ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಮಾನ್ವಿ (ಜೂ.23): ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದ ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ನಂದಿಹಾಳ ಸಮೀಪದಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯನ್ನು ಸಣ್ಣ ಪುಟ್ಟಗಾಯಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬೆಂಗಳೂರಿನ ಕುರುಬರಹಳ್ಳಿಯ ಚಾಲಕರ ಸಂಘದ 30ಕ್ಕೂ ಹೆಚ್ಚು ಸದಸ್ಯರು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಂದು ಶ್ರೀಗುರುರಾಯರ ದರ್ಶನ ಪಡೆದು ಮರಳಿ ಬೆಂಗಳೂರಿಗೆ ಹೋಗುತ್ತಿದ್ದಾಗ ಮಾನ್ವಿ ಪಟ್ಟಣದ ಹೊರವಲಯದ ಸಿಂಧನೂರು ರಸ್ತೆಯಲ್ಲಿ ಬರುವ ನಂದಿಹಾಳ ಗ್ರಾಮದ ಬಳಿ ಬಸ್‌ಗೆ ದ್ವಿಚಕ್ರ ವಾಹನದ ಅಡ್ಡಿ ಬಂದಿದ್ದು, ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ.
undefined
ಪರಿಣಾಮ ಪ್ರಯಾಣಿಕರಿಗೆ ಸಣ್ಣ-ಪುಟ್ಟಗಾಯಗಳಾಗಿದ್ದು, ಅವರನ್ನು ಮಾನ್ವಿ ತಾಲೂಕಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಬಸ್ ಚಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಾಂಡವಪುರ ತಹಶೀಲ್ದಾರ್ ಸೌಮ್ಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಗರ್ಡಾಡಿ ಗ್ರಾಮದ ಮೊಗೆರಡ್ಕ ಕ್ರಾಸ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಮೃತ ಯುವಕ ಕೇರಳದ ಕಾಸರಗೋಡು ನಿವಾಸಿ ದೀಕ್ಷಿತ್ (19) ಎಂದು ಗುರುತಿಸಲಾಗಿದೆ. ಬುಧವಾರ ದೀಕ್ಷಿತ್‌ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಗರ್ಡಾಡಿ ಮೊಗೆರಡ್ಕ ಕ್ರಾಸ್‌ನಲ್ಲಿ ಎದುರಿನಿಂದ ಬಂದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಅತಿಯಾದ ವೇಗದಲ್ಲಿ ಲಾರಿಯೊಂದನ್ನು ಓವರ್ ಟೇಕ್ ಮಾಡುತ್ತಾ ರಸ್ತೆಯ ತೀರಾ ಬಲ ಭಾಗಕ್ಕೆ ಬಂದಿದ್ದು ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗೊಂಡ ದೀಕ್ಷಿತ್‌ನನ್ನು ಸ್ಥಳೀಯರು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಆವೇಳೆಗಾಗಲೇ ಆತ ಮೃತಪಟ್ಟಿದ್ದ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರಾಎ.
ಇನ್ನೊಂದು ವಾರದಲ್ಲಿ 3500 ಪೊಲೀಸ್ ಕಾನ್‌ಸ್ಟೇಬಲ್ ನೇಮಕ: ಸಚಿವ ಪರಮೇಶ್ವರ್
ದೀಕ್ಷಿತ್ ವೇಣೂರಿನ ಎಸ್.ಡಿ.ಎಂ ಐಟಿಐಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಉತ್ತಮ ಕ್ರೀಡಾಪಟುವೂ ಆಗಿದ್ದ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಈತ ಕಂಬಳದ ಓಟಗಾರನೂ ಆಗಿದ್ದ. ಈತ ಕುವೆಟ್ಟು ಗ್ರಾಪಂ ವ್ಯಾಪ್ತಿಯ ಒಡೀಲ್‌ನಲ್ಲಿರುವ ತನ್ನ ಮಾವನ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ.