ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಮತ್ತೋರ್ವ ಆರೋಪಿ ಅರೆಸ್ಟ್

By Ramesh BFirst Published Aug 9, 2022, 6:17 PM IST
Highlights

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಮಂಗಳೂರು, (ಆಗಸ್ಟ್.09): ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್  ಸಿ.ಎ(33) ಎನ್ನುವಾತನನ್ನು ಇಂದು(ಆಗಸ್ಟ್ 9) ಬೆಳ್ಳಾರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಆರೋಪಿಗಳ ಸಂಖ್ಯೆ ಏಳಕ್ಕೆ ಎರಿಕೆಯಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ತನಿಖೆ ಕೈಗೆತ್ತಿಕೊಳ್ಳಲು NIAಗೆ ಕೇಂದ್ರ ಗೃಹ ಇಲಾಖೆ ಆದೇಶ

ಪ್ರವೀಣ್ ಹತ್ಯೆ ಕೇಸ್ ನಲ್ಲಿ ಬೆಳ್ಳಾರೆ ಪೊಲೀಸರು ಈವರೆಗೆ  ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ. ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್ ಬಂಧನವಾಗಿತ್ತು.  ಅಗಸ್ಟ್ 1ರಂದು ಪಲ್ಲಿಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್ ಎನ್ನುವರನ್ನು ಅರೆಸ್ಟ್ ಮಾಡಲಾಗಿತ್ತು.  ಅಗಸ್ಟ್ 07 ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಮತ್ತು ಬೆಳ್ಳಾರೆ ನಿವಾಸಿ ನೌಫಲ್(28) ಬಂಧನವಾಗಿದೆ. ಇದೀಗ ಏಳನೇ ಆರೋಪಿ ಅಬ್ದುಲ್ ಕಬೀರ್ ನನ್ನು ಅರೆಸ್ಟ್ ಮಾಡಲಾಗಿದೆ.

ಇನ್ನು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾತ್ರ ಇನ್ನೂ ಸಿಕ್ಕಿಲ್ಲ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಪೊಲೀಸರುಹುಡುಕಾಟ  ಮುಂದುವರಿಸಿದ್ದಾರೆ. 

ಪ್ರಕರಣ
ಪ್ರವೀಣ್ ನೆಟ್ಟಾರ್ ಅವರು ಬೆಳ್ಳಾರೆಯಲ್ಲಿ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಎಂಬ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಜು 26 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಪ್ರವೀಣ್ ತನ್ನ ಬೈಕ್ ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್ ವೊಂದರಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ಮಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬದುಕಿ ಉಳಿಯಲಿಲ್ಲ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪ್ರವೀಣ್ ಅವರ ಅಂಗಡಿಯಲ್ಲಿ ಕೋಳಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಮಧು ಕುಮಾರ್ ರಾಯನ್ ಎಂಬವರು ದೂರು ನೀಡಿದ್ದರು.

click me!