ಡಿಜೆ ಹಳ್ಳಿ ಗಲಭೆ: NIA ಮಿಂಚಿನ ಕಾರ್ಯಚರಣೆ, 17 ಜನರ ಬಂಧನ

Published : Dec 21, 2020, 10:19 PM IST
ಡಿಜೆ ಹಳ್ಳಿ ಗಲಭೆ: NIA ಮಿಂಚಿನ ಕಾರ್ಯಚರಣೆ, 17 ಜನರ ಬಂಧನ

ಸಾರಾಂಶ

ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಿಂಚಿನ ಕಾರ್ಯಚರಣೆ ನಡೆಸಿದ್ದು ಮತ್ತೆ 17 ಜನರನ್ನು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು, (ಡಿ.21): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 17 ಜನರನ್ನು ಬಂಧಿಸಿದ್ದಾರೆ.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಹಾಗೂ ಗಲಭೆಗೆ ಪ್ರಚೋದನೆ ನೀಡಿದ SDI ಹಾಗೂ  PFIನ 17 ಆರೋಪಿಗಳನ್ನು ಇಂದು (ಸೋಮವಾರ) ಅರೆಸ್ಟ್ ಮಾಡಿದ್ದಾರೆ.

ಬೆಂಗ್ಳೂರಲ್ಲಿ ಎಸ್‌ಡಿಪಿಐ, ಪಿಎಫ್‌ಐ ಕಚೇರಿ ಸೇರಿ 43 ಕಡೆ ಎನ್‌ಐಎ ದಾಳಿ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ತನಿಖೆ ನಡೆಸಲು ಎನ್ ಐ ಎ ಕೈಗೆತ್ತಿಕೊಂಡಿತ್ತು. ಈ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ಎನ್‌ಐಎ ತಂಡದಿಂದ ಇದುವರೆಗೆ ಹಲವು ಕಡೆ ದಾಳಿನಡೆಸಿದೆ. ಈ ಮೂಲಕ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳನ್ನು ಕಲೆಹಾಕಿದೆ.

ಇದೀಗ ಈ 17 ಜನರ ಬಂಧನದ ಮೂಲಕ ಒಟ್ಟು ಇದುವರೆಗೆ 189 ಮಂದಿಯನ್ನು ಬಂಧಿಸಿದಂತಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS
ಡಿಜಿಟಲ್ ಅರೆಸ್ಟ್‌ಗೆ ಹೆದರಿ ಕೋಟಿಗಟ್ಟಲೆ ಬೆಲೆಬಾಳುವ ಸೈಟ್, ಮನೆ ಮಾರಿದ ಬೆಂಗಳೂರು ಮಹಿಳಾ ಟೆಕ್ಕಿ!