ರಾಣಿಬೆನ್ನೂರು: ಎರಡೂವರೆ ವರ್ಷದ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

By Kannadaprabha News  |  First Published Nov 27, 2020, 11:26 AM IST

ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ನಡೆದ ಘಟನೆ| ತಡವಾಗಿ ಬೆಳಕಿಗೆ ಬಂದ ಪ್ರಕರಣ| ಮಗುವಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ|  ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು| 


ರಾಣಿಬೆನ್ನೂರು(ನ.27): ಎರಡೂವರೆ ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ ಪ್ರಕರಣ ಬುಧವಾರ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಆರೋಪಿ ಚನ್ನಪ್ಪ ಎಮ್ಮೇರ (45) ಬಂಧಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆ, ತಾಯಿ ಹೊಲದ ಕೆಲಸಕ್ಕೆ ಹೋಗುವ ಸಮಯದಲ್ಲಿ ತಮ್ಮ ಮಗುವನ್ನು ಪರಿಚಿತನಾಗಿದ್ದ ಆರೋಪಿಯ ಬಳಿ ಬಿಟ್ಟು ಹೋಗಿದ್ದರು. ಪೋಷಕರು ತಮ್ಮ ಕೆಲಸ ಮುಗಿಸಿಕೊಂಡು ಮಗುವನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲು ಬಂದಾಗ ಮಗುವಿನ ಗುಪ್ತಾಂಗದಿಂದ ರಕ್ತ ಒಸರುತ್ತಿರುವುದು ಕಂಡುಬಂದಿದೆ. ಬಳಿಕ ವಿಚಾರಿಸಿದಾಗ ವಾಸ್ತವ ಗೊತ್ತಾಗಿದೆ. ಮಗುವಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

Tap to resize

Latest Videos

ಶೌಚಕ್ಕೆ ಹೋದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದ ಕೀಚಕ ಅಂದರ್

ಈ ಹಿನ್ನೆಲೆಯಲ್ಲಿ ಮಗುವಿನ ತಾಯಿ ಶಹರ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
 

click me!