ರಂಜಾನ್ ಹಬ್ಬದ ಸಂದರ್ಭದಲ್ಲಿ ಇಲ್ಲಿಯ ರಸ್ತೆಯೊಂದರಲ್ಲಿ ನಮಾಜ್ ಮಾಡುವ ಮೂಲಕ ಸಂಚಾರ ದಟ್ಟಣೆಯನ್ನು ಉಂಟು ಮಾಡಿದ ಆರೋಪದ ಮೇಲೆ 200 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮೇರಠ್: ರಂಜಾನ್ ಹಬ್ಬದ ಸಂದರ್ಭದಲ್ಲಿ ಇಲ್ಲಿಯ ರಸ್ತೆಯೊಂದರಲ್ಲಿ ನಮಾಜ್ ಮಾಡುವ ಮೂಲಕ ಸಂಚಾರ ದಟ್ಟಣೆಯನ್ನು ಉಂಟು ಮಾಡಿದ ಆರೋಪದ ಮೇಲೆ 200 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮಸೀದಿಯಲ್ಲಿ ನಮಾಜ್ ಮಾಡಲು ಸ್ಥಳ ಇಲ್ಲದಿದ್ದರಿಂದ ಕೆಲವರು ರಸ್ತೆಯಲ್ಲೇ ನಮಾಜ್ ಮಾಡಿದ್ದು, ಇದರಿಂದ ಸಂಚಾರ ದಟ್ಟಣೆ ಉಂಡಾಗಿದೆ. ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆಂದು ರೈಲ್ವೇ ರೋಡ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶುಕ್ರವಾರ ದೂರು ನೀಡಿದ್ದರು. ಈ ದೂರಿಗೆ ಸಂಬಂಧಿಸಿದಂತೆ 200 ಮಂದಿ ಮೇಲೆ ಸಂಚಾರ ದಟ್ಟಣೆ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Lok sabha election 2024: ಮಂಡಿಯಲ್ಲಿ ಕಂಗನಾ ವಿರುದ್ಧ ವಿಕ್ರಮಾದಿತ್ಯ ಸ್ಪರ್ಧೆ?
ಬದೌನ್‌ನಲ್ಲಿ ಗುರುತಿಸಲ್ಪಟ್ಟಿರುವ 16 ಮತ್ತು ಇತರೆ 34 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 143, 186, 188, 243 ಮತ್ತು 341 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು. ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ತಿಳಿಸಿದ್ದಾರೆ.