Bengaluru Crime: ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ನೈಜಿರಿಯನ್‌ ಪ್ರಜೆ ಬಂಧನ

Kannadaprabha News   | Asianet News
Published : Feb 23, 2022, 05:26 AM IST
Bengaluru Crime: ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ನೈಜಿರಿಯನ್‌ ಪ್ರಜೆ ಬಂಧನ

ಸಾರಾಂಶ

*  ವಿದೇಶಿ ಪ್ರಜೆಯನ್ನು ಬಂಧಿಸಿದ ತಲಘಟ್ಟಪುರ ಠಾಣೆ ಪೊಲೀಸರು  *  ಆರೋಪಿಯಿಂದ ಎಂಡಿಎಂಎ ಸೇರಿದಂತೆ ಇತರೆ ಡ್ರಗ್ಸ್‌ ಜಪ್ತಿ *  ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿ   

ಬೆಂಗಳೂರು(ಫೆ.23): ನಗರದಲ್ಲಿ ಮಾದಕ ವಸ್ತು(Drugs) ಮಾರಾಟದಲ್ಲಿ ತೊಡಗಿದ್ದ ವಿದೇಶಿ ಪ್ರಜೆಯೊಬ್ಬನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೈಜಿರಿಯಾದ(Nigeria) ಲಾರೆನ್ಸ್‌ ಜೆನ್‌ವೋಕ್‌ ಬಂಧಿತನಾಗಿದ್ದು, ಆರೋಪಿಯಿಂದ(Accused) ಎಂಡಿಎಂಎ ಸೇರಿದಂತೆ ಇತರೆ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ತುರಹಳ್ಳಿ ಫಾರೆಸ್ಟ್‌ ರಸ್ತೆಯ ಚಿಕ್ಕೇಗೌಡನಪಾಳ್ಯಕ್ಕೆ ಮಾರ್ಗದ ಪೆಟ್ರೋಲ್‌ ಬಂಕ್‌ ಸಮೀಪ ಆರೋಪಿ ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ(Raid) ನಡೆಸಲಾಯಿತು. ವ್ಯಾಪಾರ ವೀಸಾದಡಿ ಭಾರತಕ್ಕೆ(India) ಬಂದಿದ್ದ ಆತ, ಹಣದಾಸೆಗೆ ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru Drug peddler Arrested: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, ಹೀಗಾಗಲು ಪ್ರೇಯಸಿಯೇ ಕಾರಣವೆಂದ ಯುವಕ!

ಪೆಡ್ಲರ್‌ಗಳಿಬ್ಬರ ಬಂಧನ: 2.5 ಕೋಟಿ ಡ್ರಗ್ಸ್‌ ವಶ

ಬೆಂಗಳೂರು:  ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ ಗೋವಿಂದಪುರ ಠಾಣೆ ಪೊಲೀಸರು, ನಗರಕ್ಕೆ ಡ್ರಗ್ಸ್‌ ಪೂರೈಸುತ್ತಿದ್ದ ವಿದೇಶಿ ಪ್ರಜೆ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ .2.5 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಘಟನೆ ಫೆ.14 ರಂದು ನಡೆದಿತ್ತು. 

ನೈಜೀರಿಯಾ ಪ್ರಜೆ ಚಿಬ್ಯುಜೆ ಚಿನೊನ್ಸೊ ಹಾಗೂ ಮಹಾರಾಷ್ಟ್ರದ ಶ್ರೀಕಾಂತ್‌ ಬಂಧಿತರಾಗಿದ್ದು, ಆರೋಪಿಗಳಿಂದ .1.21 ಕೋಟಿ ಮೌಲ್ಯದ 2.428 ಕೆ.ಜಿ. ಬ್ರೌನ್‌ ಶುಗರ್‌ ಹಾಗೂ .1.30 ಕೋಟಿ ಮೌಲ್ಯದ ಕೊಕೇನ್‌ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ ಡ್ರಗ್ಸ್‌ ಮಾರಾಟಕ್ಕೆ ಯತ್ನಿಸಿದ್ದಾಗ ಈ ಇಬ್ಬರು ಪೆಡ್ಲರ್‌ಗಳ ಸಹಚರರು ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಅವರು ನೀಡಿದ ಮೇರೆಗೆ ಪೆಡ್ಲರ್‌ಗಳನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾರ್ಯಾಚರಣೆ

ಮಹಾರಾಷ್ಟ್ರದ ಅಂಕೋಲಾ ಮೂಲದ ಶ್ರೀಕಾಂತ್‌ ವೃತ್ತಿಪರ ಪೆಡ್ಲರ್‌ ಆಗಿದ್ದು, ಅಸ್ಸಾಂ ಗಡಿ ಪ್ರದೇಶದಿಂದ ಕಡಿಮೆ ಬೆಲೆಗೆ ಸಗಟು ರೂಪದಲ್ಲಿ ಬ್ರೌನ್ಸ್‌ ಶುಗರ್‌ ಖರೀದಿಸುತ್ತಿದ್ದ. ಬಳಿಕ ಬೆಂಗಳೂರು ಸೇರಿದಂತೆ ಇತರೆಡೆ ಬೇರೆ ಪೆಡ್ಲರ್‌ಗಳಿಗೆ ಪೂರೈಸುತ್ತಿದ್ದ. ಬೆಂಗಳೂರಿನಲ್ಲಿ ತನ್ನ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ರೂಪಿಸಿದ್ದ. ಇತ್ತೀಚಿಗೆ ಆತನ ದಂಧೆ ಬಗ್ಗೆ ಬಾತ್ಮೀದಾರರಿಂದ ಗೋವಿಂದಪುರ ಠಾಣೆ ಇನ್ಸ್‌ಪೆಕ್ಟರ್‌ ಆರ್‌.ಪ್ರಕಾಶ್‌ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಅಂತೆಯೇ ಕಾರ್ಯಾಚರಣೆ ನಡೆಸಿ ಫೆ.7ರಂದು ಗೋವಿಂದಪುರದ ಫಾತಿಮಾ ಲೇಔಟ್‌ನ ಕೆ.ನವಾಜ್‌ ಷರೀಫ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಶ್ರೀಕಾಂತ್‌ ಬಗ್ಗೆ ಬಾಯ್ಬಿಟ್ಟಿದ್ದ. ಈ ಮಾಹಿತಿ ಮೇರೆಗೆ ಮಹಾರಾಷ್ಟ್ರಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಕರೆ ತಂದಿದ್ದಾರೆ. ಆತನಿಂದ 1.21 ಕೋಟಿ ಮೌಲ್ಯದ ಬ್ರೌನ್‌ ಶುಗರ್‌ ಸಹ ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬ್ರೆಜಿಲ್‌ನಿಂದ ಕೊಕೇನ್‌:

ಬ್ರೆಜಿಲ್‌ ದೇಶದಿಂದ ಕಳ್ಳ ದಾರಿಯಲ್ಲಿ ನಗರಕ್ಕೆ ಕೊಕೇನ್‌ ತಂದು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಚಿನ್ಸೊನೊನನ್ನು ಬಂಧಿಸಲಾಗಿದೆ. ಇತ್ತೀಚಿಗೆ ಎಚ್‌ಬಿಆರ್‌ ಲೇಔಟ್‌ನಲ್ಲಿ ಡ್ರಗ್ಸ್‌ ಪೂರೈಕೆಗೆ ಬಂದಾಗ ಆತನ ಇಬ್ಬರು ಸಹಚರರು ಸಿಕ್ಕಿಬಿದ್ದಿದ್ದರು. ಅವರು ನೀಡಿದ ಮಾಹಿತಿ ಮೇರೆಗೆ ಆರೋಪಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತಾರಾಜ್ಯ ಪೆಡ್ಲ​ರ್‍ಸ್ ಸೆರೆ: 15 ಕೇಜಿ ಗಾಂಜಾ ಜಪ್ತಿ

ಬೆಂಗಳೂರು:  ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಪೆಡ್ಲರ್‌ಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Bengaluru Crime: ಒಡಿಶಾದಿಂದ ಗಾಂಜಾ ತಂದು ಮಾರುತ್ತಿದ್ದ ಪೆಡ್ಲರ್‌ಗಳ ಸೆರೆ

ತ್ರಿಪುರ ಮೂಲದ ಜಾವೇದ್‌ ಹುಸೇನ್‌(23), ಮೌಸಿನ್‌ ಮಿಯಾ(23) ಹಾಗೂ ಅಬ್ದುಲ್‌ ಅಲಂಗಿರ್‌(22) ಬಂಧಿತರು. ಆರೋಪಿಗಳಿಂದ 15 ಕೆ.ಜಿ. ತೂಕದ ಗಾಂಜಾ(Marijuana) ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಫೆ.19ರಂದು ಬೆಳಗ್ಗೆ 10.30ರ ಸುಮಾರಿಗೆ ಮೂವರು ದ್ವಿಚಕ್ರ ವಾಹನದಲ್ಲಿ ಗಾಂಜಾ ಇರಿಸಿಕೊಂಡು ಮಾರಾಟಕ್ಕೆ ತೆರಳುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಶ್ರೀರಾಮಪುರದ ಬ್ರಿಟಾನಿಯಾ ಫ್ಯಾಕ್ಟರಿ ಬಳಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ(Arrest) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಪುರ ಮೂಲದ ಆರೋಪಿಗಳು ನಗರದಲ್ಲಿ ಸೆಕ್ಯೂರಿಟಿ ಗಾರ್ಡ್‌(Security Guard) ಕೆಲಸ ಮಾಡಿಕೊಂಡಿದ್ದಾರೆ. ಆರೋಪಿಗಳು ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಡ್ರಗ್ಸ್‌ ಪೆಡ್ಲಿಂಗ್‌ ದಂಧೆಗೆ ಇಳಿದಿದ್ದರು. ತವರು ರಾಜ್ಯ ತ್ರಿಪುರಕ್ಕೆ ಹೋದಾಗ ಕಡಿಮೆ ದರಕ್ಕೆ ಗಾಂಜಾ ಖರೀದಿಸಿ ಬಳಿಕ ಅದನ್ನು ನಗರದಲ್ಲಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಯಾರಿಗೂ ಅನುಮಾನಬಾರದಂತೆ ಲಗೇಜ್‌ ಬ್ಯಾಗ್‌ನಲ್ಲಿ ಗಾಂಜಾ ಇರಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು