ಬೆಂಗಳೂರು: ಇಬ್ಬರು ಹೆಂಡ್ತಿಯರ ಬಿಟ್ಟು ಒಂಟಿಯಾಗಿದ್ದ ಮೈಸೂರು ಸ್ಯಾಂಡಲ್‌ ಕಂಪನಿ ಅಧಿಕಾರಿ ಆತ್ಮಹತ್ಯೆ

By Kannadaprabha News  |  First Published Dec 31, 2024, 10:06 AM IST

ಮೃತ ಅಮೃತ್ ಶಿರೂರ್ ಅವರು ಎರಡು ಮದುವೆಯಾಗಿದ್ದರು. ಮೊದಲಿಗೆ ಪ್ರೇಮ ವಿವಾಹವಾಗಿದ್ದು, ಕೆಲವೇ ತಿಂಗಳಲ್ಲಿ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದು, ದಂಪತಿ ನಡುವೆ ಮನಸ್ತಾಪವಾಗಿ ದೂರವಾಗಿದ್ದರು. ದಂಪತಿ ವಿಚ್ಚೇದನದ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಕೆಲವು ವರ್ಷಗಳಿಂದ ಅಮೃತ್ ಮುನೇಶ್ವರ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. 


ಬೆಂಗಳೂರು(ಡಿ.31):  ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ಮುನೇಶ್ವರ ಬ್ಲಾಕ್ ನಿವಾಸಿ ಅಮೃತ್‌ ಶಿರೂರ್ (40) ಆತ್ಮಹತ್ಯೆಗೆ ಶರಣಾದ ಅಮೃತ್‌ ಶಿರೂರ್ ಅಧಿಕಾರಿ. 

ಡಿ.28ರಂದು ಸಂಜೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ ಗಿರೀಶ್ ಅವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tap to resize

Latest Videos

ಬೆಳಗಾವಿ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಮೃತ ಅಮೃತ್ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದವರು. ಕಳೆದ 10 ವರ್ಷಗಳಿಂದ ಕೆಎಸ್ ಡಿಎಲ್‌ನ ಖರೀದಿ ವಿಭಾಗದಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಮಹಾಲಕ್ಷ್ಮೀ ಲೇಔಟ್‌ನ ಮುನೇಶ್ವರ ಬ್ಲಾಕ್‌ನ ಗಿರೀಶ್ ಎಂಬುವವರ ಮಾಲೀಕತ್ವದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಡಿ.28ರಂದು ಸಂಜೆ 5 ಗಂಟೆಗೆ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಮಾಲೀಕ ಗಿರೀಶ್ ಅವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಡೆತ್ ನೋಟ್‌ನಲ್ಲಿ ಏನಿದೆ?: 

ಘಟನಾ ಸ್ಥಳದಲ್ಲಿ ಅಮೃತ್ ಶಿರೂರ್ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ. ಪೋಷಕರಿಗೆ ಒಳ್ಳೆಯ ಮಗನಾಗಲಿಲ್ಲ. ಪತ್ನಿಗೆ ಒಳ್ಳೆಯ ಗಂಡನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದು ಕಂಡು ಬಂದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಂಡ್ತಿಯರ ಬಿಟ್ಟು ಒಂಟಿಯಾಗಿದ್ದರು. 

ಮೃತ ಅಮೃತ್ ಶಿರೂರ್ ಅವರು ಎರಡು ಮದುವೆಯಾಗಿದ್ದರು. ಮೊದಲಿಗೆ ಪ್ರೇಮ ವಿವಾಹವಾಗಿದ್ದು, ಕೆಲವೇ ತಿಂಗಳಲ್ಲಿ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. 2019ರಲ್ಲಿ ಎರಡನೇ ಮದುವೆಯಾಗಿದ್ದು, ದಂಪತಿ ನಡುವೆ ಮನಸ್ತಾಪವಾಗಿ ದೂರವಾಗಿದ್ದರು. ದಂಪತಿ ವಿಚ್ಚೇದನದ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಕೆಲವು ವರ್ಷಗಳಿಂದ ಅಮೃತ್ ಮುನೇಶ್ವರ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಇದೀಗ ಕೌಟುಂಬಿಕ ಕಾರಣಗಳಿಂದ ಮನನೊಂದಿದ್ದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!