ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಕಾಮತೃಷೆ ತೀರಿಸಿಕೊಂಡು ಕೊಲೆಗೈದನಾ ತೋಟದ ಮಾಲೀಕ!

Published : Aug 24, 2024, 04:35 PM IST
ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಕಾಮತೃಷೆ ತೀರಿಸಿಕೊಂಡು ಕೊಲೆಗೈದನಾ ತೋಟದ ಮಾಲೀಕ!

ಸಾರಾಂಶ

ಮೈಸೂರಿನ ನಂಜನಗೂಡು ತಾಲ್ಲೂಕಿನಲ್ಲಿ ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತವಾಗಿದೆ.

ಮೈಸೂರು (ಆ.24): ಸಾಮಾನ್ಯವಾಗಿ ಗ್ರಾಮೀಣ ಭಾಗಗಳಲ್ಲಿ ಬಾಳೆ ಗಿಡಕ್ಕೆ ನೇಣು ಹಾಕಿಕೊಳ್ಳು ಎನ್ನುವುದನ್ನು ಹಾಸ್ಯಾಸ್ಪದ ಮಾತಿಗೆ ಬಳಸುತ್ತಾರೆ. ಆದರೆ, ಇಲ್ಲೊಬ್ಬ ಮಹಿಳೆ ಬಾಳೆ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ನೋಡಿದ ಮಹಿಳೆಯ ಕುಟುಂಬಸ್ಥರು, ಬಾಳೆ ತೋಟದ ಮಾಲೀಕನೇ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.

ಸ್ವಲ್ಪ ಭಾರ ಬಿದ್ದರೂ ಬಾಳೆ ಗಿಡ ಬಿದ್ದು ಹೋಗುತ್ತದೆ. ಅಂಥದ್ದದರಲ್ಲಿ ಮೈಸೂರಿನಲ್ಲಿ ಮಹಿಳೆಯೊಬ್ಬರು ಬಾಳೆ ಗಿಡಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸುವ ಯತ್ನ ನಡೆದಿದೆ. ಪ್ರತಿನಿತ್ಯ ಕೆಲಸ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಮಧ್ಯವಯಸ್ಕ ಮಹಿಳೆ ಶವ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಇದನ್ನು ನೋಡಿದ ಆಕೆಯ ಕುಟುಂಬಸ್ಥರು ಯಾರೋ ಕಿಡಿಗೇಡಿಗಳು ಈಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಹುಬ್ಬಳ್ಳಿ ಅಂಜಲಿ ಅಂಬಿಗೇರ ಹತ್ಯೆ ಕೇಸ್ ಚಾರ್ಜ್‌ಶೀಟ್ ಸಲ್ಲಿಕೆ; 85 ಸಾಕ್ಷ್ಯ ಸಂಗ್ರಹ!

ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. ಗಟ್ಟವಾಡಿ ಗ್ರಾಮದ ಶಶಿಕಲಾ (38) ಮೃತ ಮಹಿಳೆ ಆಗಿದ್ದಾರೆ. ಗಟ್ಟವಾಡಿ ಗ್ರಾಮದ ನಂಜುಂಡಪ್ಪ@ಸಿದ್ದಲಿಂಗಪ್ಪ ಎಂಬುವರ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ. ಇನ್ನು ಘಟನೆ ಸ್ಥಳದಲ್ಲಿ ಕಬ್ಬಿಣದ ರಾಡು, ಕಾರಿನ ಮ್ಯಾಟ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ. ಮೃತ ಮಹಿಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಪ್ರತಿನಿತ್ಯ ಕೆಲಸ ಮುಗಿಸಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದಳು. ಆದರೆ, ನಿನ್ನೆ ರಾತ್ರಿ ಮಹಿಳೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲಾ ಹುಡುಕಾಟ ಮಾಡಿದ್ದಾರೆ.

ಮಹಿಳೆಯ ಹುಡುಕಾಟದ ಜೊತೆಗೆ ಆಕೆಯ ಮೊಬೈಲ್‌ಗೆ ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ, ಈ ವೇಳೆ ಮಹಿಳೆಯ ಕುಟುಂಬಸ್ಥರಿಗೆ ಕೆ ಮಾಡಿದ ಬಾಳೆ ತೋಟದ ಮಾಲೀಕ ನಂಜುಂಡಪ್ಪ ತನ್ನ ಬಾಳೆ ತೋಟದಲ್ಲಿ ನಿಮ್ಮ ಮನೆಯ ಮಹಿಳೆ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿಸಿದ್ದಾನೆ. ಗ್ರಾಮಸ್ಥರು ತೆರಳಿ ಅಲ್ಲಿ ಪರಿಶೀಲನೆ ಮಾಡಿದ್ದಾರೆ. ನಂತರ ನಂಜುಂಡಪ್ಪನ ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೆಲ್ಲಿ ಎಂದು ಹುಡುಕಿದರೆ ಗ್ರಾಮದಿಂದ ಪರಾರಿ ಆಗಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಾಳೆ ತೊಟದ ಮಾಲೀಕ ನಂಜುಂಡಪ್ಪ ವಿರುದ್ಧ ದೂರು ನೀಡಿದ್ದಾರೆ.

ಕಾರ್ಕಳದ ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಭುಗಿಲೆದ್ದ ಆಕ್ರೋಶ!

ನಂಜನಗೂಡು ಡಿವೈಎಸ್‌ಪಿ ರಘು ಅವರು ಬಾಳೆ ತೋಟಕ್ಕೆ ಭೇಟಿ ನೀಡಿ, ಮೃತ ಮಹಿಳೆ ಶವ ಸಿಕ್ಕ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಅನ್ಯ ವರ್ಗದ ವ್ಯಕ್ತಿ ದಲಿತ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳ ಸದಸ್ಯರು ಆರೋಪ ಮಾಡಿದ್ದಾರೆ. ಮೃತ ಮಹಿಳೆ ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಗೆ ರವಾನಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ. ಆರೋಪಿ ಹಾಗೂ ಮಹಿಳೆ ಪರಸ್ಪರ ಅನ್ಯ ವರ್ಗದವರು ಆದ ಹಿನ್ನೆಲೆಯಲ್ಲಿ, ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು