
ಮೈಸೂರು (ಫೆ.18): ಆನ್‌ಲೈನ್ ಬೆಟ್ಟಿಂಗ್ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ಹಣಕಾಸಿನ ವಿಚಾರದಲ್ಲಿ ಉಂಟಾದ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆದಿದೆ.
ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್ ನ ಏಣಿಯಲ್ಲಿ ಮಂಗಳವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ 'ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ ಹಾಗೂ ಆಕೆಯ ಮಗುವನ್ನೂ ಕೊಲ್ಲಲು ಅವರು ಪ್ರೇರೇಪಿಸಿದ್ದಾರೆ ಎಂದು ತಿಳಿಸಿದ್ದು, ಈ ಬಗ್ಗೆ ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಮೈಸೂರಿನಲ್ಲಿ ಕುಟುಂಬದ ನಾಲ್ವರ ದುರಂತ ಅಂತ್ಯ; ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸರು!
ಜೋಬಿ ಹಾಗೂ ಶರ್ಮಿಳಾ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 'ಹಣಕಾಸಿನ ವಿಚಾರದಲ್ಲಿ ಕುಟುಂಬದೊಳಗೆ ಉಂಟಾದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕದಕೆ ತಿಳಿದುಬಂದಿದ್ದು, ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಜೋಬಿ ಆ್ಯಂಟೋನಿ ತನ್ನ ತಂಗಿ ಹೆಸರಿನಲ್ಲಿ ಬೆಟ್ಟಿಂಗ್ ಗಾಗಿ ಲಕ್ಷಾಂತರ ಸಾಲ ಮಾಡಿದ್ದು, ಅದೇ ವಿಚಾರದಲ್ಲಿ ವಿವಾದ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ