ಮನೆಯ ಬೀಗ ಮುರಿದು ವಕೀಲ ಜಗದೀಶ್‌ ಬಂಧಿಸಿದ ಪೊಲೀಸರು

Kannadaprabha News   | Kannada Prabha
Published : Aug 23, 2025, 06:27 AM IST
Lawyer Jagadeesh live

ಸಾರಾಂಶ

ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಮ್ಮ ಮನೆಗೆ ಬೀಗ ಹಾಕಿ ಕುಳಿತಿದ್ದ ವಕೀಲ ಜಗದೀಶ್ ಅವರನ್ನು ಶುಕ್ರವಾರ ಕೊನೆಗೆ ಬೀಗ ಮುರಿದು ಒಳ ಪ್ರವೇಶಿಸಿ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಮ್ಮ ಮನೆಗೆ ಬೀಗ ಹಾಕಿ ಕುಳಿತಿದ್ದ ವಕೀಲ ಜಗದೀಶ್ ಅವರನ್ನು ಶುಕ್ರವಾರ ಕೊನೆಗೆ ಬೀಗ ಮುರಿದು ಒಳ ಪ್ರವೇಶಿಸಿ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮೂರು ದಿನಗಳ ಹಿಂದೆ ಮಂಜುನಾಥ್ ಎಂಬುವರ ನೀಡಿದ ದೂರು ಆಧರಿಸಿ ವಕೀಲ ಜಗದೀಶ್ ವಿರುದ್ಧ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಆರೋಪದ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ವಕೀಲರಿಗೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ಈ ನೋಟಿಸ್‌ಗೆ ಕ್ಯಾರೇ ಎನ್ನದೆ ಮನೆಯೊಳಗೆ ಕುಳಿತಿದ್ದ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿಗೆ ಧರ್ಮಸ್ಥಳದಲ್ಲಿ ಅನಧಿಕೃತವಾಗಿ ಮೃತದೇಹಗಳ ಹೂತ ಪ್ರಕರಣ ಕುರಿತು ಸಾಮಾಜಿಕ ಜಾಲತಾಣಗಲ್ಲಿ ವಕೀಲ ಜಗದೀಶ್ ಹೇಳಿಕೆ ನೀಡಿದ್ದರು. ಆಗ ಸಾಮಾಜಿಕ ಜಾಲತಾಣಗಳಲ್ಲಿ ಜಾತಿಗಳ ಬಗ್ಗೆ ಕೀಳ ಮಟ್ಟದ ಭಾಷೆ ಬಳಸಿ ನಿಂದಿಸಿ ಸಮಾಜದ ಶಾಂತಿಗೆ ಜಗದೀಶ್ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಮಂಜುನಾಥ್ ದೂರು ನೀಡಿದ್ದರು. ಅಲ್ಲದೆ ಇದೇ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ,ಪರಮೇಶ್ವರ್ ಬಗ್ಗೆಯೂ ಜಗದೀಶ್ ನಾಲಗೆ ಹರಿಬಿಟ್ಟಿದ್ದರು. ಈ ವಕೀಲನ ಬಗ್ಗೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ವಿಧಾನಸಭಾ ಅಧಿವೇಶನದಲ್ಲಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್‌.ವಿಶ್ವನಾಥ್ ಹಕ್ಕು ಚ್ಯುತಿ ಮಂಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಜಗದೀಶ್ ಅವರಿಗೆ ಸಂಕಷ್ಟ ಎದುರಾಗಿದೆ.

ಮನೆಯೊಳಗೆ ಅವಿತಿದ್ದ ವಕೀಲ!

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ಬಳಿಕ ಕೊಡಿಗೇಹಳ್ಳಿಯಲ್ಲಿರುವ ಮನೆಗೆ ಜಗದೀಶ್ ಅವಿತುಕೊಂಡಿದ್ದರು. ತಮ್ಮ ಮನೆಯೊಳಗೆ ಹೊರಗಿನವರು ಪ್ರವೇಶಿಸದಂತೆ ಅ‍ವರು ಬೀಗ ಹಾಕಿಕೊಂಡಿದ್ದರು. ವಿಚಾರಣೆಗೆ   ಬಾರದ ಜಗದೀಶ್ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು. ಆಗಲೂ ಮನೆ ಬೀಗ ತೆರೆಯುವಂತೆ ಎರಡ್ಮೂರು ಬಾರಿ ವಿನಂತಿಸಿದರೂ ಸಹ ಅವರು ಸ್ಪಂದಿಸಿಲ್ಲ. ಕೊನೆಗೆ ಬೀಗ ತಯಾರಿಸುವವರನ್ನು ಕರೆಸಿದ ಪೊಲೀಸರು, ಬಳಿಕ ಮನೆ ಬೀಗ ಮುರಿಸಿ ಒಳ ಪ್ರವೇಶಿಸಿದ್ದಾರೆ. ಆಗ ಪೊಲೀಸರ ಮೇಲೆ ಎಗರಾಡಿ ಜಗದೀಶ್ ದೊಡ್ಡ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ಅರಚಾಟಗಳಿಗೆ ಬಗ್ಗದ ಪೊಲೀಸರು, ಬಲವಂತವಾಗಿ ವಕೀಲರನ್ನು ಜೀಪಿಗೆ ಹತ್ತಿಸಿಕೊಂಡು ಠಾಣೆಗೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
Rapido Bike ಬುಕ್ ಮಾಡುವ ಮುನ್ನ ಎಚ್ಚರ! ರೈಡರ್ ಎಡವಟ್ಟಿಗೆ ಹಿಂಬದಿ ಕುಳಿತ ಗ್ರಾಹಕನ ಮಂಡಿ ಚಿಪ್ಪು ಪುಡಿ ಪುಡಿ!