ಆತ ಹೋಟೆಲ್ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಆದರೆ ಸಹಪಾಠಿಯಿಂದ ಆತನ ಕೊಲೆಯಾಗಿದೆ. ಧಾರವಾಡದಲ್ಲಿ ಒಟ್ಟು 4 ಕೊಲೆಗಳು ನಡೆದಿದ್ದು ಜನ ಬೆಚ್ಚಿ ಬಿದ್ದಿದ್ದಾರೆ.
ವರದಿ : ಪರಮೇಶ್ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಫೆ.7): ಆತ ಹೋಟೆಲ್ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೇರೆ ಊರಿನಲ್ಲಿ ಹೋಟೆಲ್ ಒಂದರಲ್ಲಿ ಕೆಲಸ ಮಾಡಿ ಧಾರವಾಡದ ಹೋಟೆಲ್ ಒಂದಕ್ಕೆ ಬಂದು ತಂದೂರಿ ರೊಟ್ಟಿ ಮಾಡುವ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ, ಮಧ್ಯರಾತ್ರಿ ವಿಧಿ ಆತನ ಜೀವನದಲ್ಲಿ ಚೆಲ್ಲಾಟವಾಡಿ ಮಸಣಕ್ಕೆ ಕೊಂಡೊಯ್ದಿದೆ.
ಕೊಲೆಯಾದ ವ್ಯಕ್ತಿಯ ಹೆಸರು ಫಕ್ಕೀರೇಶ ಪ್ಯಾಟಿ (40) ಈತ ಮೂಲತಃ ಶಿರಹಟ್ಟಿ ತಾಲೂಕಿನ ಸುಗನಳ್ಳಿ ಗ್ರಾಮದವನು. ಕೆಲ ವರ್ಷಗಳ ಹಿಂದೆ ಧಾರವಾಡದ ವಿಮಲ್ ಹೋಟೆಲ್‌ನಲ್ಲಿ ತಂದೂರಿ ರೊಟ್ಟಿ ಮಾಡುವ ಕೆಲಸಕ್ಕೆ ಸೇರಿಕೊಂಡಿದ್ದ. ಈತನ ಜೊತೆಗೆ ದಾಂಡೇಲಿ ಮೂಲದ ಕನ್ಯಯಪ್ಪ ಕನಯ್ಯ ಎಂಬ ವ್ಯಕ್ತಿ ಕೂಡ ಅದೇ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಕೆಲ ವರ್ಷಗಳ ಕಾಲ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದರು. ಆದರೆ, ನಿನ್ನೆ ಇವರಿಬ್ಬರ ಮಧ್ಯೆ ಉಂಟಾದ ಗಲಾಟೆ ಕೊನೆಗೆ ಫಕ್ಕೀರೇಶನ ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರು ಬಂದು ಪಿಜಿ ಸೇರಿಕೊಳ್ಳುವ ಹೆಣ್ಣು ಮಕ್ಕಳೇ ಹುಷಾರ್, ಅವ್ಯವಸ್ಥೆ ಪ್ರಶ್ನಿಸಿದ್ರೆ ಗೂಂಡಾಗಿರಿ!
ರಾತ್ರಿ ಇವರಿಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದೆ. ನಡು ರಾತ್ರಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ ಕೊನೆಗೆ ಕನ್ಯಯಪ್ಪ ಎಂಬಾತ ಕಬ್ಬಿಣದ ರಾಡ್‌ನಿಂದ ಫಕ್ಕೀರೇಶನ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾನೆ. ಕೊನೆಗೆ ರಕ್ತದ ಮಡುವಿನಲ್ಲಿ ಬಿದ್ದ ಫಕ್ಕೀರೇಶ ಸ್ಥಳದಲ್ಲೇ ಅಸುನೀಗಿದ್ದಾನೆ. ನಡುರಾತ್ರಿ 2 ಗಂಟೆಯ ಸುಮಾರಿಗೆ ಫಕ್ಕೀರೇಶನ ಕುಟುಂಬಸ್ಥರಿಗೆ ಈ ವಿಷಯ ತಿಳಿಸಿದ್ದು, ಆತನ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಶವಾಗಾರದ ಮುಂದೆ ಬಂದು ನಿಂತು ಕಣ್ಣೀರು ಹಾಕುತ್ತಿದ್ದಾರೆ.
ಇನ್ನು ಧಾರವಾಡ ಶಹರದಲ್ಲಿ ನಾಲ್ಕು ದಿನಕ್ಕೆ ನಾಲ್ಕನೆಯ ಕೊಲೆ ಆಗಿದೆ. ಆದರೆ ಅವಳಿ ನಗರದಲ್ಲಿ ಪೋಲಿಸರ ಭಯವಿಲ್ಲದಂತಾಗಿದೆ. ವಿದ್ಯಾಕಾಶಿ ಧಾರವಾಡದಲ್ಲಿ ಕೊಲೆಗಳ ಪ್ರಕರಣವನ್ನ ನೋಡಿ ಜನರು ಭಯಬೀತರಾಗಿದ್ದಾರೆ. ಆದರೆ ಜಿಲ್ಲೆಯಲ್ಲಿ ಯವಕರ ಕೊಲೆಯಾಗುತ್ತಿದೆ. ಅದರಲ್ಲೂ ಪೋಲಿಸ್ ಇಲಾಖೆ ಜನರಲ್ಲಿ ಕಾನೂನು ಅರಿವು ಮೂಡಿಸುವ ಯಾವುದೇ ಕಾರ್ಯಕ್ರಮಗಳನ್ನ ಮಾಡುತ್ತಿಲ್ಲ ಎಂದು ಸ್ಥಳಿಯರು ಮಾತನಾಡಿಕ್ಕೊಳ್ಳುತ್ತಿದ್ದಾರೆ.
ಪತಿಯ ಜೊತೆಗೆ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ
ಫೆಬ್ರವರಿ 4 ರಿಂದ 7 ರವೆಗೆ ನಾಲ್ಕು ಕೊಲೆಗಳು ನಡೆದಿವೆ. ಅದರಲ್ಲೂ ಯುವಕರೇ ಹೆಚ್ಚಿನ ಪ್ರಮಾಣದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇನ್ನು ಕೊಲೆ ಆರೋಪಿಗಳಿಗೆ ಯಾವುದೇ ಭಯ ವಿಲ್ಲದಂತಾಗಿದೆ. ಇದರಿಂದ ಯುವಕರು ಕೂಡಾ ಪೋಲಿಸರಿಗೆ ಹೆದರದೆ ಇರೋ ಕಾರಣಕ್ಕೆ ಕೊಲೆ ಪ್ರಕರಣಗಳು ನಡೆಯುತ್ತಿವೆ.
ಕ್ಷುಲ್ಲಕ ಕಾರಣಕ್ಕಾಗಿ ಹೋಟೆಲ್ ಸಪ್ಲೈಯರ್ ಹಾಗೂ ತಂದೂರಿ ರೊಟ್ಟಿ ಮಾಡುವವನ ಮಧ್ಯೆ ನಡೆದ ಗಲಾಟೆ ಕೊನೆಗೆ ಓರ್ವನ ಬಲಿ ಪಡೆದುಕೊಂಡಿದೆ. ನಡುರಾತ್ರಿ ನಡೆದ ಈ ಘಟನೆ ಧಾರವಾಡಿಗರನ್ನು ಮತ್ತೆ ಬೆಚ್ಚಿ ಬೀಳಿಸಿದೆ. ಕಳೆದ ನಾಲ್ಕು ದಿನಗಳಿಂದ ನಾಲ್ಕು ಕೊಲೆಗಳು ಧಾರವಾಡದಲ್ಲಿ ನಡೆದಿದ್ದು, ಇದರಿಂದ ವಿದ್ಯಾಕಾಶಿ ಎಂದು ಹೆಸರು ಪಡೆದಿರುವ ಧಾರವಾಡ ಕುಖ್ಯಾತಿಯತ್ತ ಸಾಗುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆ.