ಧಾರವಾಡ: ಅನೈತಿಕ ಸಂಬಂಧಕ್ಕೆ ಗಂಡನನ್ನೇ ಕೊಂದು ಬಿಟ್ಲಾ ಹೆಂಡ್ತಿ..?

Published : Sep 04, 2020, 02:52 PM ISTUpdated : Sep 04, 2020, 03:01 PM IST
ಧಾರವಾಡ: ಅನೈತಿಕ ಸಂಬಂಧಕ್ಕೆ ಗಂಡನನ್ನೇ ಕೊಂದು ಬಿಟ್ಲಾ ಹೆಂಡ್ತಿ..?

ಸಾರಾಂಶ

ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿದ ಪತ್ನಿ: ಆರೋಪ| ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲು| 

ಧಾರವಾಡ(ಸೆ.04): ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಹೌದು, ಪಿರಸಾಬ್ ನದಾಪ್(38) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಘಟನೆ ನಡೆದಿರೋದು ತಾಲೂಕಿನ ನರೇಂದ್ರ ಗ್ರಾಮದಲ್ಲಿ. 

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಪಿರಸಾಬ್ ನದಾಪ್ ಎಂಬ ವ್ಯಕ್ತಿ ಕಳೆದ ಒಂಬತ್ತು ದಿನದಿಂದ ಕಾಣೆಯಾಗಿದ್ದ. ಮನೆಗೆ ಬಾರದ ಹಿನ್ನಲೆಯಲ್ಲಿ ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ರೋಷನ್ ಬಿ ಎಂಬ ಮಹಿಳೆ ಮಿಸ್ಸಿಂಗ್ ದೂರು ದಾಖಲಿಸಿದ್ದರು. 

ಯಾದಗಿರಿ: ತಮಟೆ ವಾಪಸ್‌ ಕೇಳಿದ್ದಕ್ಕೆ ಕೊಂದೇ ಬಿಟ್ರು..!

ಪಿರಸಾಬ್ ನದಾಪ್ ಪತ್ನಿ ತನ್ನ ಪ್ರಿಯಕರ ಸೋಮಯ್ಯ ಪೂಜಾರ ಎಂಬಾತನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ್ದಾಳೆ ಎಂದು ರೋಷನ್ ಬಿ ತಮ್ಮ ದೂರಿನಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆ ಪತಿಯನ್ನೇ ಕೊಲೆ ಮಾಡಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮಸ್ಥರು ಇಂತಹ ಘಟನೆ ಆಗಬಾರದು ಎಂದು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!