ಡೈರಿ ಮಿಲ್ಕ್ ಚಾಕಲೇಟ್ ನೀಡಿಕೆ: ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ, ದೂರು ಪ್ರತಿ ದೂರು ದಾಖಲು

By Govindaraj S  |  First Published Jan 10, 2024, 10:23 PM IST

ಡೈರಿ ಮಿಲ್ಕ್ ಚಾಕಲೇಟ್ ಕೊಟ್ಟ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ (ಮಂಗಳವಾರ ) ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಯುವಕರ ನಡುವೆ ನಡೆದಿರುವ ಗಲಾಟೆ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದಾಖಲಿಸಲಾಗಿದೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.10): ಡೈರಿ ಮಿಲ್ಕ್ ಚಾಕಲೇಟ್ ಕೊಟ್ಟ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ (ಮಂಗಳವಾರ ) ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಯುವಕರ ನಡುವೆ ನಡೆದಿರುವ ಗಲಾಟೆ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರು ದಾಖಲಿಸಲಾಗಿದೆ. ಅನ್ಯಕೋಮಿನ ಯುವಕರ ನಡುವೆ ನಡೆದಿದ್ದ ಗಲಾಟೆಯಿಂದ ಪಟ್ಟಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಮೂಡಿಗೆರೆ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ.

Tap to resize

Latest Videos

undefined

ಯುವಕರ ವಿರುದ್ದ ಪ್ರಕರಣ: ಮೂಡಿಗೆರೆ ಪಟ್ಟಣದಲ್ಲಿ ಹಿಂದೂ ಯುವತಿಗೆ ಅನ್ಯ ಕೋಮಿನ ಯುವಕ ಚಾಕ್ಲೇಟ್ ನೀಡುತ್ತಿದ್ದ ಎಂಬ ಕಾರಣಕ್ಕೆ ಯುವಕರು ಅನ್ಯ ಕೋಮಿನ ಯುವಕರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ಹಲ್ಲೆಗೈದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಗುಂಪು ಘರ್ಷಣೆ, ದೊಂಬೆ, ಆಯುಧಗಳಿಂದ ಗಲಾಟೆ, ಅವಾಚ್ಯ ಶಬ್ಧಗಳ ನಿಂದನೆ, ಜೀವ ಬೆದರಿಕೆಯ ಪ್ರಕರಣ ದಾಖಲಾಗಿದೆ. ನಿನ್ನೆ ಸಂಜೆ(ಮಂಗಳವಾರ ) ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕ ಚಾಕ್ಲೇಟ್ ನೀಡುತ್ತಿದ್ದ ಎಂಬ ಕಾರಣಕ್ಕೆ ನಾಲ್ಕೈದು ಯುವಕರು ಅನ್ಯ ಕೋಮಿನ ಯುವಕನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದರು. ಯುವಕರ ಈ ಗಲಾಟೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹಲ್ಲೆಗೊಳಗಾದ ಯುವಕರು ಆಸ್ಪತ್ರೆಗೆ ದಾಖಲಾಗಿದ್ದರು. ಸ್ಥಳಕ್ಕೆ ಬಂದ ಮೂಡಿಗೆರೆ ಪೊಲೀಸರು ಐವರು ಯುವಕರನ್ನ ವಶಕ್ಕೆ ಪಡೆದಿದ್ದರು. ಯುವಕರ ಈ ನೈತಿಕ ಪೊಲೀಸ್ ಗಿರಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರೆಸಾರ್ಟ್‌ನಲ್ಲಿ ಮಾಜಿ ಸಿಎಂ ಎಚ್‌ಡಿಕೆ ತಂತ್ರಗಾರಿಕೆ: ರಾಜಕೀಯ ಲೆಕ್ಕಚಾರದಲ್ಲಿ ಕುಮಾರಸ್ವಾಮಿ!

ಬಸ್ ನಿಲ್ದಾಣದ ಟಿಸಿ ಸಮಯ ಪ್ರಜ್ಞೆದಿಂದ  ತಪ್ಪಿದ ಘರ್ಷಣೆ: ಕಾರಿನಲ್ಲಿ ಬಂದ ಯುವಕರ ತಂಡ ಯುವಕನ ಮೇಲೆ ಹಲ್ಲೆ ಮಾಡಿತ್ತಿದ್ದಂತೆ ಬಸ್ ನಿಲ್ದಾಣದ ಟಿಸಿಯಿಂದ ಸಮಯ ಪ್ರಜ್ಞೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿಗಳು ಯುವಕರನ್ನ ವಶಕ್ಕೆ ಪಡೆದು ಮುಂದಾಗುವ ಅನಾಹುತವನ್ನ ತಪ್ಪಿಸಿದ್ದಾರೆ. ಬಸ್ ನಿಲ್ದಾಣದಲ್ಲಿ  ಪುಂಡ ಯುವಕರ ಹಾವಳಿ ಹೆಚ್ಚಾಗಿದ್ದು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಒಂದು ಪೊಲೀಸ್ ಚೌಕಿ ಇಲ್ಲದೆ ಇರುವುದರಿಂದ ಈ ರೀತಿಯ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

click me!