ಭಿಕ್ಷುಕನ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಕೊಂದಿದ್ದ ಆರೋಪಿ ಅಂದರ್‌

Kannadaprabha News   | Asianet News
Published : Feb 15, 2021, 03:57 PM IST
ಭಿಕ್ಷುಕನ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಕೊಂದಿದ್ದ ಆರೋಪಿ ಅಂದರ್‌

ಸಾರಾಂಶ

ಭಿಕ್ಷುಕನ ಕೊಲೆ| ವಿಜಯಪುರ ನಗರದ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದ್ದ ಕೊಲೆ| ಆರೋಪಿಯನ್ನ ಬಂಧಿಸಿದ ಪೊಲೀಸರು| ಬಂಧಿತ ಆರೋಪಿ ನ್ಯಾಯಾಂಗ ಬಂಧನ| ಭಿಕ್ಷುಕನ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡ ಅರೋಪಿ| 

ವಿಜಯಪುರ(ಫೆ.15): ನಗರದ ಆಶ್ರಮ ಹತ್ತಿರದ ಟೀಚರ್ಸ್‌ ಕಾಲೋನಿಯಲ್ಲಿರುವ ಬಸ್‌ ತಂಗುದಾಣದಲ್ಲಿ ಭಿಕ್ಷುಕನ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರಕ್ಷಾ ಕಾಲೋನಿಯ ಮಹಾಂತೇಶ ಈರಪ್ಪ ಮೇಟಿ (28) ಬಂಧಿತ ಆರೋಪಿ.

ಅಪರಿಚಿತ ಭಿಕ್ಷುಕನೊಬ್ಬ ಅಲ್ಲಿ ಇಲ್ಲಿ ಭಿಕ್ಷೆ ಬೇಡುತ್ತ ತಿರುಗಾಡಿ ಬಸ್‌ ತಂಗುದಾಣದಲ್ಲಿ ವಾಸಿಸುತ್ತಿದ್ದ. ಫೆ. 12ರಂದು ಈ ಭಿಕ್ಷುಕನ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಆದರ್ಶನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡ್ರಗ್ಸ್‌ ಮಾಫಿಯಾ: ನೈಜೀರಿಯಾ ಪ್ರಜೆಗಳಿಂದ 15 ಲಕ್ಷದ ಮಾದಕ ವಸ್ತು ಜಪ್ತಿ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ ಅಗರವಾಲ್‌, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ ಅರಸಿದ್ದಿ ಮಾರ್ಗದರ್ಶನದಲ್ಲಿ ವಿಜಯಪುರ ಡಿಎಸ್ಪಿ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಗೋಳಗುಮ್ಮಟ ಪೊಲೀಸ್‌ ಠಾಣೆ ಸಿಪಿಐ ಬಸವರಾಜ ಮುಕರ್ತಿಹಾಳ, ಪೊಲೀಸ್‌ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ತನಿಖಾ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಕಾಲಕ್ಕೆ ಆರೋಪಿಯು ಭಿಕ್ಷುಕನ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!