ಕರ್ರಿ ಮಾಡಿ ಅನ್ನ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಲೆಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಸೋಮವಾರ ಬಂಧಿಸಿರುವ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಸಂಬಲ್‌ಪುರ (ಮೇ 9, 2023): ಇತ್ತೀಚೆಗೆ ಗಂಡ - ಹೆಂಡತಿಯ ನಡುವೆ ವಿರಸ, ಗಂಡ - ಹೆಂಡತಿಯನ್ನು ಕೊಲೆ ಮಾಡುವುದು ಅಥವಾ ಹೆಂಡತಿಯೇ ಗಂಡನನ್ನು ಹತ್ಯೆ ಮಾಡುವ ಪ್ರಕರಣ ಸಾಕಷ್ಟು ಕೇಳಿಬರುತ್ತಿದೆ. ಸಿಲ್ಲಿ ಕಾರಣಗಳಿಗೂ ಈ ಹತ್ಯೆ ನಡೆಯುತ್ತಿದೆ. ಇದೇ ರೀತಿ, ಒಡಿಶಾದಲ್ಲಿ ಅನ್ನ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹೌದು, ಕರ್ರಿ ಮಾತ್ರ ಮಾಡಿ ಅನ್ನ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಲೆಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಸೋಮವಾರ ಬಂಧಿಸಿರುವ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು 40 ವರ್ಷದ ಸನಾತನ್ ಧಾರುವಾ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯನ್ನು 35 ವರ್ಷದ ಪುಷ್ಪಾ ಧರುವಾ ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್: ತಾನು ನಿರಪರಾಧಿ, ವಿಚಾರಣೆ ಎದುರಿಸಲು ಸಿದ್ಧ ಎಂದ ಅಫ್ತಾಬ್ ಪೂನಾವಾಲ
ಸನಾತನ್ ಧಾರುವಾ ಮತ್ತು ಅವರ ಪುಷ್ಪಾ ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗನಿದ್ದಾರೆ. ಅವರ ಮಗಳು ಕುಚಿಂದಾದಲ್ಲಿ ಮನೆಗೆಲಸ ಮಾಡುತ್ತಿದ್ದು, ಮಗ ಭಾನುವಾರ ರಾತ್ರಿ ಮಲಗಲು ತನ್ನ ಸ್ನೇಹಿತನ ಮನೆಗೆ ಹೋಗಿದ್ದ ಎಂದು ತಿಳಿದುಬಂದಿದೆ. ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ಪತಿ ಸನಾತನ್ ಧಾರುವಾ ಮನೆಗೆ ವಾಪಸ್ ಆಗಿದ್ದು, ಈ ವೇಳೆ ರಾತ್ರಿ ಊಟಕ್ಕೆ ಪತ್ನಿ ಕರ್ರಿಯನ್ನು ಮಾತ್ರ ಮಾಡಿದ್ದಳು. ಆದರೆ, ಅನ್ನಮಾಡಿರಲಿಲ್ಲ.
ಈ ಕಾರಣಕ್ಕೆ ಗಂಡ - ಹೆಂಡತಿ ನಡುವೆ ವಾಗ್ವಾದಕ್ಕೆ ಕಾರಣವಾಗಿದ್ದು, ಈ ಸಮಯದಲ್ಲಿ ಸನಾತನ್ ಧಾರುವಾ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಮಹಿಳೆಯ ಮಗ ಮನೆಗೆ ಹಿಂತಿರುಗಿದ ಬಳಿಕ ತಾಯಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ. ನಂತರ, ಆತ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಂತರ ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಪ್ಲಾಸ್ಟಿಕ್ ಗನ್ ಬಳಸಿ ಚಿನ್ನಾಭರಣಗಳನ್ನು ಲೂಟಿ ಮಾಡಿದ 16 ವರ್ಷದ ಬಾಲಕ!
ಇನ್ನು, ಈ ಘಟನೆ ಬಗ್ಗೆ ಜಮನಕಿರಾ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ಪ್ರೇಮ್‌ಜಿತ್ ದಾಸ್ ಮಾಹಿತಿ ನೀಡಿದ್ದು, ‘’ಸೋಮವಾರ ಶವಪರೀಕ್ಷೆ ನಡೆಸಲಾಗಿದೆ ಹಾಗೂ ನಂತರ ಆರೋಪಿ ಪತಿಯನ್ನು ವಶಕ್ಕೆ ಪಡೆಯಲಾಗಿದೆ’’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ವೃದ್ಧನ ಮೃತದೇಹ 2 ವರ್ಷ ಫ್ರೀಜರ್‌ನಲ್ಲಿಟ್ಟ: ಪಿಂಚಣಿ ಹಣವನ್ನು ಶಾಪಿಂಗ್‌ಗೆ ಬಳಸ್ತಿದ್ದ ಪಾಪಿ!