ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಅಡ್ಡ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೈಲಿನಡಿ ಸಿಲುಕಿದ ವ್ಯಕ್ತಿಯ ಎರಡೂ ಕಾಲುಗಳನ್ನು ತುಂಡಾದ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಹುಬ್ಬಳ್ಳಿ (ಮೇ.05): ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ (Train) ಅಡ್ಡ ನಿಂತು ಆತ್ಮಹತ್ಯೆಗೆ (Suicide) ಯತ್ನಿಸಿದ್ದಾನೆ. ರೈಲಿನಡಿ ಸಿಲುಕಿದ ವ್ಯಕ್ತಿಯ ಎರಡೂ ಕಾಲುಗಳನ್ನು ತುಂಡಾದ ಘಟನೆ ಹುಬ್ಬಳ್ಳಿಯ (Hubballi) ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ.
ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ ಸರಿಯದೇ ಅಲ್ಲೇ ನಿಂತಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ ಚಲಿಸುತ್ತಿದ್ದ ರೈಲನ್ನು ನಿಲ್ಲಿಸಿದ್ದಾರೆ. ಆದರೆ ಎಂಜಿನ್ ಹಾಗೂ ಮೂರ್ನಾಲ್ಕು ಬೋಗಿಗಳು ಕಾಲ ಮೇಲೆ ಹರಿದ ಕಾರಣ ಒಂದು ಕಾಲು ಸಂಪೂರ್ಣ ತುಂಡಾಗಿದ್ದು, ಇನ್ನೊಂದು ಕಾಲು ಅರ್ಧ ತುಂಡಾಗಿದ್ದು, ಗಾಯಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ರೈಲು ಹಳಿಗಳ ಮೇಲೆನಿಂತಿದ್ದ ಎನ್ನಲಾಗಿದೆ. ಗಾಯಳು ಕುರಿತು ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
Haveri: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ದುರ್ಮರಣ
ಬಸ್ ಲಾರಿ ನಡುವೆ ಅಪಘಾತ, ಚಾಲಕ ಸ್ಥಳದಲ್ಲೇ ಸಾವು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದ ಬೆನ್ನಲ್ಲೇ ತುಮಕೂರಿನಲ್ಲಿ ಮತ್ತೊಂದು ಆ್ಯಕ್ಸಿಡೆಂಟ್ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರ ದೊಡ್ಡಾಲದ ಮರದ ಬಳಿಕ ಲಾರಿ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ಯಿಂದ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ದೊಡ್ಡಾಲದ ಮರದ ಬಳಿ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಿರಾದಿಂದ ಬರುತ್ತಿದ್ದ ಲಾರಿಗೂ ಬಸ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದೆ.
ಭೀಕರ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತ ಲಾರಿ ಚಾಲಕನಿಗೂ ಗಾಯಗಳಾಗಿದೆ. ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮೊದಲು ತುಮಕೂರಿನಲ್ಲಿ ಕಾರು ಹಾಗೂ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ನಡೆದಿತ್ತು. ರಂಜಾನ್ ಹಬ್ಬ ಮುಗಿಸಿ ಕುಟುಂಬ ಸಮೇತ ತನ್ನ ಪತ್ನಿಯ ತವರೂರು ಭದ್ರಾವತಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
Chandru Murder Case: ಚಂದ್ರು ಹತ್ಯೆಗೆ ‘ಭಾಷೆ’ ಕಾರಣವಲ್ಲ: ಗುಪ್ತಚರ ಇಲಾಖೆ
ಚನ್ನಪಟ್ಟಣದಿಂದ ರಂಜಾನ್ ಹಬ್ಬ ಮುಗಿಸಿಕೊಂಡು ಭದ್ರಾವತಿಯ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮೂವರ ಸಾವನ್ನಪ್ಪಿದ್ದಾರೆ. ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಕೃಷ್ಣಪ್ಪನ ಕೊಪ್ಪಲು ಬಳಿ ಕಲ್ಲು ತುಂಬಿಕೊಂಡು ಕೇರಳ ಕಡೆಗೆ ತೆರಳುತ್ತಿದ್ದ ಲಾರಿ, ಕಾರಿನಲ್ಲಿ ತೆರಳುತ್ತಿದ್ದ ಚನ್ನಪಟ್ಟಣದ ಜಾಮೀಯಾ ಮಸೀದಿಯ ಮೌಲ್ವಿ ಸೈಯದ್ ಮಹಮದ್ ನಜ್ಜಿ(42), ನಾಜೀಯಾ(30), ಸೈಯದ್ ಹಸ್ಸಿ (1) ಸ್ಥಳದಲ್ಲಿ ಸಾವನ್ನಪ್ಪಿದ್ದು, ಖಾಸಿಂ(6) ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಮೃತೂರು ಸಿಪಿಐ ಅರುಣ್ ಹುಲಿಯೂರುದುರ್ಗ ಪಿಎಸ್‌ಐ ಚೇತನ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.