
ಬೆಂಗಳೂರು (ಮಾ.29): ನವಜಾತ ಶಿಶುವನ್ನು ದೇವಾಲಯದ ಬಳಿ ಬಿಟ್ಟು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಯಶವಂತಪುರ ಬಳಿ ಇರುವ ದಾರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಸೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮಗು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಸಿಬ್ಬಂದಿ ಅಮರೇಶ್, ಕೆಂಪರಾಜು ಬಂದು ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಆ್ಯಂಬುಲೆನ್ಸ್ ಬರಲು 30 ನಿಮಿಷಗಳಾಗುತ್ತೆ ಎಂದು ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿಗಳೇ ಹೊಯ್ಸಳ ವಾಹನ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಪಿಸಿ 317 ಅಡಿಯಲ್ಲಿ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಪತ್ನಿಯನ್ನು ಹೊಡೆದು ಕೊಂದ ಪತಿ!
ಚಾಮರಾಜನಗರ: ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಗಂಡನನ್ನು ಪ್ರಶ್ನೆ ಮಾಡಿದ ಪತ್ನಿಯನ್ನೇ ಹೊಡೆದು ಕೊಂದಿರುವ ಘಟನೆ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ.
ಅದೇ ಗ್ರಾಮದ ಚಿಕ್ಕಮಾದಪ್ಪ ಅವರ ಮಗಳು ಎಂ.ಸಿ. ಸೌಮ್ಯ (27) ಗಂಡನ ಕ್ರೌರಕ್ಕೆ ಬಲಿಯಾದವಳು. ಪತಿ ಮಹೇಶ್ ಚಂದ್ರಗುರು ಕೊಲೆ ಆರೋಪಿಯಾಗಿದ್ದು, ಪೊಲೀಸರ ವಶದಲ್ಲಿದ್ದಾನೆ. ದಂಪತಿಗಳಿಗೆ ಐದು ವರ್ಷದ ಹೆಣ್ಣು ಮಗುವಿದೆ.
ಘಟನೆ ವಿವರ: ಕಳೆದ ಏಳು ವರ್ಷಗಳ ಹಿಂದೆ ಒಂದೇ ಗ್ರಾಮದ ಮಹೇಶ ಚಂದ್ರ ಗುರುವಿಗೆ ಎಂ.ಸಿ. ಸೌಮ್ಯಳೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ನಡತೆಯ ಬಗ್ಗೆ ಮೃತ ಸೌಮ್ಯ ಅನೇಕ ಬಾರಿ ತಿಳುವಳಿಕೆ ನೀಡಿದ್ದರು. ತಿದ್ದುಕೊಳ್ಳದ ಪತಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಮೇಲಿಂದ ಮೇಲೆ ಜಗಳವಾಗುತ್ತಿತ್ತು. ಇದೇ ವಿಚಾರಕ್ಕಾಗಿ ಸೋಮವಾರ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಆರೋಪಿ ಮಹೇಶಚಂದ್ರಗುರು ಪತ್ನಿಯನ್ನು ಕಪಾಳಕ್ಕೆ ಬಲವಾಗಿ ಹೊಡೆದ ಪರಿಣಾಮ ಪತ್ನಿ ಅಸುನೀಗಿದ್ದಾಳೆ ಎಂದು ಗ್ರಾಮಾಂತರ ಪೂರ್ವ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Bengaluru: ಪತಿ ಜೈಲು ಸೇರಿದ ಬಳಿಕ ತನ್ನ ಪುಟ್ಟ ಮಕ್ಕಳನ್ನೇ ಅಸ್ತ್ರವಾಗಿಸಿ ಗಾಂಜಾ ದಂಧೆ
ಮೃತ ಸೌಮ್ಯಳ ಶವಪರೀಕ್ಷೆಯನ್ನು ನಗರದ ವೈದ್ಯಕೀಯ ಬೋಧನಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಹಾಗೂ ತಹಶೀಲ್ದಾರ್ ಭೇಟಿ ನೀಡಿ, ಪರಿಶೀಲನೆ ಮಾಡಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ