ರಕ್ತ ಬರುವಂತೆ ಪೊಲೀಸರ ಮೇಲೆ ನೈಜೀರಿಯನ್ನರ ಗೂಂಡಾಗಿರಿ: 8 ಆರೋಪಿಗಳು ಬಂಧನ

Published : Apr 20, 2024, 08:27 AM IST
ರಕ್ತ ಬರುವಂತೆ ಪೊಲೀಸರ ಮೇಲೆ ನೈಜೀರಿಯನ್ನರ ಗೂಂಡಾಗಿರಿ: 8 ಆರೋಪಿಗಳು ಬಂಧನ

ಸಾರಾಂಶ

ತಮ್ಮನ್ನು ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧಿಸಲು ಬಂದಿದ್ದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿ ನೈಜೀರಿಯಾ ಪ್ರಜೆಗಳು ಗೂಂಡಾಗಿರಿ ನಡೆಸಿರುವ ಘಟನೆ ನಗರ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.   

ಬೆಂಗಳೂರು (ಏ.20): ತಮ್ಮನ್ನು ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧಿಸಲು ಬಂದಿದ್ದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿ ನೈಜೀರಿಯಾ ಪ್ರಜೆಗಳು ಗೂಂಡಾಗಿರಿ ನಡೆಸಿರುವ ಘಟನೆ ನಗರ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಸಿಸಿಬಿ ಇನ್‌ಸ್ಪೆಕ್ಟರ್‌ ಸುಬ್ರಹ್ಮಣ್ಯಸ್ವಾಮಿ ಹಾಗೂ ಹೆಡ್‌ ಕಾನ್‌ಸ್ಟೇಬಲ್‌ ರಾಜೀವ್‌ ಗಾಯಗೊಂಡಿದ್ದು, ಕೊಡಿಗೇಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಸಿಸಿಬಿ ಪೊಲೀಸರ ಜೀಪು ಹಾಗೂ ರಾಜಾನುಕುಂಟೆ ಠಾಣೆ ಹೊಯ್ಸಳ ವಾಹನ ಜಖಂಗೊಂಡಿವೆ. ಮಾವಳ್ಳಿಪುರದಲ್ಲಿ ನೆಲೆಸಿದ್ದ ನೈಜೀರಿಯಾ ದೇಶದ ಡ್ರಗ್ಸ್‌ ಪೆಡ್ಲರ್‌ ಬಂಧನಕ್ಕೆ ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳು, ತಮ್ಮ ಸ್ನೇಹಿತರ ಜತೆ ಪೊಲೀಸರ ಮೇಲೆ ದಾದಾಗಿರಿ ನಡೆಸಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏನಿದು ಘಟನೆ?: ಕೆಲ ದಿನಗಳ ಹಿಂದೆ ಬಾಗಲಗುಂಟೆ ಸಮೀಪ ವಿದೇಶಿ ಪ್ರಜೆಯನ್ನು ಬಂಧಿಸಿ 4 ಕೇಜಿ ಎಡಿಎಂಎಯನ್ನು ಸಿಸಿಬಿ ಜಪ್ತಿ ಮಾಡಿತ್ತು. ಈ ಪ್ರಕರಣದ ತನಿಖೆ ಮುಂದುವರೆಸಿದಾಗ ಯಲಹಂಕದ ಪ್ರಕೃತಿ ಲೇಔಟ್‌ನ ಮನೆಯಲ್ಲಿ ಆರೋಪಿಯ ಸಹಚರರು ನೆಲೆಸಿರುವ ಮಾಹಿತಿ ತನಿಖಾಧಿಕಾರಿ ಸುಬ್ರಹ್ಮಣ್ಯಸ್ವಾಮಿ ಅವರಿಗೆ ಲಭಿಸಿತು. ತಕ್ಷಣ‍ವೇ ಗುರುವಾರ ರಾತ್ರಿ ಪೆಡ್ಲರ್‌ಗಳ ಬಂಧನಕ್ಕೆ ಸಿಬ್ಬಂದಿ ಜತೆ ತೆರಳಿದ್ದರು. ಆಗ ಸಿಂಗನಾಯಕನಹಳ್ಳಿ ಬಳಿಯ ಭಗಿನಿ ರೆಸ್ಟೋರೆಂಟ್‌ನಲ್ಲಿ ಸಿಸಿಬಿಗೆ ಓರ್ವ ಆರೋಪಿ ಪತ್ತೆಯಾಗಿದ್ದಾನೆ. ರೆಸ್ಟೋರೆಂಟ್‌ನಿಂದ ಹೊರಬಂದ ಕೂಡಲೇ ಆತನನ್ನು ಹಿಂಬಾಲಿಸಿದ ಸಿಸಿಬಿ ತಂಡ ಮಾವಳ್ಳಿಪುರದಲ್ಲಿರುವ ಮನೆಗೆ ನುಗ್ಗಿ ಬಂಧಿಸಲು ಮುಂದಾಗಿದ್ದಾರೆ. 

ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರ ದಾಳಿ ಆರಂಭ?

ಆ ವೇಳೆ ಮನೆಯಲ್ಲಿದ್ದ ಇಬ್ಬರು ನೈಜೀರಿಯನ್‌ ಪ್ರಜೆಗಳು, ತಮ್ಮನ್ನು ಬಂಧಿಸಲು ಬಂದ ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಆಗ ತಾವು ಸಿಸಿಬಿ ಪೊಲೀಸರು ಎಂದು ಗುರುತಿ ಚೀಟಿ ತೋರಿಸಿದರೂ ಕ್ಯಾರೇ ಎನ್ನದೆ ತನಿಖಾ ತಂಡದ ಜತೆ ಗಲಾಟೆ ಶುರು ಮಾಡಿದ್ದಾರೆ. ತಕ್ಷಣವೇ ವಾಟ್ಸ್ ಆ್ಯಪ್‌ನಲ್ಲಿ ತಮ್ಮ ನಾಲ್ವರು ಸ್ನೇಹಿತರಿಗೆ ಸಂದೇಶ ಕಳುಹಿಸಿ ಆರೋಪಿಗಳು ಕರೆಸಿಕೊಂಡಿದ್ದಾರೆ. ನಂತರ ಪೊಲೀಸರನ್ನು ಮನೆಯಿಂದ ಹೊರಗೆ ತಳ್ಳಿಕೊಂಡು ಬಂದು ವಿದೇಶಿ ಪ್ರಜೆಗಳು ಥಳಿಸಿದ್ದಾರೆ. ಡ್ರ್ಯಾಗರ್‌ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಲು ಆರೋಪಿಗಳು ಯತ್ನಿಸಿದ್ದಾರೆ. ಆಗ ಅವರಿಂದ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಸಿಸಿಬಿ ಪೊಲೀಸರು ಓಡಿ ಬಂದಿದ್ದಾರೆ.

ಅಷ್ಟರಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ನಮ್ಮ 122) ಎಚ್‌ಸಿ ಶಶಿಧರ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ತೆರಳಿದ್ದಾರೆ. ಸಮವಸ್ತ್ರದಲ್ಲಿ ಬಂದ ರಾಜಾನಕುಂಟೆ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದಲ್ಲದೆ ಮಚ್ಚು ಹಾಗೂ ದೊಣ್ಣೆಗಳಿಂದ ವಿದೇಶಿ ಪ್ರಜೆಗಳು ದಾಳಿ ಮಾಡಿದ್ದಾರೆ. ಕೂಡಲೇ ಆ ಗಲಾಟೆಯಿಂದ ತಪ್ಪಿಸಿಕೊಂಡು ಪೊಲೀಸರು ಸುರಕ್ಷಿತರಾಗಿದ್ದಾರೆ. ಗಾಯಾಳು ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಈ ಗೂಂಡಾಗಿರಿ ಪ್ರಕರಣ ಸಂಬಂಧ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ: ಸಿದ್ಧತೆ ಪರಿಶೀಲಿಸಿದ ವಿಜಯೇಂದ್ರ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲು ತೆರಳಿದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ರಾಜಾನುಕುಂಟೆ ಪೊಲೀಸರ ಜತೆ ಸಿಸಿಬಿ ಸಹ ತನಿಖೆ ನಡೆಸಲಿದೆ.
-ಬಿ.ದಯಾನಂದ್, ಪೊಲೀಸ್ ಆಯುಕ್ತ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!