
ಹುಬ್ಬಳ್ಳಿ(ಜ.21): ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಒಬ್ಬ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿಯ ಗಿರಿಣಿಚಾಳದಲ್ಲಿ ಬುಧವಾರ ನಡೆದಿದೆ.
ಗಿರಣಿಚಾಳದ ನಿವಾಸಿ ರವಿ ಮುದ್ದಿನಕೇರಿ(35) ಹಲ್ಲೆಗೊಳಗಾಗಿ ಮೃತಪಟ್ಟ ವ್ಯಕ್ತಿ. ಮಂಗಳವಾರ ಕ್ಷುಲ್ಲಕ ಕಾರಣಕ್ಕೆ ಅದೇ ಪ್ರದೇಶದ ವಿಜಯ ಎಂಬಾತನ ಮಧ್ಯೆ ಜಗಳ ನಡೆದಿದೆ. ಈ ವೇಳೆ ವಿಜಯ್ ಮಾರಣಾಂತಿಕ ದಾಳಿ ನಡೆಸಿ ರವಿ ಎದೆಗೆ ಗುದ್ದಿಗುದ್ದಿ ಗಾಯಗೊಳಿಸಿದ್ದರು.
ಬೆಳಗಾವಿ: ಆಸ್ತಿ ವಿವಾದಕ್ಕೆ ಏನೂ ಅರಿಯದ ನಾಲ್ಕು ವರ್ಷದ ಬಾಲಕ ಬಲಿ
ತಕ್ಷಣವೇ ಚಿಕಿತ್ಸೆಗೆ ಕಿಮ್ಸ್‌ಗೆ ದಾಖಲಿಸಲಾಗಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯನನ್ನು ಪಿಐ ರವಿಚಂದ್ರ ಬಡಫಕ್ಕೀರಪ್ಪನವರ ನೇತೃತ್ವದ ತಂಡ ಬಂಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ