ಸ್ವಂತ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಆಕಸ್ಮಿಕವಾಗಿ ಚಾಲಕನ ನಿಯಂತ್ರಣ ತಪ್ಪಿ ಹೊಸ ಟ್ರ್ಯಾಕ್ಟರ್ ಮುಗುಚಿ ಬಿದ್ದು ಟ್ರ್ಯಾಕ್ಟರ್ ಡ್ಯಾಮೇಜ್ ಆಗಿದೆ. ಇದರಿಂದ ಭಯಭೀತನಾದ ಚಾಲಕ ಮನೆಯವರಿಗೆ ಹೆದರಿ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಧುಗಿರಿ (ಜು.31): ಸ್ವಂತ ಟ್ರ್ಯಾಕ್ಟರ್‌ನಿಂದ ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಆಕಸ್ಮಿಕವಾಗಿ ಚಾಲಕನ ನಿಯಂತ್ರಣ ತಪ್ಪಿ ಹೊಸ ಟ್ರ್ಯಾಕ್ಟರ್ ಮುಗುಚಿ ಬಿದ್ದು ಟ್ರ್ಯಾಕ್ಟರ್ ಡ್ಯಾಮೇಜ್ ಆಗಿದೆ. ಇದರಿಂದ ಭಯಭೀತನಾದ ಚಾಲಕ ಮನೆಯವರಿಗೆ ಹೆದರಿ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಮುತ್ತರಾಯನಹಳ್ಳಿ -ಸಿಂಗನಹಳ್ಳಿ ಮಾರ್ಗ ಮಧ್ಯದ ಜಮೀನಲ್ಲಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕ ರಂಗನಾಥ (35) ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತನೇ ಟ್ರ್ಯಾಕ್ಟರ್ ಮಾಲೀಕ ಮತ್ತು ಚಾಲಕ ಎನ್ನಲಾಗಿದೆ. ಈತನೇ ರೈತರ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ, ಡ್ಯಾಮೇಜ್ ಆಗಿದೆ. ಇದರಿಂದ ಭಯಗೊಂಡು ಹೊಸ ಟ್ರ್ಯಾಕ್ಟರ್ ಹೀಗಾಯತಲ್ಲ ಎಂದು ಮನನೊಂದು ಸುದ್ದೇಕುಂಟೆ ಗ್ರಾಮದ ರಂಗನಾಥ ಸಮೀಪದ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯ ಮಾಡಿಕೊಂಡಿದ್ದಾನೆ. ಸಾಲ ಮಾಡಿ ಟ್ರ್ಯಾಕ್ಟರ್ ಖರೀದಿಸಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ ನಂತರ ಮೃತ ದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮನೆಯವರಿಗೆ ಮೃತ ದೇಹವನ್ನು ಒಪ್ಪಸಿದ್ದರು. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿಗೆ ಟ್ರಕ್ ಡಿಕ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು
ಬೊಲೇರೋ -ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
ಮಧುಗಿರಿ: ಬೊಲೇರೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಚಾಲಕನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ಕೊಡಿಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ದಂಡಿಪುರದ ಕೆಇಬಿ ಮುಂಭಾಗ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಹನುಮಂತರಾಯಪ್ಪ (55) ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣ ಸ್ಥಳದಲ್ಲಿದ್ದ ನಾಗರಿಕರು ಗಾಯಾಳನ್ನು ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಕಲಿದೇವಪುರ ಗ್ರಾಮದ ಹನುಮಂತರಾಯಪ್ಪ (55) ಮೃತಪಟ್ಟಿದ್ದು ಕೊಡಿಗೇನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ- ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು, ನಾಲ್ವರಿಗೆ ಗಾಯ