ಭಟ್ಕಳ: ಮಾಸ್ಕ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

Kannadaprabha News   | Asianet News
Published : Oct 01, 2020, 11:10 AM IST
ಭಟ್ಕಳ: ಮಾಸ್ಕ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಸಾರಾಂಶ

ಮಾಸ್ಕ್‌ನಲ್ಲಿ ಗಾಳಿ ಆಡಲು ಇಟ್ಟಿರುವ ರಂಧ್ರದಲ್ಲಿ 2 ಲಕ್ಷ ರು.ನ 40 ಗ್ರಾಮ್‌ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ| ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಅರೆಸ್ಟ್| 

ಭಟ್ಕಳ(ಅ.01):ಚಿನ್ನ ಕಳ್ಳ ಸಾಗಣೆದಾರರು ಒಂದಲ್ಲಾ ಒಂದು ಮಾರ್ಗವನ್ನು ಹುಡುಕುತ್ತಲೇ ಇರುತ್ತಾರೆ. ಕೊರೋನಾ ವೈರಸ್‌ನ ಲಾಭ ಪಡೆದು ಎನ್‌-95 ಫೇಸ್‌ ಮಾಸ್ಕ್‌ನಲ್ಲಿ ಚಿನ್ನವನ್ನು ಕಳ್ಳಸಾಗಣೆ ಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. 

ದುಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ಕರ್ನಾಟಕ ಭಟ್ಕಳದ ನಿವಾಸಿ ಎಂದು ಗುರುತಿಸಲಾಗಿದೆ. ಈತ ಎನ್‌-95 ಮಾಸ್ಕ್‌ನಲ್ಲಿ ಗಾಳಿ ಆಡಲು ಇಟ್ಟಿರುವ ರಂಧ್ರದಲ್ಲಿ 2 ಲಕ್ಷ ರು.ನ 40 ಗ್ರಾಮ್‌ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇತರ ಜಿಲ್ಲೆಯ ಆಸ್ಪತ್ರೆಗಳಲ್ಲಿ ಉತ್ತರ ಕನ್ನಡ ರೋಗಿಗಳಿಗೆ ಚಿಕಿತ್ಸೆ ಸಿಗ್ತಿಲ್ಲ

ಮಾಸ್ಕ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ ಎಂದು ಸುಂಕ ಅಧಿಕಾರಿಗಳು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ