ಹಾವೇರಿ: 5 ತಿಂಗಳಿಂದ ಬಾರದ ವೇತನ, ಮನನೊಂದು ವ್ಯಕ್ತಿ ಆತ್ಮಹತ್ಯೆ

By Suvarna News  |  First Published Sep 6, 2020, 11:39 AM IST

ವೇತನ ಬಾರದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ|  ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 


ಹಾವೇರಿ(ಸೆ.06): ವೇತನ ಬಾರದಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ.  ತಾಯಪ್ಪ ಭೀಮಪ್ಪ ಮಾದರ (42) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. 

ಮೃತ ತಾಯಪ್ಪ ಭೀಮಪ್ಪ ಮಾದರ ಸುಮಾರು ಹತ್ತು ವರ್ಷಗಳಿಂದ ಖಿಲಾರಿ ತಳಿ ಗೋ ಸಂವರ್ಧನಾ ಕೇಂದ್ರದಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.  ಕಳೆದ 5 ತಿಂಗಳಿಂದ ವೇತನ ಬಾರದ ಹಿನ್ನೆಲೆಯಲ್ಲಿ ಮನೆ ನಿರ್ವಹಣೆ ಕಷ್ಟವಾಗಿತ್ತು ಎಂದು ಹೇಳಲಾಗುತ್ತಿದೆ. 

Tap to resize

Latest Videos

ಮೃತ ಹೆಂಡ್ತಿ ತಿಥಿ ಕಾರ್ಯಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಪತಿ ಶವವಾಗಿ ಪತ್ತೆ

ವೇತನ ಬಾರದಿದ್ದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದ್ದರಿಂದ ತಾಯಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಂಕಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

click me!