ಬಾಲಕಿಯರಿಗೆ ಲೈಂಗಿಕ ಕಿರುಕುಳ: ತಮಿಳುನಾಡಲ್ಲಿ ಚರ್ಚ್‌ ಪಾದ್ರಿ ಅರೆಸ್ಟ್‌

By Suvarna NewsFirst Published Aug 9, 2022, 10:50 PM IST
Highlights

Crime News: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನಲ್ಲಿ ಚರ್ಚ್ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ

ತಮಿಳುನಾಡು (ಆ. 09): ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂನಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚರ್ಚ್ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ. ಚರ್ಚ್‌ಗೆ ಬರುವ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾನ್ ರಾಬರ್ಟ್ ಎಂದು ಗುರುತಿಸಲಾದ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.  ಪಾದ್ರಿ ರಾಮೇಶ್ವರಂನ ಮಂಟಪಂ ಪ್ರದೇಶದ ಪುನಿತರ್ ಅರುಲ್ ಆನಂದರ್ ಚರ್ಚ್‌ನ ಭಾಗವಾಗಿದ್ದರು. 

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯರು ಘಟನೆಗಳ ಕುರಿತು ಮಕ್ಕಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಇದನ್ನು ಆಧರಿಸಿ, ಮಕ್ಕಳ ಕಲ್ಯಾಣ ಅಧಿಕಾರಿಗಳು ಜಾನ್ ರಾಬರ್ಟ್ ಮತ್ತು ಆರೋಪಗಳ ಮೇಲೆ ಗೌಪ್ಯ ತನಿಖೆ ನಡೆಸಿದರು.

ಚರ್ಚ್‌ನಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದ ಜಾನ್ ರಾಬರ್ಟ್ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ತನಿಖೆಯಿಂದ ದೃಢಪಟ್ಟ ನಂತರ, ಮಕ್ಕಳ ಕಲ್ಯಾಣ ಅಧಿಕಾರಿಗಳು ಮಂಡಪಂ ಪೊಲೀಸ್ ಠಾಣೆಯಲ್ಲಿ ಪಾದ್ರಿ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಪಾದ್ರಿಯನ್ನು ಬಂಧಿಸಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ಸರ್ಕಾರಿ ಆಸ್ಪತ್ರೆ ವೈದ್ಯ ಪರಾರಿ:  ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಸರ್ಕಾರಿ ಆಸ್ಪತ್ರೆಯ ವೈದ್ಯ ಬನ್ನಪ್ಪ ಪಾಟೀಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆರೋಪ ಕೇಳಿಬಂದ ಬಳಿಕ ವೈದ್ಯ ತಲೆಮರೆಸಿಕೊಂಡಿದ್ದಾನೆ. ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಆಪ್ತ ಸಮಾಲೋಚಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಕಳೆದ ಮೂರು ತಿಂಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ.

ಅತ್ಯಾಚಾರ ಆರೋಪ: ಮಧ್ಯ ಪ್ರದೇಶದಲ್ಲಿ ಸ್ವಯಂಘೋಷಿತ ದೇವಮಾನವ ಬಂಧನ

ಕಳೆದ ಜು.29ರಂದು ಆಸ್ಪತ್ರೆಯ ಕೊಠಡಿಯಲ್ಲಿ ಅಟೆಂಡೆನ್ಸ್‌ ಸಹಿ ಮಾಡುವುದಕ್ಕೆ ತೆರಳಿದಾಗ, ವೈದ್ಯ ಕೃತ್ಯ ಎಸಗಿದ್ದಾನೆ. ತಾವು ಕರೆದಾಗ ಕೊಠಡಿಗೆ ಬರಬೇಕು. ನನ್ನ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. 

ಈ ಕುರಿತು ಮಾದನಹಿಪ್ಪರಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣ ದಾಖಲಾದ ಕೂಡಲೇ ವೈದ್ಯ ಬನ್ನಪ್ಪ ಪಾಟೀಲ್‌ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಪುತ್ರಿ ಮೇಲೆಯೇ ದೌರ್ಜನ್ಯ: ತಂದೆಗೆ ಕಠಿಣ ಶಿಕ್ಷೆ ತೀರ್ಪು: ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ(2) (ಪೊಕ್ಸೋ ನ್ಯಾಯಾಲಯ) 10 ವರ್ಷ ಕಠಿಣ ಸಜೆ ವಿಧಿಸಿದೆ.

ಬಂಟ್ವಾಳ ತಾಲೂಕಿನ ಇಸ್ಮಾಯಿಲ್‌ (47) ಶಿಕ್ಷೆಗೊಳಗಾದವನು. ಈತ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ 2019ರಲ್ಲಿ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಆರೋಪಿಗೆ 10 ವರ್ಷ ಕಠಿಣ ಸಜೆ, 20,000 ರು. ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಮತ್ತೆ 1 ತಿಂಗಳು ಸಾದಾ ಸಜೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ, ಸೋಶಿಯಲ್ ಮೀಡಿಯಾ ಖ್ಯಾತ ಸ್ಟಾರ್ ಬಂಧನ!

ಅಂದಿನ ಪ್ರೊಬೆಷನರಿ ಡಿವೈಎಸ್‌ಪಿ, ಬೆಳ್ತಂಗಡಿಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಗೋವಿಂದರಾಜು ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು. ಅಭಿಯೋಜನಾ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದಾರೆ.

click me!