ಸಂಜೆಗೆ ಉದ್ಘಾಟನೆ ಆಗಬೇಕಿದ್ದ ಕಾಫಿ ಶಾಪ್‌ ಬೆಳಗ್ಗೆ ಅಗ್ನಿಗಾಹುತಿ! ಹೇಗಾಯ್ತು ಘಟನೆ?

Published : May 04, 2025, 07:51 AM ISTUpdated : May 04, 2025, 07:57 AM IST
ಸಂಜೆಗೆ ಉದ್ಘಾಟನೆ ಆಗಬೇಕಿದ್ದ ಕಾಫಿ ಶಾಪ್‌ ಬೆಳಗ್ಗೆ ಅಗ್ನಿಗಾಹುತಿ!  ಹೇಗಾಯ್ತು ಘಟನೆ?

ಸಾರಾಂಶ

ಅನಿಲ್‌ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡು ಇಡೀ ಕಾಫಿ ಶಾಪ್ ಧಗ ಧಗನೇ ಹೊತ್ತಿ ಉರಿದಿದ್ದು, ಶಾಪ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳು ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪೀಣ್ಯ ದಾಸರಹಳ್ಳಿ (ಮೇ.4) : ಅನಿಲ್‌ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡು ಇಡೀ ಕಾಫಿ ಶಾಪ್ ಧಗ ಧಗನೇ ಹೊತ್ತಿ ಉರಿದಿದ್ದು, ಶಾಪ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳು ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಅಚ್ಯುತನಗರದಲ್ಲಿ ಈ ಘಟನೆ ನಡೆದಿದೆ. ಸುಜಯ್ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಕೇರಳ ಮೂಲದ ಭುವದಾಸ್ ಕಾಫಿ ಶಾಪ್ ನಡೆಸುತ್ತಿದ್ದರು. ಶನಿವಾರ ಸಂಜೆ ಉದ್ಘಾಟನೆಗೆ ಸಜ್ಜಾಗಿತ್ತು. ಬೆಳಗ್ಗೆ 10ರ ಸುಮಾರಿಗೆ ಖಾಸಗಿ ಏಜೆನ್ಸಿ ಬಳಿ ಎರಡು ವಾಣಿಜ್ಯ ಸಿಲಿಂಡರ್ ಖರೀದಿ ಮಾಡಲಾಗಿತ್ತು. ಖರೀದಿ ಮಾಡಿದ ಒಂದು ಗಂಟೆಯಲ್ಲೇ ಸಿಲಿಂಡರ್‌ನಲ್ಲಿ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ.

ಕಾಫಿ ಶಾಪ್ ಪಕ್ಕದಲ್ಲೇ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿದೆ. ಈ ಕಾಲೇಜಿನಲ್ಲಿ ಬಹುತೇಕ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಾಫಿ ಆ್ಯಂಡ್ ಕೋ ಹೆಸರಿನ ಶಾಪ್‌ ತೆರೆಯಲು ಸಿದ್ಧತೆ ನಡೆದಿತ್ತು. ಸ್ವಲ್ಪ ಯಾಮಾರಿದ್ರೂ ದೊಡ್ಡ ಮಟ್ಟದ ಸಾವು-ನೋವು ಸಂಭವಿಸುತ್ತಿತ್ತು, ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಕಾಫಿ ಶಾಪ್ ಮಾತ್ರ ಅಗ್ನಿಗೆ ಆಹುತಿಯಾಗಿದೆ.

ಇದನ್ನೂ ಓದಿ; ಕಾರಿನ EMI ಪಾವತಿಸಲಾಗದೆ ಮನನೊಂದು ಚಾಲಕ ದುರಂತ ಅಂತ್ಯ!

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗಷ್ಟೆ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಮನೆಯಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ದುರಂತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!