ರಾಷ್ಟ್ರೀಯ ರನ್ನಿಂಗ್ ರೇಸ್ ಸೋಲು; ಪುತ್ತೂರಿನ ವಿದ್ಯಾರ್ಥಿನಿ ಆತ್ಮಹತ್ಯೆ !

By Kannadaprabha News  |  First Published Nov 27, 2023, 11:30 AM IST

ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರದಲ್ಲಿ ಖಿನ್ನತೆಗೆ ಒಳಗಾದ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕ್ರೀಟನಾಶಕ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.


ಪುತ್ತೂರು (ನ.27) :  ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರದಲ್ಲಿ ಖಿನ್ನತೆಗೆ ಒಳಗಾದ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕ್ರೀಟನಾಶಕ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(೧೭) ಮೃತಪಟ್ಟ ವಿದ್ಯಾರ್ಥಿನಿ.

Tap to resize

Latest Videos

ದಪ್ಪಗಿದ್ದೇನೆಂದು ಮನನೊಂದು ಮಂಗಳೂರು ಎಜೆ ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದರು ಎನ್ನಲಾಗಿದೆ. ಬಳಿಕ ತೀರಾ ಖಿನ್ನತೆಗೆ ಒಳಗಾಗಿದ್ದ ನಿಶಾ ವಾರದ ಹಿಂದೆ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಬಟ್ಟ ಬಯಲಿನಲ್ಲಿ ಮಹಿಳೆಯ ಸೀರೆ ಹಿಡಿದೆಳೆದ ಪರಪುರುಷ: ಮನನೊಂದು ಆತ್ಮಹತ್ಯೆಗೆ ಶರಣಾದ ಗೃಹಿಣಿ

ನಿಶಾ ಅವರಿಗೆ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿತ್ತು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!