ಗುಂಪು ಹತ್ಯೆ ಎಫ್‌ಐಆರ್‌ಗೂ ಮುನ್ನ ಹಿರಿಯ ಅಧಿಕಾರಿಗಳ ಒಪ್ಪಿಗೆ ಪಡೆಯಿರಿ : ಡಾ.ಎಂ.ಸಲೀಂ

Kannadaprabha News   | Kannada Prabha
Published : Jul 26, 2025, 07:50 AM IST
Dr Ma Saleem

ಸಾರಾಂಶ

ಗುಂಪು ಹತ್ಯೆ ಕೃತ್ಯಗಳ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ಹಿರಿಯ ಅಧಿಕಾರಿಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು : ಗುಂಪು ಹತ್ಯೆ ಕೃತ್ಯಗಳ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ಹಿರಿಯ ಅಧಿಕಾರಿಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

ಕೇಂದ್ರ ಗೃಹ ಕಾರ್ಯದಶಿಗಳ ಸೂಚನೆ ಹಿನ್ನೆಲೆಯಲ್ಲಿ ಗುಂಪು ಹತ್ಯೆ ಕೃತ್ಯದ ಸಂಬಂಧ ಎಫ್‌ಐಆರ್ ದಾಖಲು ಪ್ರಕ್ರಿಯೆ ಬಗ್ಗೆ ಡಿಜಿ-ಐಜಿಪಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಎಲ್ಲಾ ಠಾಣಾಧಿಕಾರಿಗಳು ಹಾಗೂ ತನಿಖಾಧಿಕಾರಿಗಳು ಪ್ರಥಮ ವರ್ತಮಾನ ವರದಿಯಲ್ಲಿ ಗುಂಪು ಹತ್ಯೆ ಆರೋಪದ 304, 103(2), 111 & 113(2) ಅಳವಡಿಸಿಕೊಳ್ಳುವ ಮುನ್ನ ಮೇಲಾಧಿಕಾರಿಗಳ ಅನುಮೋದನೆ ಪಡೆದುಕೊಳ್ಳ ಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಸೂಚನೆಗಳು ಹೀಗಿವೆ:

1.ದೂರುದಾರರು ಸಲ್ಲಿಸುವ ದೂರನ್ನು ಸ್ವೀಕರಿಸಿದಾಗ ಅದರಲ್ಲಿ ಭಾರತ ನ್ಯಾಯ ಸಂಹಿತೆ-2023 ರ ಅಪರಾಧಿಕ ಕಲಂ ಗಳಾದ 304, 103(2), 111 & 113(ಬಿ) ಗಳ ಅಪರಾಧಿಕ ಅಂಶಗಳು ಮೇಲ್ನೋಟಕ್ಕೆ ಕಂಡುಬರುತ್ತವೆಯೇ ಎಂಬುದನ್ನು ಪರಿಶೀಲಿಸುವುದು.

2. ಸದರಿ ದೂರಿನಲ್ಲಿ ಮೇಲ್ಕಾಣಿಸಿದ ಅಪರಾಧಿಕ ಅಂಶಗಳು ಕಂಡು ಬಂದರೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಬಳಿಕ ಅಧಿಕಾರಿಗಳ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಬೇಕು.

3.ಜಿಲ್ಲಾ ಮಟ್ಟದಲ್ಲಿ ಎಸ್ಪಿ ಹಾಗೂ ಕಮಿಷನರೇಟ್‌ಗಳಲ್ಲಿ ಡಿಸಿಪಿ ಅವರಿಗೆ ಅನುಮೋದನೆ ನೀಡುವ ಅಧಿಕಾರವಿದೆ.

4. ಒಂದು ವೇಳೆ ಕಾನೂನು ಮತ್ತು ಸುವ್ಯವಸ್ಥೆ ಅಥವಾ ಸಾರ್ವಜನಿಕ ಸುರಕ್ಷತೆಯ ತುರ್ತು ಸಂದರ್ಭಗಳಲ್ಲಿ ಲಿಖಿತವಾಗಿ ಕೋರಿಕೆ ಸಲ್ಲಿಸಲು ಮತ್ತು ಅನುಮೋದನೆ ಪಡೆದುಕೊಳ್ಳಲು ಸಾಧ್ಯವಾಗದಿದ್ದಲ್ಲಿ, ಆಗ ಸಂಬಂಧಿಸಿದ ಠಾಣಾಧಿಕಾರಿ/ತನಿಖಾಧಿಕಾರಿಗಳು ಮೌಖಿಕವಾಗಿ ತಮ್ಮ ಕೋರಿಕೆ ಸಲ್ಲಿಸಿ ಹಿರಿಯ ಅಧಿಕಾರಿಯಿಂದ ಮೌಖಿಕವಾಗಿ ಅನುಮೋದನೆಯ ಆದೇಶ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಬೇಕು. ನಂತರ 24 ಘಂಟೆಯೊಳಗಾಗಿ ಲಿಖಿತ ರೂಪದಲ್ಲಿ ಘಟನೋತ್ತರ ಅನುಮೋದನೆ ಪಡೆದುಕೊಳ್ಳಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!