ವಿದೇಶದಲ್ಲಿ ಕೆಲಸ ಕೊಡಿಸೋದಾಗಿ ಹಣ ಪಡೆದು ವಂಚಿಸಿದ್ದ ವ್ಯಕ್ತಿ ಬಂಧನ

Kannadaprabha News   | Asianet News
Published : Feb 14, 2021, 11:03 AM IST
ವಿದೇಶದಲ್ಲಿ ಕೆಲಸ ಕೊಡಿಸೋದಾಗಿ ಹಣ ಪಡೆದು ವಂಚಿಸಿದ್ದ ವ್ಯಕ್ತಿ ಬಂಧನ

ಸಾರಾಂಶ

ಬಂಧಿತನಿಂದ 18 ಪಾಸ್‌ಪೋರ್ಟ್‌, ವಿವಿಧ ಕಂಪನಿಗಳ 11 ಮೊಬೈಲ್‌ ವಶ| . ಆಪಾದಿತನಿಗೆ ಹಣ ಕೊಟ್ಟು ಮೋಸ ಹೋಗಿರುವವರು ಯಾರಾದರೂ ಇದ್ದರೆ ದಾಂಡೇಲಿ ನಗರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲು ಸೂಚನೆ| ಆರೋಪಿ ಬಂಧಿಸಿರುವುದಕ್ಕೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಅಭಿನಂದನೆ| 

ದಾಂಡೇಲಿ(ಫೆ.14): ದಾಂಡೇಲಿ ವ್ಯಾಪ್ತಿಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಹೊರ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಮತ್ತು ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡು ಕೆಲಸ ಕೊಡಿಸದೇ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶರಣಬಸಪ್ಪ (ಶರಣ) ಸಂಗನಬಸಪ್ಪ ಬಳಿಗೇರ (45) ಬಂಧಿತ ಆರೋಪಿ. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಹತ್ತಿರದ ಬೂದಗೇರಿ ಮುಗುಳಿಯವನಾದ ಈತ ದಾಂಡೇಲಿ ಸುಭಾಸನಗರ ನಿವಾಸಿಯಾಗಿದ್ದಾನೆ.

ಶನಿವಾರ ಬೆಳಗಾವಿಯಲ್ಲಿ ಬಂಧಿಸಿರುವ ಪೊಲೀಸರು ಇತರರಿಂದ ಉದ್ಯೋಗ ಕೊಡಿಸುವುದಾಗಿ ಪಡೆದಿದ್ದ 18 ಪಾಸ್‌ಪೋರ್ಟ್‌, ವಿವಿಧ ಕಂಪನಿಗಳ 11 ಮೊಬೈಲ್‌ಗಳು, ಏಸರ್‌ ಕಂಪನಿಯ 1 ಲ್ಯಾಪ್‌ಟಾಪ್‌, 6 ವಿವಿಧ ಬ್ಯಾಂಕ್‌ಗಳ ಎಟಿಎಂ ಕಾರ್ಡ್‌ಗಳು, ಹಾರ್ಡ್‌ ಡ್ರೈವ್‌ (ಡಿಸ್ಕ್‌) 1, 3 ಪೆನ್‌ಡ್ರೈವ್‌ಗಳು, ವಿವಿಧ ಕಂಪನಿಗಳ 7 ಸಿಮ್‌ ಕಾರ್ಡ್‌ಗಳು, ವಿವಿಧ ಕಂಪನಿಗಳ 7 ವಾಚ್‌ಗಳು, ಆಪಾದಿತ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಪಡೆದುಕೊಂಡ ಹಣದಲ್ಲಿ ಖರೀದಿಸಿದ 1 ಬಂಗಾರದ ಚೈನ್‌, ಒಂದು ಕಿವಿಯೋಲೆಯನ್ನು ವಶಪಡಿಸಿಕೊಂಡಿದ್ದಾರೆ. ಆಪಾದಿತನಿಗೆ ಹಣ ಕೊಟ್ಟು ಮೋಸ ಹೋಗಿರುವವರು ಯಾರಾದರೂ ಇದ್ದರೆ ಅವರು ದಾಂಡೇಲಿ ನಗರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ.

ಶೃಂಗೇರಿ ಬಾಲಕಿ ರೇಪ್‌ ಪ್ರಕರಣ : 15 ಮಂದಿ ಅರೆಸ್ಟ್

ಆರೋಪಿ ಪತ್ತೆಗಾಗಿ ಉ.ಕ.ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶಿವಪ್ರಕಾಶ ದೇವರಾಜು ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಬದ್ರನಾಥ ಎಸ್‌. ಹಾಗೂ ದಾಂಡೇಲಿ ಉಪ-ವಿಭಾಗದ ಡಿವೈಎಸ್‌ಪಿ ಗಣೇಶ ಕೆ.ಎಲ್‌., ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳ ಮಾರ್ಗದರ್ಶನದಲ್ಲಿ ದಾಂಡೇಲಿ ನಗರ ಪೊಲೀಸ್‌ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಮಹಾದೇವಿ ನಾಯ್ಕೋಡಿ, ನಗರ ಠಾಣೆಯ ಪಿಎಸ್‌ಐ ಯಲ್ಲಪ್ಪ ಎಸ್‌. ಅವರ ನೇತೃತ್ವದಲ್ಲಿ ಅಂಕೋಲಾ ಪೊಲೀಸ್‌ ಠಾಣೆಯ ಪಿಎಸ್‌ಐ ಸಂಪತ್‌ಕುಮಾರ, ಸಿಬ್ಬಂದಿಗಳಾದ ಸೋಮಲಿಂಗ್‌ ಖಂಡೇಕರ್‌, ಪ್ರಶಾಂತ ನಾಯ್ಕ, ಭೀಮಪ್ಪ ಎಚ್‌.ಕೆ., ಮಂಜುನಾಥ ಎಚ್‌. ಶೆಟ್ಟಿ, ಚಿನ್ಮಯಾನಂದ ಪತ್ತಾರ, ಸುಧೀರ ಮಡಿವಾಳ, ಸಿಡಿಆರ್‌ ವಿಭಾಗದ ಜಿಲ್ಲಾ ಕೇಂದ್ರ ಕಾರವಾರ ಅವರನ್ನು ಒಳಗೊಂಡಂತೆ ತಂಡವನ್ನು ರಚಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಬಂಧಿಸಿರುವುದಕ್ಕೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಅಭಿನಂದಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ