ಇಲ್ಲಿನ ದೇರಳಕಟ್ಟೆಯ ಪಿಎಚ್‌ಡಿ ವಿದ್ಯಾರ್ಥಿನಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಈ ಮಧ್ಯೆ, ನಾಪತ್ತೆ ಪ್ರಕರಣ ದಾಖಲಾಗಿ 8 ದಿನಗಳ ಬಳಿಕ, ಭಾನುವಾರ ವಿದ್ಯಾರ್ಥಿನಿ ಬಳಸುತ್ತಿದ್ದ ಆಕ್ಟಿವಾ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.
ಮಂಗಳೂರು(ಫೆ.26): ಇಲ್ಲಿನ ದೇರಳಕಟ್ಟೆಯ ಪಿಎಚ್‌ಡಿ ವಿದ್ಯಾರ್ಥಿನಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಈ ಮಧ್ಯೆ, ನಾಪತ್ತೆ ಪ್ರಕರಣ ದಾಖಲಾಗಿ 8 ದಿನಗಳ ಬಳಿಕ, ಭಾನುವಾರ ವಿದ್ಯಾರ್ಥಿನಿ ಬಳಸುತ್ತಿದ್ದ ಆಕ್ಟಿವಾ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.
ಪುತ್ತೂರು ನಿವಾಸಿ ದಿ.ಸತೀಶ್ ಹೆಬ್ಬಾರ್ ಪುತ್ರಿ ಚೈತ್ರಾ ಹೆಬ್ಬಾರ್ (27) ನಾಪತ್ತೆಯಾದವರು. ಕೋಟೆಕಾರು ಮಾಡೂರು ಬಳಿ ಪಿಜಿಯಲ್ಲಿ ನೆಲೆಸಿದ್ದ ಈಕೆ ಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು. ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದರು.
ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣ, ಡ್ಯಾನ್ಸ್ ಮಾಸ್ಟರ್ ವಿರುದ್ದ ಫೋಕ್ಸೋ ಪ್ರಕರಣ
ಪುತ್ತೂರು ಮೂಲದ ಮುಸ್ಲಿಂ ಯುವಕ ಮಾಡೂರಿನಲ್ಲಿರುವ ಈ ಪಿಜಿಗೆ ಆಗಾಗ ಬಂದು ಹೋಗುತ್ತಿದ್ದ. 10 ದಿನಗಳ ಹಿಂದೆ ಸ್ಥಳೀಯರು ಈ ಸಂಗತಿಯನ್ನು ಬಜರಂಗದಳದ ಗಮನಕ್ಕೆ ತಂದಿದ್ದರು. ಪಿಜಿಯಲ್ಲಿ ವಿಚಾರಿಸಿದಾಗ ಹಿಂದೂ ವಿದ್ಯಾರ್ಥಿನಿಯರು ಇರುತ್ತಿದ್ದ ಪಿಜಿಯಲ್ಲಿ ಆತನೂ ಉಳಿಯುತ್ತಿದ್ದ ಎಂಬ ಸಂಗತಿ ಬಯಲಾಗಿತ್ತು ಎಂದು ಬಜರಂಗದಳ ದೂರಿದೆ.
ಈ ಕುರಿತು ಆಕೆಯ ಚಿಕ್ಕಪ್ಪ ಪ್ರಕಾಶ್ ಹೆಬ್ಬಾರ್, ಉಳ್ಳಾಲ ಪೊಲೀಸ್ ಠಾಣೆ(Ullal police station)ಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿ 8 ದಿನಗಳು ಕಳೆದ ಬಳಿಕ ಭಾನುವಾರ ಸುರತ್ಕಲ್ ಸಮೀಪ ಚೈತ್ರಾ ಉಪಯೋಗಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಪತ್ತೆಯಾಗಿದೆ.
ಲವ್ ಜಿಹಾದ್ ಆರೋಪ:
ಆ ಯುವಕ ಡ್ರಗ್ ಪೆಡ್ಲರ್(Drugs peddler) ಆಗಿರುವ ಸಂಶಯದಿಂದ ಚೈತ್ರಾ (Chaitra hebbar love jihad)ಳ ದೊಡ್ಡಪ್ಪನನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿತ್ತು. ದೊಡ್ಡಪ್ಪ ಈ ಬಗ್ಗೆ ಯುವತಿಯ ವಿಚಾರಣೆ ನಡೆಸಿದ ಮರುದಿನ, ಫೆ.17 ರಂದು ಚೈತ್ರಾ ದಿಢೀರ್ ನಾಪತ್ತೆಯಾಗಿದ್ದಾಳೆ. ಆ ಯುವಕನೇ ಚೈತ್ರಾಳನ್ನು ಅಪಹರಿಸಿರುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ.
ಲವ್ ಜಿಹಾದ್ ಆರೋಪಿಸಿ ನೈತಿಕ ಪೊಲೀಸ್ ಗಿರಿ: ಹಿಂದೂಪರ ಸಂಘಟನೆಯ 7 ಮಂದಿ ಬಂಧನ, ರುಮಾನ್ ವಿರುದ್ಧವೂ ಪ್ರತಿದೂರು
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಬಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು, ಈ ಯುವಕನೇ ಆಕೆಯನ್ನು ಅಪಹರಿಸಿರುವ ಸಾಧ್ಯತೆಯಿದೆ. ಆತನನ್ನು ತಕ್ಷಣ ಬಂಧಿಸಬೇಕು. ಮೂರು ದಿನಗಳ ಒಳಗೆ ಯುವತಿಯನ್ನು ಪತ್ತೆ ಮಾಡದೆ ಇದ್ದಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.