ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(FTII)ಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಿಂಗಳೊಳಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.
ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(FTII)ಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಿಂಗಳೊಳಗೆ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. ಆಕ್ಟಿಂಗ್ ವಿಷಯದಲ್ಲಿ ಮೂರನೇ ವರ್ಷದ ಪಿಜಿ ಡಿಪ್ಲೋಮಾ ಮಾಡುತ್ತಿದ್ದ 25 ವರ್ಷದ ಯುವತಿ ಕಾಮಾಕ್ಷಿ ಬೊಹರಾ(Kamakshi Bohara) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಉತ್ತರಾಖಂಡ್‌ನ (Uttarakhand) ನೈನಿತಲ್ (Nainital) ನಿವಾಸಿಯಾಗಿದ್ದಳು. ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಂತೆಯೇ ಈಕೆಯೂ ಕೂಡ ಒಂಟಿ ಆಗಿದ್ದಳು ಎಂದು ವರದಿಗಳು ತಿಳಿಸಿವೆ. ಗುರುವಾರ ರಾತ್ರಿ ತನ್ನ ಹಾಸ್ಟೆಲ್ ಕೊಠಡಿಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ.
ಗುರುವಾರ ಬೆಳಗ್ಗೆಯೇ ಈಕೆ ತನ್ನ ಬೆಡ್‌ಶೀಟ್‌ನ್ನು ಬಳಸಿ ನೇಣಿಗೆ ಶರಣಾಗಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿಲ್ಲ. ಕೆಲ ಮಾಹಿತಿಗಳ ಪ್ರಕಾರ ಬೊಹರಾ ಅವರು ಪ್ರತಿದಿನ ಕಾಲೇಜಿನಲ್ಲಿ ಉಪನ್ಯಾಸಕರನ್ನು ಭೇಟಿಯಾಗುತ್ತಿದ್ದಳು. ಆದರೆ ಅಂದು ಬಾರದೆ ಇದ್ದು, ದೂರವಾಣಿ ಕರೆಯನ್ನು ಸ್ವೀಕರಿಸದೇ ಇದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರು ಆಕೆ ಇದ್ದ ಹಾಸ್ಟೆಲ್‌ಗೆ ಕೆಲ ವಿದ್ಯಾರ್ಥಿಗಳನ್ನು ಕಳಿಸಿ ನೋಡಿ ಬರುವಂತೆ ತಿಳಿಸಿದ್ದರು. ಯಾರೊಂದಿಗೂ ಬೆರೆಯದೇ ಸದಾ ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿ ಕಾಮಾಕ್ಷಿ ಬೊಹರಾಳ ಗುಣ ತಿಳಿದಿದ್ದ, ಉಪನ್ಯಾಸಕರು ವಿದ್ಯಾರ್ಥಿಗಳನ್ನು ಕಳಿಸಿದ್ದರು. ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ತೆರಳಿ ಆಕೆಯ ರೂಮ್ ಬಳಿ ಹೋದಾಗ ಬಾಗಿಲು ಹಾಕಿತ್ತು. ಬಾಗಿಲು ಬಡಿದರು ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಅವರು ಭದ್ರತಾ ಸಿಬ್ಬಂದಿಯನ್ನು ಕರೆದಿದ್ದಾರೆ. ನಂತರ ಅವರು ಬಂದು ಬಾಗಿಲು ಮುರಿದು ನೋಡಿದಾಗ ಮೃತದೇಹ ಫ್ಯಾನ್‌ಗೆ ನೇತು ಹಾಕಿಕೊಂಡಿರುವುದು ಕಂಡು ಬಂದಿದೆ.
ಹೋಮ್‌ವರ್ಕ್ ಮಾಡಿಲ್ಲ: ಶಿಕ್ಷೆಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ನಂತರ ಹಾಸ್ಟೆಲ್ ಸಿಬ್ಬಂದಿ ಡಾಕ್ಟರ್ ಜೊತೆ ಪೊಲೀಸರಿಗೂ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಹಾಸ್ಟೆಲ್ ವ್ಯಾಪ್ತಿಯಲ್ಲಿ ಬರುವ ಡೆಕ್ಕನ್ ಪೊಲೀಸ್ ಠಾಣೆಯ ಒಂದು ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಕೆಳಗಿಳಿಸಿ ಸಮೀಪದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದೆ. ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮುರಲೀಧರ್ ಕರ್ಪೆ ( Muralidhar Karpe) ನಮಗೆ ಫಿಲಂ ಇನ್ಸ್ಟಿಟ್ಯೂಟ್‌ನಿಂದ ಈ ಬಗ್ಗೆ ಕರೆ ಬಂತು, ಕಾಮಾಕ್ಷಿ ಬೆಡ್‌ಶಿಟ್ ಬಳಸಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾಳೆ. ಆಕೆ ಯಾವಾಗಲೂ ಒಬ್ಬಂಟಿಯಾಗಿದ್ದು, ಚಿಂತೆಯಿಂದ ಇರುತ್ತಿದ್ದಳು. ನಮಗೆ ಅಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡಾಕೆಯ ಪೋಷಕರು ನೈನಿತಲ್‌ನಲ್ಲಿ ಇದ್ದು ನಾವು ಅವರಿಗೆ ಮಾಹಿತಿ ನೀಡಿದ್ದೇವೆ. ಅವರು ಆಗಮಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಧ್ಯಮಗಳು ಎಫ್‌ಟಿಐಐನ್ನು(FTTI) ಸಂಪರ್ಕಿಸಿದ್ದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.
Bengaluru Crime News: ಕಾಲೇಜು ಹಾಸ್ಟೆಲಲ್ಲಿ ಇಂಜಿನಿಯರಿಂಗ್ ಸ್ಟುಡೆಂಟ್ ಆತ್ಮಹತ್ಯೆ
ಕಾಮಾಕ್ಷಿ ಬೊಹರಾ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಸರಿಸುಮಾರು ಒಂದು ತಿಂಗಳ ಹಿಂದೆ ಅಂದರೆ ಆಗಸ್ಟ್ 5 ರಂದು 32 ವರ್ಷದ ಅಶ್ವಿನ್ ಅನುರಾಗ್ ಶುಕ್ಲಾ (Ashwin Anurag Shukla) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರು ಕೆಲವು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕಾಗಿ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರು. ಪುಣೆ ಫಿಲಂ ಇನ್ಸ್ಟಿಟ್ಯೂಟ್‌ನಲ್ಲಿ ಸಿನಿಮಾಟೋಗ್ರಾಫರ್ ಕೋರ್ಸ್ ಅಧ್ಯಯನ ಮಾಡುತ್ತಿದ್ದ ಅವರು, ತಮ್ಮ ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ಬಳಿಕ ಮೃತದೇಹದ ದುರ್ವಾಸನೆ ಇಡೀ ಹಾಸ್ಟೆಲ್‌ಗೆ ವ್ಯಾಪಿಸಿದ ನಂತರ ಅವರು ಬಾಗಿಲು ಒಡೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಇದು ವಿದ್ಯಾರ್ಥಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹಾಸ್ಟೆಲ್‌ಗೆ ದೀರ್ಘಕಾಲದಿಂದ ವಾರ್ಡನ್ ನೇಮಕ ಮಾಡದೇ ಇರುವುದು ಸೇರಿದಂತೆ ಹಲವು ಆರೋಪಗಳನ್ನು ವಿದ್ಯಾರ್ಥಿಗಳು ಮಾಡಿದ್ದರು.