
ವಿಜಯಪುರ (ನ.28) : ಖಾಸಗಿ ಸುದ್ದಿ ವಾಹಿನಿ ಕ್ಯಾಮೆರಾಮ್ಯಾನ್ ತನ್ನ ಪತ್ನಿ ಸಮೇತ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಎರಡು ಪ್ರತ್ಯೇಕ ಕೋಣೆಯಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಬಳಿ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ದಂಪತಿ ತಿಪ್ಪಣ್ಣ ಹೊಸಮನಿ (34), ಸುಜಾತಾ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕ್ಯಾಮೆರಾಮ್ಯಾನ್ ಆಗಿದ್ದ ತಿಪ್ಪಣ್ಣ ಮುದ್ದೇಬಿಹಾಳ ತಾಲ್ಲೂಕಿನ ಕೆಸಾಪೂರ ಸುಜಾತಾಳನ್ನ ಮನಸಾರೆ ಪ್ರೀತಿಸುತ್ತಿದ್ದ. ಇದೇ ಕಾರಣಕ್ಕೆ ಕೆಲಸ ಬಿಟ್ಟು ಊರಿಗೆ ಮರಳಿದ್ದ. ನಾಲ್ಕು ತಿಂಗಳ ಹಿಂದೆಯೆಷ್ಟೇ ಪ್ರೀತಿ ಚಿಗುರೊಡೆದಿತ್ತು. 23 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿ ತಿಂಗಳೊಳಗೇ ನೇಣಿಗೆ ಶರಣಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ:
ನಾಲ್ಕು ತಿಂಗಳ ಹಿಂದೆಯೆಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಸುಖವಾಗಿರಬೇಕಿತ್ತು. ಆದರೆ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕುಟುಂಬದವರ ವಿರೋಧವಿತ್ತೆ? ಬೆದರಿಕೆ ಇತ್ತೇ ಸಾವಿಗೆ ಕಾರಣ ಏನು ಎಂಬುದು ತಿಳಿದಿಲ್ಲ. ಸ್ಥಳಕ್ಕೆ ಮುದ್ದೇಬಿಹಾಳ ಐಪಿಎಸ್ ಆರೀಫ್ ಮುಶಾಪುರಿ ಭೇಟಿ, ಸ್ಥಳ ಪರಿಶೀಲನೆ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ.
ಗದಗ: ಆಂಟಿ ಮೋಹಕ್ಕೆ ಸಿಲುಕಿದ ರೌಡಿಶೀಟರ್: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಪಾಲಿಗೆ ವಿಲನ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ