ವಿಜಯಪುರ: ಕೂಲಿ ಕಾರ್ಮಿಕರ ಮೇಲೆ ಮನಸೋಇಚ್ಛೆ ಥಳಿಸಿದ ಮಾಲೀಕ!

Published : Jan 21, 2025, 07:46 AM IST
ವಿಜಯಪುರ: ಕೂಲಿ ಕಾರ್ಮಿಕರ ಮೇಲೆ ಮನಸೋಇಚ್ಛೆ ಥಳಿಸಿದ ಮಾಲೀಕ!

ಸಾರಾಂಶ

ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರು ಕಾರ್ಮಿಕರ ಕಾಲುಗಳನ್ನು ಕಟ್ಟಿಹಾಕಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕ್ರೂರವಾಗಿ ಹಲ್ಲೆ ಮಾಡುವ ದೃಶ್ಯ ವೈರಲ್ ಆಗಿದ್ದು ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಕಾರ್ಮಿಕರನ್ನು ಹಿಡಿದು ಪೈಪುಗಳಿಂದ ಮನಬಂದಂತೆ ಥಳಿಸಿದ್ದನ್ನು ವಿಡಿಯೋ ಮಾಡಿರುವ ಕಾರ್ಮಿಕರು ಮಾಲೀಕನ ದರ್ಪವನ್ನು ತೋರಿಸಲೆಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 

ವಿಜಯಪುರ(ಜ.21):  ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋದವರು ವಾಪಸ್‌ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕೂಲಿ ಕಾರ್ಮಿಕರನ್ನು ಆಮಾನವೀಯವಾಗಿ ಥಳಿಸಿರುವ ಘಟನೆ ವಿಜಯಪುರ ಹೊರವಲಯದ ಗಾಂಧಿ ನಗರದ ಇಟ್ಟಿಗೆ (ಇಟ್ಟಂಗಿ) ಭಟ್ಟಿಯಲ್ಲಿ ಜ.16ರಂದು ನಡೆದಿದು ತಡವಾಗಿ ಬೆಳಕಿಗೆ ಬಂದಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಗಾಯಗೊಂಡಿರುವ ಮೂವರು ಕಾರ್ಮಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ, ರೋಹನ್ ಖೇಮು ರಾಠೋಡ ಮತ್ತು ಕನಕಮೂರ್ತಿ ಗೋಂಧಳಿ, ಸಚಿನ ಮಾನವರ, ವಿಶಾಲ ಜುಮನಾಳ ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಾಟ್ಸಾಪ್ ಗ್ರೂಪ್‌ಗಳಲ್ಲಿ ಹೆಚ್ಚಾದ ಎಪಿಕೆ ಆ್ಯಪ್‌ಗಳ ಹಾವಳಿ: ಫೇಕ್ ಮೆಸೇಜ್‌ ಮೂಲಕ ವಂಚನೆ!

ಗಾಂಧಿ ನಗರದಲ್ಲಿರುವ ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರು ಕಾರ್ಮಿಕರ ಕಾಲುಗಳನ್ನು ಕಟ್ಟಿಹಾಕಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಕ್ರೂರವಾಗಿ ಹಲ್ಲೆ ಮಾಡುವ ದೃಶ್ಯ ವೈರಲ್ ಆಗಿದ್ದು ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಕಾರ್ಮಿಕರನ್ನು ಹಿಡಿದು ಪೈಪುಗಳಿಂದ ಮನಬಂದಂತೆ ಥಳಿಸಿದ್ದನ್ನು ವಿಡಿಯೋ ಮಾಡಿರುವ ಕಾರ್ಮಿಕರು ಮಾಲೀಕನ ದರ್ಪವನ್ನು ತೋರಿಸಲೆಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 

ಏನಿದು ಘಟನೆ?: 

ಕಳೆದ ಹಲವು ತಿಂಗಳಿನಿಂದ ಗಾಂಧಿ ನಗರದ ಇಟ್ಟಂಗಿ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಜಮಖಂಡಿ ತಾಲೂಕಿನ ಚಿಕ್ಕಲಕಿ ಯ ಮೂವರು ಕಾರ್ಮಿಕರಾದ ಉಮೇಶ ಮಾದರ, ಸದಾಶಿವ ಮಾದರ, ಸದಾಶಿವ ಬಬಲಾದಿ ಎಂಬುವರು ಜನವರಿ ಮೊದಲವಾರದಲ್ಲಿ ಸಂಕ್ರಾಂತಿ ಜಾತ್ರೆಗೆಂದು ರಜೆ ತೆಗೆದುಕೊಂಡು ಊರಿಗೆ ಹೋಗಿದ್ದರು. ಆದರೆ, ಕಾರ್ಮಿಕರು ವಾಪಸ್ ಜ.16ರಂದು ಬಂದಾಗ ಇಷ್ಟೊಂದು ದಿನ ಯಾಕೆ ಊರಿಗೆ ಹೋಗಿದ್ದೀರಿ ಎಂದು ಕುಪಿತಗೊಂಡ ಮಾಲೀಕ ಈ ಮೂವರನ್ನು ಮೂರು ದಿನಗಳ ಕಾಲ ಕೂಡಿ ಹಾಕಿದ್ದಾನೆ. ಮಾತ್ರವಲ್ಲ. ಮಾಲೀಕ ಹಾಗೂ ಆತನ ಬೆಂಬಲಿಗರು ಸೇರಿ ನಿರಂತರವಾಗಿ ಕಾರ್ಮಿಕರನ್ನು ಮನಬಂದಂತೆ ಥಳಿಸಿದ್ದಾರೆ. ಕಾರ್ಮಿಕರು ಬೇಡಿಕೊಂಡರು ಬಿಡದೇ ಮನ ಸೋಇಚ್ಛೆ ಹೊಡೆದಿದ್ದಾರೆ. ಇದೀಗ ಥಳಿತಕ್ಕೊಳಗಾದ ಕಾರ್ಮಿಕರು ಗಾಯಗೊಂಡಿದ್ದು, ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ವಿಡಿಯೋ ವೈರಲ್ ಮೂಲಕ ಹೊರಬಂದ ಕೇಸ್: 

ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ ಹಾಗೂ ಆತನ ಬೆಂಬಲಿಗರೆಲ್ಲ ಸೇರಿ ಹಲ್ಲೆ ಮಾಡಿದ ವಿಡಿಯೋವನ್ನು ಕಾರ್ಮಿಕರೇ ವೈರಲ್ ಮಾಡಿದ್ದಾರೆ. ಇಂತಹ ಭಯಾನಕ ವಿಡಿಯೋ ಉಳಿದ ಕಾರ್ಮಿಕರಿಗೆಲ್ಲ ಭಯ ಹುಟ್ಟಿಸಿದೆ. ಕಾರ್ಮಿಕರನ್ನು ಕಟ್ಟಿಹಾಕಿ, ಅವರ ಕಾಲುಗಳ ಮೇಲೆ ನಿಂತು, ಪಾದಗಳಿಗೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಹಲ್ಲೆಯ ವೇಳೆ ಕಾರ್ಮಿಕರು ಕೈ ಮುಗಿದು ಕಣ್ಣೀರಿಟ್ಟು ಬಿಟ್ಟು ಬಿಡುವಂತೆ ಗೋಗರೆದರೂ ದುರುಳರು ಅವರನ್ನು ಬಿಡದೆ ಹಲ್ಲೆ ನಡೆಸಿ ಕ್ರೂರವಾಗಿ ನಡೆದುಕೊಂಡಿದ್ದಾರೆ. 

ಐವರು ಆರೋಪಿಗಳ ಸೆರೆ: 

ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದಂತೆಯೇ ಎಚ್ಚೆತ್ತ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತ ಘಟನೆ ಬಳಿಕ ಖೇಮು ರಾಠೋಡ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನುಳಿದ ಕಾರ್ಮಿಕರು ವಾಪಸ್ ತೆರಳಿದ್ದಾರೆ. ಇಡೀ ಕಾರ್ಖಾನೆ ಖಾಲಿ ಖಾಲಿಯಾಗಿದೆ. ಕೆಲಸಕ್ಕೆ ಬರೋದು ವಿಳಂಬ ಕಾರಣದಿಂದಾಗಿ ಈ ರೀತಿ ಹಲ್ಲೆ ಮಾಡಿದ್ದರಿಂದ ಉಳಿದ ಕಾರ್ಮಿಕರನ್ನು ಭಯ ಬೀಳಿಸಿದೆ. ಹಾಗಾಗಿ ಅವರು ಕೂಡ ಕಾರ್ಖಾನೆ ತೊರೆದಿದ್ದಾರೆ.

ಖೇಮು ರಾಠೋಡ ಎಂಬ ಮಾಲೀಕ ಹಾಗೂ ಆತನ ಏಳೆಂಟು ಜನ ಬಂಬಲಿಗರು ಕಣ್ಣಲ್ಲಿ ಖಾರದಪುಡಿ ಹಾಕಿ, ನೀರು ಸುರಿದು ಹಲ್ಲೆ ಮಾಡಿದ್ದಾರೆ. ಅಲ್ಲದೆ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇವೆ ಎಂದು ರಿವಾಲ್ವಾರ್ತೋರಿಸಿ ಬೆದರಿಕೆ ಕೂಡ ಹಾಕಿದ್ದಾರೆ. ನಾವು ಕೂಲಿಯಂತೆ ಅವರ ಬಳಿ ಕೆಲಸ ಮಾಡುತ್ತಿದ್ದು, ನಮ್ಮ ಮೇಲೆ ಈ ರೀತಿ ದೌರ್ಜನ್ಯ ಮಾಡಿ, ಸಾಕಷ್ಟು ಹಿಂಸೆ ಕೊಟ್ಟಿದ್ದಾರೆ ಎಂದು ಹಲ್ಲೆಗೊಳಗಾದ ಕಾರ್ಮಿಕ ಸದಾಶಿವ ಮಾದರ ತಿಳಿಸಿದ್ದಾರೆ. 

ವಿಜಯಪುರ: 50 ಲಕ್ಷ ಸಾಲ ವಿಚಾರಕ್ಕೆ 4 ಮಕ್ಕಳ ಪ್ರಾಣ ಹೋಯ್ತಾ?

ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ದೂರು ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರನ್ನೂ ಶೀಘ್ರದಲ್ಲಿ ಬಂಧಿಸಲಾಗುವುದು. ಆರೋಪಿಗಳೆಲ್ಲರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ. 

ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ನಮ್ಮ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾರ್ಮಿಕರನ್ನು ಅಮಾನವೀಯವಾಗ ನಡೆಸಿಕೊಂಡಿರುವ ಹಾಗೂ ಅವರಿಗೆ ಸಂಬಳ ನೀಡಿದ್ದಾರೋ ಇಲ್ಲವೋ, ನಿಯಮಕ್ಕಿಂತ ಹೆಚ್ಚಿನ ಸಮಯ ದುಡಿಸಿಕೊಂಡಿದ್ದಾರೆಯೇ ಇತ್ಯಾದಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖೆ ಜಿಲ್ಲಾ ಅಧಿಕಾರಿ ಉಮಾಶ್ರೀ ಕೋಳಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ