
ಮೈಸೂರು (ಜು.10): ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದೆರಡು ದಿನದಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದರು. ಸದ್ಯ ಘಟನ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ