Pocso case: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗೆ 20 ವರ್ಷ ಸಜೆ

Published : Dec 15, 2022, 08:41 PM IST
Pocso case: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗೆ 20 ವರ್ಷ ಸಜೆ

ಸಾರಾಂಶ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಾಯಾಲಯ, ಪೋಕ್ಸೋ ತ್ವರಿತ ವಿಶೇಷ ನ್ಯಾಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಉಡುಪಿ (ಡಿ.15) : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಾಯಾಲಯ, ಪೋಕ್ಸೋ ತ್ವರಿತ ವಿಶೇಷ ನ್ಯಾಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬ್ರಹ್ಮಾವರ ನಾಲ್ಕುದ್ರು ನಿವಾಸಿ ಭಾಸ್ಕರ ನಾಯ್ಕ ಶಿಕ್ಷೆಗೊಳಪಟ್ಟ ಆರೋಪಿ. ಟ್ಯಾಕ್ಸಿಕ್ಯಾಬ್ ಬಾಡಿಗೆ ನಡೆಸುತ್ತಿದ್ದ ಈತ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಬಿಡುವ ಕೆಲಸ ಮಾಡುತ್ತಿದ್ದನು. 2020ರ ಎ.18ರಂದು ಈತ ನೊಂದ ಬಾಲಕಿಯ ಸಂಬಂಧಿಕರ ಮನೆಗೆ ಶುಭ ಸಮಾರಂಭಕ್ಕೆ ತನ್ನ ಕ್ಯಾಬ್‌ನೊಂದಿಗೆ  ಬಾಡಿಗೆಗೆ ಬಂದಿದ್ದನು. 

ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಮೊಬೈಲ್ ನಂಬರ್ ಪಡೆದು ಸಂಪರ್ಕಿಸಿದ್ದ. ಅನಂತರ ಆಕೆಯನ್ನು ಹೆದರಿಸಿ  ಸಂತೆಕಟ್ಟೆ -ಪೆರ್ಡೂರು ರಸ್ತೆ ಬದಿಯಲ್ಲಿ ತನ್ನ ವಾಹನದಲ್ಲಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದನು.

\Hassan: ಸಕಲೇಶಪುರದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: 14 ವರ್ಷದ ಬಾಲಕಿ ಗರ್ಭಿಣಿ

ಅನಂತರ ಆಕೆ ಶಾಲೆಗೆ ಹೋಗುತ್ತಿರುವಾಗ ತನ್ನ ಕ್ಯಾಬ್‌ನಲ್ಲಿ ಕರೆದೊಯ್ದು ಬಾರಕೂರು-ಹಾಲಾಡಿ ರಸ್ತೆೆ ಬದಿ ಮತ್ತು ಆಲ್ತಾರು ಕ್ರಾಸ್ ಬಳಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದನು. ವಿಚಾರವನ್ನು ಯಾರಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದನು.

ನೊಂದ ಬಾಲಕಿಯು ತಾಯಿ ಬಳಿ ವಿಚಾರ ತಿಳಿಸಿದ್ದು, ಅದರಂತೆ ದೂರು ದಾಖಲು ಮಾಡಲಾಗಿತ್ತು. ಅನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದನು. ಮಹಿಳಾ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್ ತನಿಖೆ ನಡೆಸಿದ್ದು, ಅನಂತರ ಪೊಲೀಸ್ ನಿರೀಕ್ಷಕ ಸೀತಾರಾಮ್ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Bengaluru Crime: ಅಪ್ರಾಪ್ತೆ ಮೇಲೆ ಅತ್ಯಾಚಾರ: ವೃದ್ಧನ ಹೊಡೆದು ಕೊಂದ ಕುಟುಂಬಸ್ಥರು

28 ಸಾಕ್ಷಿಗಳ ಪೈಕಿ 17 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿಪ್ರಾಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ 20ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದರು. ಪ್ರಾಸಿಕ್ಯೂಶನ್ ಪರ ಉಡುಪಿ ಪೋಕ್ಸೊ ನ್ಯಾಯಾಲಯ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ