ಮಗುರುವಿನ ಹತ್ಯೆ!

By Santosh NaikFirst Published Jul 6, 2022, 4:18 PM IST
Highlights

ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದ ಖಾಲಿ ಜಾಗದಲ್ಲಿ ಮಂಗಳವಾರ ಸಂಜೆ 'ಸೂಫಿ ಬಾಬಾ' ಎಂದು ಕರೆಯಲ್ಪಡುವ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಮುಂಬೈ (ಜುಲೈ 6): ಮಹಾರಾಷ್ಟ್ರದ  (Maharashtra) ನಾಸಿಕ್ (Nasik) ಜಿಲ್ಲೆಯ ಯೋಲಾ (Yola) ಪಟ್ಟಣದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡ, ಮಂಗಳವಾರ ಅಫ್ಘಾನಿಸ್ತಾನ (Afghanistan ) ಮೂಲದ 35 ವರ್ಷದ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡನನ್ನು ಗುಂಡಿಕ್ಕಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ಕಾರಣವೇನು ಎನ್ನುವ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಮುಂಬೈನಿಂದ 200 ಕಿಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದಲ್ಲಿನ ಖಾಲಿ ಜಾಗದಲ್ಲಿ ಸಂಜೆಯ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಖ್ವಾಜಾ ಸಯ್ಯದ್ ಚಿಶ್ತಿ (Khwaja Sayyad Chishti)ಎಂದು ಗುರುತಿಸಲಾಗಿದ್ದು, ಯೋಲಾದಲ್ಲಿ 'ಸೂಫಿ ಬಾಬಾ' (Sufi Baba) ಎನ್ನುವ ಹೆಸರಿನಿಂದಲೇ ಜನಪ್ರಿಯರಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿಕೋರರು ಅವರ ಹಣೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದರ ನಡುವೆ ಪೊಲೀಸರು ಸಯ್ಯದ್ ಚಿಶ್ತಿ ಕಾರಿನ ಡ್ರೈವರ್‌ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನದ ಪ್ರಜೆಯಾಗಿರುವ ಸೂಫಿ ಬಾಬಾನನ್ನು ಕೊಂದ ನಂತರ, ದುಷ್ಕರ್ಮಿಗಳು ಅವರು ಬಳಸುತ್ತಿದ್ದ ಎಸ್ಯುವಿಯನ್ನು ವಶಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಯೋಲಾ ಪೊಲೀಸ್ ಠಾಣೆಯಲ್ಲಿ ಕೊಲೆಯ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹಂತಕರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಎಸ್‌ಪಿ ಸಚಿನ್ ಪಾಟೀಲ್ ಮಾತನಾಡಿದ್ದು,  ಸೂಫಿ ಬಾಬಾ ಮಂಗಳವಾರ ನಗರದ ಎರಡ್ಮೂರು ಕಡೆ ಹೋಗಿ ಊಟ ಮಾಡಿದ್ದರು. ಕೊಲೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 3 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಆಸ್ತಿ ವಿವಾದದಲ್ಲಿ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ.

Chikkodi: ಹೆತ್ತ ಮಗಳನ್ನು ಕೊಲೆ ಮಾಡಿದ ತಂದೆಗೆ ಜೀವಾವಧಿ: ಕೋರ್ಟ್​​ನಿಂದ ಮಹತ್ವದ ತೀರ್ಪು!

ಹಣಕಾಸಿನ ವಿವಾದಕ್ಕಾಗಿ ಕೊಲೆ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಸೂಫಿ ಬಾಬಾ ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸೂಫಿ ಖ್ವಾಜಾ ಸೈಯದ್ ಜರೀಬ್ ಚಿಶ್ತಿ ಆಫ್ಘನ್ ಧರ್ಮಗುರು ಎಂಬುದು ಪ್ರಾಥಮಿಕ ಮಾಹಿತಿಯಾಗಿದೆ. ಈ ಬಗ್ಗೆ ಪೊಲೀಸರು ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಂತಕರ ಹುಡುಕಾಟದಲ್ಲಿ ತೊಡಗಿದ್ದಾರೆ.

ಚಂದ್ರಶೇಖರ ಗುರೂಜಿ ಕೊಲೆಯ ಹಿಂದಿನ ಇನ್‌ಸೈಡ್ ಸ್ಟೋರಿ..!

''ಆರೋಪಿಗಳು ಮತ್ತು ಕೊಲೆಯಾದ ವ್ಯಕ್ತಿ ಒಂದೇ ವಾಹನದಲ್ಲಿ ಬಂದಿದ್ದಾರೆ. ಯೋಲಾದಲ್ಲಿ ಎರಡ್ಮೂರು ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಊಟ ಮಾಡಿದ್ದರು. ಇದಾದ ನಂತರ ಚಾಲಕ ಮತ್ತು ಇತರ ಆರೋಪಿಗಳು  ಎಂಐಡಿಸಿಯಲ್ಲಿ ತಾವು ಖರೀದಿಸಬೇಕಾದ ಜಾಗದಲ್ಲಿ ಪೂಜೆ ನಡೆಸಬೇಕಾಗಿದೆ ಎಂದು ಹೇಳಿ ಅಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ ಚಿಸ್ತಿ ಕಾರಿನಲ್ಲಿ ಕುಳಿತಿದ್ದ ವೇಳೆ ಅವರ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ' ಎಂದು ಸಚಿನ್‌ ಪಾಟೀಲ್‌ ಮಾಹಿತಿ ನೀಡಿದ್ದಾರೆ.

click me!