ಮಂಗಳೂರು: ಜ್ಯುವೆಲ್ಲರಿ ಶಾಪ್‌ ದರೋಡೆಗೆ ಸಂಚು, ಕುಖ್ಯಾತ 'ಸಾಹೀಬ್ ಗಂಜ್' ಗ್ಯಾಂಗ್ ಬಲೆಗೆ..!

By Girish GoudarFirst Published Dec 1, 2022, 9:45 AM IST
Highlights

ಜ್ಯುವೆಲ್ಲರಿ ಶಾಪ್‌ಯೊಂದನ್ನು ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ಆಂತಾರಾಜ್ಯ ದರೋಡೆ ಗ್ಯಾಂಗ್‌ನ 9 ಮಂದಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು  

ಮಂಗಳೂರು(ಡಿ.01):  ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿ ಶಾಪ್‌ಯೊಂದನ್ನು ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ಆಂತಾರಾಜ್ಯ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ನವೆಂಬರ್ 30ರ ರಾತ್ರಿ ವೇಳೆಯಲ್ಲಿ ಮಂಗಳೂರು ನಗರದ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್‌ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. 

ಬೆಂಗಳೂರು: ಸೀಕ್ರೆಟ್‌ ಕೋಡ್‌ ಬಳಸಿ ಡ್ರಗ್ಸ್‌ ಪೂರೈಕೆ, 12 ಮಂದಿ ಅರೆಸ್ಟ್‌

ಬಂಧಿತರನ್ನು ಭಾಸ್ಕರ ಬೆಳ್ಚಪಾಡ(65), ಉಮ್ಮರ್ ಗಾಂವ್, ಗಾಂಧಿ ಆಸ್ಪತ್ರೆ ಎದುರು, ಗಾಂಧಿವಾಡಿ, ಗುಜರಾತ್, ದಿನೇಶ್ ರಾವಲ್ @ ಸಾಗರ್ @ ದಿಲ್ಲಿ(38), ಶಾಂತೀಸ್ ಬಾಯಿ, ಕೆ ಎಲ್ ಚಾಲ್, ಶ್ರೀನಾಥಜಿ ವಾಪಿ ಚಾಲ್, ವಲ್ಸಾದ್, ಗುಜರಾತ್. ಖಾಯಂ ವಿಳಾಸ: ಬೋಜಾನ ಜಿಲ್ಲೆ, ಚನ್ನಾ ಗ್ರಾಮ,ಜೈನಪುರ ತಾಲೂಕು, ಕೈಲಾಲಿ ರಾಜ್ಯ , ನೇಪಾಳ, ಮೊಹಮ್ಮದ್ ಜಾಮೀಲ್ ಶೇಖ್(29), ಕಚ್ವಾಕೋಲ, ನಾರಾಯಣಪುರ, ರಾಜಮಹಲ್ ತಾಲೂಕು, ಸಾಹೇಬ್ ಗಂಜ್ ಜಿಲ್ಲೆ, ಜಾರ್ಖಂಡ್,  ಇಂಜಮಾಮ್ ಉಲ್ ಹಕ್(27), ಮಾಣಿಕ ಪಾರಾ. ಪಾಕೂರ್,ಮಾಣಿಕಪಾರಾ, ಪಾಕೂರ್ ಜಿಲ್ಲೆ, ಜಾರ್ಖಂಡ್, ಬಿಸ್ತ ರೂಪ್ ಸಿಂಗ್ (34), ವಾಸ: 7 ವಿಶ್ವಕರ್ಮ ಸೊಸೈಟಿ, ಲಿಂಬಾಯತ್, ಸೂರತ್, ಗುಜರಾತ್ -ಖಾಯಂ ವಿಳಾಸ: ಸುಖಾಡ್ ಸಾಡೆಪಾನಿ ಗ್ರಾಮ, ಕೈಲಾಲಿ ಜಿಲ್ಲೆ, ಅಂಚಲ್ ರಾಜ್ಯ,ನೇಪಾಳ, ಕೃಷ್ಣ ಬಹದ್ದೂರ್ ಬೋಗಟಿ (41), ನೇಪಾಳ, ಇಮ್ದದುಲ್ ರಝಾಕ್ ಶೇಖ್,(32),ಜಾರ್ಖಂಡ್, ಬಿವುಲ್ ಶೇಖ್ (31) ಜಾರ್ಖಂಡ್, ಇಮ್ರಾನ್ ಶೇಖ್ (30) ಜಾರ್ಖಂಡ್ ಎಂದು ಗುರುತಿಸಲಾಗಿದೆ. 

ಆರೋಪಿಗಳೆಲ್ಲರೂ ಉತ್ತರ ಭಾರತ ಮೂಲದ ಕುಖ್ಯಾತ “ಸಾಹೇಬ್ ಗಂಜ್” ದರೋಡೆ ಗ್ಯಾಂಗ್ ನ ಸದಸ್ಯರಾಗಿದ್ದು, ಮಂಗಳೂರು ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ನಂತರ ದರೋಡೆಗೆ ಸಂಚು ರೂಫಿಸಿದ ಸೂಪರ್ ಗೋಲ್ಡ್ & ಡೈಮಂಡ್ಸ್ ಜ್ಯುವೆಲ್ಲರಿಯನ್ನು ಗುರುತಿಸಿಕೊಂಡಿದ್ದರು ಎನ್ನಲಾಗಿದೆ.

ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಅಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ಸೊತ್ತುಗಳನ್ನು ವಶಕ್ಕೆ ‌ಪಡೆಯಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Cyber Crimes: ಕ್ರಿಸ್ಮಸ್, ಹೊಸ ವರ್ಷದ ರಜಾ ಅವಧಿಯಲ್ಲಿ ಸೈಬರ್ ವಂಚಕರು ಸಕ್ರಿಯ, ಹುಷಾರ್

ಇತ್ತೀಚೆಗೆ ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನದ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಅವರಿಂದ  ಸ್ಕೂಟರ್ ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದರು. ಈ ಸ್ಕೂಟರ್ ನ ಪತ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಇದೇ ಸಾಹೇಜ್ ಗಂಜ್ ದರೋಡೆ ಗ್ಯಾಂಗ್ ನ ಆರೋಪಿಗಳು ಜ್ಯುವೆಲ್ಲರಿ ದರೋಡೆ ನಡೆಸಲು ಸಂಚು ರೂಪಿಸುವ ಸಮಯ ಸ್ಥಳೀಯವಾಗಿ ಓಡಾಟದ ಸಲುವಾಗಿ ಈ ಸ್ಕೂಟರ್ ಗಳ ಸವಾರರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿ ಉಪಯೋಗಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ಏನಿದು ಸಾಹೇಜ್ ಗಂಜ್ ಗ್ಯಾಂಗ್?

ಸಾಹೇಬ್ ಗಂಜ್ ಗ್ಯಾಂಗ್ ಎಂಬುವುದು ಉತ್ತರ ಭಾರತದ ಜಾರ್ಖಂಡ್ ರಾಜ್ಯದ ಕುಖ್ಯಾತ ದರೋಡೆ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿ ನೇಪಾಳ ದೇಶದ ಪ್ರಜೆಗಳು ಕೂಡ ಇದ್ದಾರೆ. ಇವರು ಪ್ರಮುಖವಾಗಿ ದೊಡ್ಡ ದೊಡ್ಡ ನಗರಗಳಲ್ಲಿನ ಬ್ಯಾಂಕ್, ಜ್ಯುವೆಲ್ಲರಿ ಅಂಗಡಿಗಳನ್ನು ಗುರುತಿಸಿ ಅಲ್ಲಿಯ ಪರಿಸರದಲ್ಲಿ ಬಾಡಿಗೆಗೆ ಮನೆ/ಲಾಡ್ಜ್ ಗಳನ್ನು ಮಾಡಿಕೊಂಡು ಸ್ಥಳೀಯವಾಗಿ ದರೋಡೆ ಮಾಡಲು ಬೇಕಾದ ಸಲಕರಣೆಗಳನ್ನು ಖರೀದಿಸಿಕೊಂಡು ನಂತರ ಜ್ಯುವೆಲ್ಲರಿ ಅಂಗಡಿ, ಬ್ಯಾಂಕ್ ಗಳ ಗೋಡೆ ಕನ್ನ ಕೊರೆದು, ಗ್ಲಾಸ್ ಕಟ್ಟರ್ ಮೂಲಕ ತಿಜೋರಿಯನ್ನು ಒಡೆದು ಕೋಟ್ಯಾಂತರ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡುವ ಕುಖ್ಯಾತ ಗ್ಯಾಂಗ್ ಆಗಿದೆ. ಈ ಗ್ಯಾಂಗ್ ನಲ್ಲಿದ್ದವರು ದೇಶದ ವಿವಿಧಡೆಗಳಲ್ಲಿ ಈ ಹಿಂದೆ ನಡೆದ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ. ಈ ಗ್ಯಾಂಗ್ ನಲ್ಲಿ ನೇಪಾಳ ದೇಶದ ಹಲವಾರು ಮಂದಿ ಆರೋಪಿಗಳಿದ್ದು, ಇವರು ಕೃತ್ಯ ನಡೆಸಿದ ನಂತರ ಸೊತ್ತಿನೊಂದಿಗೆ ನೇಪಾಳಕ್ಕೆ ಪರಾರಿಯಾಗುತ್ತಿದ್ದರು ಎನ್ನಲಾಗಿದೆ.
 

click me!