ಶಾಸಕ ಹರೀಶ್ ಗೌಡ ಸೇರಿ ಹಲವು ಗಣ್ಯರ ಹನಿಟ್ರ್ಯಾಪ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

By Sathish Kumar KHFirst Published Jun 26, 2024, 1:47 PM IST
Highlights

ಮೈಸೂರಿನ ಶಾಸಕ ಹರೀಶ್‌ಗೌಡ ಸೇರಿದಂತೆ ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳಿಗೆ ಹನಿಟ್ರ್ಯಾಪ್ ಮಾಡಿ ಬೆದರಿಕೆ ಹಾಕುತ್ತಿದ್ದ ಗ್ಯಾಂಗ್ ಹೆಡೆಮುರಿಕಟ್ಟಿದ ಸಿಸಿಬಿ ಪೊಲೀಸರು. 

ಬೆಂಗಳೂರು (ಜೂ.26): ಮೈಸೂರಿನ ಶಾಸಕ ಹರೀಶ್‌ಗೌಡ ಸೇರಿದಂತೆ ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳಿಗೆ ಹನಿಟ್ರ್ಯಾಪ್ ಮಾಡಿ ಬೆದರಿಕೆ ಹಾಕುತ್ತಿದ್ದ ಗ್ಯಾಂಗ್ ಅನ್ನು ಸಿಬಿ ಪೊಲೀಸರು ಬಂಧಿಸಿದ್ದಾರೆ

ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಶಾಸಕರು, ಸಚಿವರು, ಉದ್ಯಮಿಗಳು, ವಿಶ್ವ ವಿದ್ಯಾಲಯಗಳ ಕುಲಪತಿಗಳು ಸೇರಿ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ, ನಂತರ ಅವರದ್ದೇ ವಿಡಿಯೋ ಎನ್ನುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಈ ಗ್ಯಾಂಗ್‌ನ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.

Latest Videos

ಸಮಾಜದ ಗಣ್ಯ ವ್ಯಕ್ತಿಗಳಿಗೆ ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೀಗೆ, ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್  ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಇನ್ನು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕರು ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.

ಉಡುಪಿ ಜೈಲಿನಲ್ಲಿ ಗರುಡ ಗ್ಯಾಂಗ್‌ ಆರೋಪಿಗಳಿಂದ ದಾಂಧಲೆ

ವಿಶ್ವವಿದ್ಯಾಲಯದ ಉಪಕುಲಪತಿಗಳಿಗೂ ಹನಿಟ್ರ್ಯಾಪ್ ಮಾಡಿ ಬ್ಲಾಕ್ ಮೇಲ್ ಮಾಡಿದ್ದರು. ಈ ಬಗ್ಗೆ ಶಾಸಕ ಶಾಸಕ ಹರೀಶ್ ಗೌಡ ಅವರಿಗೆ ಮಾಹಿತಿ ನೀಡಿ ಅವಲತ್ತುಕೊಂಡಿದ್ದಾರೆ. ಈ ಬಗ್ಗೆ ಕಾಳಜಿವಹಿಸಿ ಉಪಕುಲಪತಿಗಳ ಬೆಂಬಲಕ್ಕೆ ನಿಂತ ಶಾಸಕ ಹರೀಶ್‌ಗೌಡ ದೂರು ನೀಡಿ ಧೈರ್ಯ ಹೇಳಿದ್ದರು. ಆದರೆ, ಆರೋಪಿಗಳ ಗ್ಯಾಂಗ್ ಪುನಃ ಶಾಸಕ ಹರೀಶ್‌ಗೌಡ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಜಿಸಿ ಬೆದರಿಕೆ ಹಾಕಲು ಮುಂದಾಗಿದ್ದಾರೆ. ಈ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರಿಗೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಗ್ಯಾಂಗ್‌ನಲ್ಲಿ ಒರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೋ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್ ಪಡೆದುಕೊಳ್ಳುತ್ತಿದ್ದರು. ನಂತರ, ವಿಐಪಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡುತ್ತಿದ್ದ ಆರೋಪಿಗಳು ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್‌ಗಳ ರೂಮು ಬುಕಿಂಗ್, ಚೆಕ್-ಇನಗ ಹಾಗೂ ಚೆಕ್-ಔಟ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ. ಇನ್ನು ವಿಐಪಿಗಳು ಹೋಟೆಲ್‌ನ ರೂಮು ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್ ಅನ್ನು ಬಾಡಿಗೆ ಪಡೆದು ಈ ಆರೋಪಿಗಳು ಅಲ್ಲಿ ಉಳಿದುಕೊಳ್ಳುತ್ತಿದ್ದರು.

ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಯುವತಿ ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಾರೆ. ಇನ್ನು ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಹಿಡನ್ ಕ್ಯಾಮರ್ ಇಟ್ಟಿರುವ ರೀತಿಯಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್ ಮಾಡಿ ಅದನ್ನು ವಿಐಪಿಗಳಿಗೆ ಕಳಿಸುತ್ತಿದ್ದರು. ಇದಾದ ನಂತರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಹಣ ನೀಡುವಂತೆ ಬೇಡಿಕೆ ಇಡುತಿದ್ದರು.

ದೇಶದಲ್ಲಿ 5 ಕೋಟಿ ಜನರು ಮಾದಕ ವ್ಯಸನಿಗಳಿದ್ದಾರೆ; ಗೃಹ ಸಚಿವ ಡಾ.ಜಿ. ಪರಮೇಶ್ವರ

ದೊಡ್ಡ ದೊಡ್ಡ ಕುಳಗಳನ್ನೇ ಹುಡುಕುತ್ತಿದ್ದ ಆರೋಪಿಗಳು ಬೆದರಿಕೆ ಹಾಕುವ ವೇಳೆ ಕೋಟ್ಯಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ಬಗ್ಗೆ ಉಪಕುಲಪತಿ ಶಾಸಕ ಹರೀಶ್ ಗೌಡ ಗೆ ಮಾಹಿತಿ ನೀಡಿದ್ದರು. ನಂತರದ ದಿನಗಳಲ್ಲಿ ಈ ಗ್ಯಾಂಗ್ ಹರೀಶ್ ಗೌಡಗೂ ಬ್ಲಾಕ್ ಮೇಲ್ ಮಾಡಿದ್ದರು. ಇದರ ಬೆನ್ನಲ್ಲಿಲೇ ಶಾಸಕ ಹರೀಶ್ ಗೌಡ ತಮ್ಮ ಮೇಲೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು. ಹರೀಶ್ ಗೌಡ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡು ಆರೋಪಿಗಳನ್ನು ಹೆಡೆಮುರಿಕಟ್ಟಲಾಗಿದೆ.

click me!