ತುಮಕೂರು: ಏಳು ಪೊಲೀಸರನ್ನು ‌ಹತ್ಯೆ ಮಾಡಿದ್ದ ನಕ್ಸಲ್‌ ಚಂದ್ರ ಬಂಧನ

By Kannadaprabha News  |  First Published Jul 4, 2024, 8:33 AM IST

ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲು ಬಂಧಿತ ನಕ್ಸಲ್‌. ಇವನು 2005ರ ಫೆಬ್ರವರಿ 10ರಂದು ಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಮ್ಮನಹಳ್ಳಿಯ ಶಾಲೆಯಲ್ಲಿ ಭದ್ರತೆಗೆ ನೇಮಕವಾಗಿದ್ದ 9 ಜನ ಪೊಲೀಸರ ಪೈಕಿ 7 ಜನ ಪೊಲೀಸರು ಮತ್ತು ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ. 


ತುಮಕೂರು(ಜು.04):  ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲ್ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲು ಬಂಧಿತ ನಕ್ಸಲ್‌. ಇವನು 2005ರ ಫೆಬ್ರವರಿ 10ರಂದು ಪಾವಗಡ ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಮ್ಮನಹಳ್ಳಿಯ ಶಾಲೆಯಲ್ಲಿ ಭದ್ರತೆಗೆ ನೇಮಕವಾಗಿದ್ದ 9 ಜನ ಪೊಲೀಸರ ಪೈಕಿ 7 ಜನ ಪೊಲೀಸರು ಮತ್ತು ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ. ಬಂಧಿತ ಆಂಧ್ರಪ್ರದೇಶದ ಮಾಜಿ ನಕ್ಸಲ್ ಬಂದೆಲ ಬಾಯನ್ನನ ಮಗನಾದ ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲುನನ್ನು ಪಾವಗಡ ಗ್ರಾಮಾಂತರ ವೃತ್ತದ ಸಿ ಗಿರೀಶ್, ಎಎಸ್ಐ ಗೋವಿಂದರಾಜು ಮತ್ತು ಸಿಬ್ಬಂದಿಗಳಾದ ಧರ್ಮಪಾಲನಾಯ್ಕ, ಪುಂಡಲೀಕ ಲಮಾಣಿ ಆರೋಪಿಯನ್ನು ದಸ್ತೆಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ.ಕೆ.ವಿ. ತಿಳಿಸಿದ್ದಾರೆ.

Tap to resize

Latest Videos

ಬೆಂಗಳೂರು: ಕಾಲೇಜಿನ ಸೆಕ್ಯೂರಿಟಿ ಗಾರ್ಡ್‌ನನ್ನು ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌

ಪೊಲೀಸರ ಹತ್ಯೆಯ ನಂತರ ಪೊಲೀಸ್ ಇಲಾಖೆಗೆ ಸೇರಿದ ಬಂದೂಕು, ಮದ್ದು ಗುಂಡುಗಳನ್ನು ದೋಚಿಕೊಂಡು ಪರಾರಿಯಾಗಿದ್ದನು. ಮಾಜಿ ನಕ್ಸಲೈಟ್ ಚಂದ್ರು ಮುತ್ಯಾಲ ಆಂಧ್ರಪ್ರದೇಶದ ಆನಂತಪುರ ಜಿಲ್ಲೆಯ ಸಿಂಗಲಮಲ್ಲ ತಾಲೂಕಿನ ಗಾರಲದಿನ್ನೆ ಮಂಡಲದ ಕೇಶವಪುರಂ ಗ್ರಾಮದವನಾಗಿದ್ದು, ಪೊಲೀಸರ ಹತ್ಯೆಯ ನಂತರ ತಲೆ ಮರೆಸಿಕೊಂಡು ಬೆಂಗಳೂರಿನ ಬಿಬಿಎಂಪಿ ಲಾರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು. ಇವನನ್ನು ಪತ್ತೆ ಹಚ್ಚಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಅಬ್ದುಲ್ ಖಾದರ್ ಮಾರ್ಗದರ್ಶನ ಮತ್ತು ಮಧುಗಿರಿ ಪೊಲೀಸ್ ಉಪಾಧೀಕ್ಷಕ ರಾಮಚಂದ್ರಪ್ಪ ನೇತೃತ್ವದಲ್ಲಿ ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

click me!