* ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಸೇವಾನಗರ ತಾಂಡಾದಲ್ಲಿ ನಡೆದ ಘಟನೆ
* ಮಹಿಳೆಯ ಬಾಯಿಗೆ ಬಟ್ಟೆಕಟ್ಟಿ ಅತ್ಯಾಚಾರ
* ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬ್ಯಾಡಗಿ(ಜೂ.23): ಕುರಿ ಕಾಯುತ್ತಿದ್ದ 55 ವರ್ಷದ ಮಹಿಳೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಜಿಲ್ಲೆಯ ತಾಲೂಕಿನ ಕಲ್ಲೇದೇವರ ಗ್ರಾಮದ ಸೇವಾನಗರ ತಾಂಡಾದಲ್ಲಿ ನಡೆದಿದೆ.
ಅತ್ಯಾಚಾರಕ್ಕೊಳಗಾದ ಮಹಿಳೆ ತಾಂಡಾ ನಿವಾಸಿ. ಹೊರವಲಯದ ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸುವ ಸಮಯದಲ್ಲಿ ಅಲ್ಲಿಯೇ ಕುರಿಗಳನ್ನು ಮೇಯಿಸುತ್ತಿದ್ದ ಶಿವಮೂರ್ತಿ ಕಾಡಮ್ಮನರ ತನ್ನ ಸಹಚರನೊಂದಿಗೆ ಸೇರಿಕೊಂಡು ಮೊದಲುಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿ ಚೀರಾಟ ನಡೆಸಿದ್ದಾಳೆ.
ಆಧಾರ್ ಕಾರ್ಡ್‌ನಲ್ಲಿ ಮುರ್ತಜಾ, ಹೊರ ಲೋಕಕ್ಕೆ ಮೃತ್ಯುಂಜಯ!
ಆಗ ಆಕೆಯ ಬಾಯಿಗೆ ಬಟ್ಟೆಕಟ್ಟಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಘಟನೆ ನಡೆದ ವೇಳೆ ಸ್ಥಳದಲ್ಲಿದ್ದ ಮತ್ತೋರ್ವನ ಹೆಸರನ್ನು ಪೊಲೀಸ್ ಇಲಾಖೆ ಬಹಿರಂಗಪಡಿಸಿಲ್ಲ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.