Vijayapura: ಮನೆಗೆ ಬಂದ ಮಗಳ ಲವರ್‌ಗೆ ಪೆಟ್ರೋಲ್ ಹಾಕಿ ಬೆಂಕಿ ಇಟ್ಟರಾ ಪೋಷಕರು?: ಅಸಲಿಗೆ ಆಗಿದ್ದೇನು..

Published : May 27, 2024, 11:42 PM IST
Vijayapura: ಮನೆಗೆ ಬಂದ ಮಗಳ ಲವರ್‌ಗೆ ಪೆಟ್ರೋಲ್ ಹಾಕಿ ಬೆಂಕಿ ಇಟ್ಟರಾ ಪೋಷಕರು?: ಅಸಲಿಗೆ ಆಗಿದ್ದೇನು..

ಸಾರಾಂಶ

ಪ್ರೇಮ ಪ್ರಕರಣವೊಂದರಲ್ಲಿ ಪ್ರಿಯತಮೆಯ ಮನೆಯಲ್ಲಿಯೇ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ, ಮಾರಣಾಂತಿಕ ಹಲ್ಲೆಗೆ ಯತ್ನಿಸಿದ ಪರಿಣಾಮ ಪ್ರೇಮಿ ಮತ್ತು ಪ್ರಿಯತಮೆಯ ಕುಟುಂಬದ ಮೂವರು ಸೇರಿ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ‌.‌ 

- ಷಡಕ್ಷರಿ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಮೇ.27): ಮಗಳ ಪ್ರೇಮಿ ಮನೆಗೆ ಬಂದಿದ್ದ ವೇಳೆ ಪ್ರೇಯಸಿಯ ಕುಟುಂಬಸ್ಥರು ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘಟನೆ ನಡೆದಿದ್ದು ಜನರಲ್ಲಿ‌ ದಿಗ್ಭ್ರಮೆ‌ ಮೂಡಿಸಿದೆ 

ಮಾತಿನ ಚಕಮಕಿ ಪೆಟ್ರೋಲ್ ಹಾಕಿ ಬೆಂಕಿ, ಹಲ್ಲೆ..!: ಪ್ರೇಮ ಪ್ರಕರಣವೊಂದರಲ್ಲಿ ಪ್ರಿಯತಮೆಯ ಮನೆಯಲ್ಲಿಯೇ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ, ಮಾರಣಾಂತಿಕ ಹಲ್ಲೆಗೆ ಯತ್ನಿಸಿದ ಪರಿಣಾಮ ಪ್ರೇಮಿ ಮತ್ತು ಪ್ರಿಯತಮೆಯ ಕುಟುಂಬದ ಮೂವರು ಸೇರಿ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ‌.‌ ಇವರಲ್ಲಿ ಪ್ರೇಮಿಯೂ ಸೇರಿ ಮೂವರ ಸ್ಥಿತಿ ಗಂಭಿರವಾಗಿದೆ. ಘಟನೆಯಲ್ಲಿ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರಗೆ ತಲೆಗೆ ಭಾರೀ ಪೆಟ್ಟಾಗಿದ್ದು ಶೇ.80ರಷ್ಟು ಸುಟ್ಟ ಗಾಯಗಳಿಂದ ಖಾಸಗಿ ಆಸ್ಪತ್ರೆಯ ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ, ಕೆಲಸಗಾರ ನೀಲಕಂಠ ಹರನಾಳ ಅವರಿಗೂ ಸುಟ್ಟ ಗಾಯಗಳಾಗಿವೆ. ಇವರು ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌. ಇವರಲ್ಲಿ ಸೀಮಾ ಪ್ರಾಣಾಪಾಯದಿಂದ ಪಾರಾಗಿದ್ದು ಮುತ್ತು ಮತ್ತು ನೀಲಕಂಠ ಅವರ ಸ್ಥಿತಿ ಗಂಭಿರವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ..

ಘಟನೆ ಕುರಿತು ದೂರು, ಪ್ರತಿದೂರು..!: ಘಟನೆ ಕುರಿತು ಎರಡೂ ಕಡೆಯವರಿಂದ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ. ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. 

ಪೆನ್‌ಡ್ರೈವ್‌ ಕೇಸನ್ನು ಗೃಹಸಚಿವರು ಲಘುವಾಗಿ ಪರಿಗಣಿಸಿದ್ದಾರೆ: ಈಶ್ವರಪ್ಪ

ಮೊದಲು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ಯಾರು!?: ಈ ಘಟನೆಯಲ್ಲಿ ಯಾರು ಪೆಟ್ರೋಲ್ ಎರಚಿ ಯಾರ ಹತ್ಯೆಗೆ ಯತ್ನಿಸಿದರು ಅನ್ನೋದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಕಳೆದ 5-6 ವರ್ಷಗಳಿಂದ ಐಶ್ವರ್ಯಾ ಮತ್ತು ರಾಹುಲ್ ಪ್ರೀತಿ ಮಾಡುತ್ತಿದ್ದರು. ಅವರ ಪ್ರೇಮ ಸಂಬಂಧ ಕಳೆದ ವರ್ಷದಿಂದ ಐಶ್ವರ್ಯಾಳ ನಿರಾಕರಣೆ ಹಿನ್ನೆಲೆ ಸ್ಥಗಿತಗೊಂಡಿತ್ತು. ಇಬ್ಬರ ನಡುವಿನ ಸಂಪರ್ಕ ಕಟ್ ಆಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೂ ರಾಹುಲ್ ಕುಪಿತನಾಗಿದ್ದು ಈ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು